ನೀರಾವರಿ ಯೋಜನೆಗಳ ಶೀಘ್ರ ಜಾರಿಗೆ ಮನವಿ

Team Udayavani, Aug 31, 2020, 3:57 PM IST

ನೀರಾವರಿ ಯೋಜನೆಗಳ ಶೀಘ್ರ ಜಾರಿಗೆ ಮನವಿ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ 11 ಏತ ನೀರಾವರಿ ಯೋಜನೆ ಜಾರಿಗೆ ಕರ್ನಾಟಕ ನೀರಾವರಿ ನಿಗಮ ಅನುಮತಿ ನೀಡಿದೆ. ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಯೋಜನೆಗಳು ಶೀಘ್ರ ಅನುಷ್ಠಾನವಾದರೆ ಇದೊಂದು ಇತಿಹಾಸ ಎಂದು ಹಿರಿಯ ಮುಖಂಡ ಬಿ.ಆರ್‌.ಸಂಗಪ್ಪಗೋಳ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ 11 ಏತ ನೀರಾವರಿ ಯೋಜನೆಯಿಂದ ಎರಡು ಲಕ್ಷ ಎಕರೆಗೂ ಅಧಿ ಕ ಜಮೀನಿಗೆ ನೀರಾವರಿ ಸೌಲಭ್ಯ ಸಿಗಲಿದೆ. 9.1 ಟಿಎಂಸಿ ಸಾಮರ್ಥ್ಯದ ಯೋಜನೆ ಇದಾಗಿದೆ. ಈಗಾಗಲೇ ಸರ್ವೇ ಮಾಡಲು ಏಜೆನ್ಸಿ ಗುರ್ತಿಸಲಾಗಿದೆ. ಈವರೆಗೆ ಇಂತಹ ದೊಡ್ಡ ಯೋಜನೆಯನ್ನು ಯಾರೂ ಮಾಡಿಲ್ಲ, ಅದನ್ನು ರಮೇಶ ಜಾರಕಿಹೊಳಿ ಮಾಡಿರುವುದು ರೈತಾಪಿ ಜನರಿಗೆ ದೊಡ್ಡ ಕೊಡುಗೆ ಕೊಟ್ಟಂತಾಗಿದೆ ಎಂದರು. ಚಿಕ್ಕೋಡಿ ಜಿಲ್ಲೆ ರಚನೆ ಭರವಸೆ: ಕೊರೊನಾ ಸೋಂಕು ಪ್ರಭಾವ ಕಡಿಮೆಯಾದ ಬಳಿಕ ಚಿಕ್ಕೋಡಿ ಜಿಲ್ಲೆ ರಚನೆ ಬಗ್ಗೆ ಸಿಎಂ ಬಳಿ ಚರ್ಚಿಸುತ್ತೇನೆಂದು ಸಚಿವ ರಮೇಶ ಜಾರಕಿಹೊಳಿ ಆಶ್ವಾಸನೆ ನೀಡಿದ್ದಾರೆ. ಚಿಕ್ಕೋಡಿ ಜಿಲ್ಲೆ ಮಾಡಲು ಯಾರು ಯಾರು ರಾಜಕಾರಣ ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ಸಂಗಪ್ಪಗೋಳ ಕಿಡಿಕಾರಿದರು.

ಚಿಕ್ಕೋಡಿ ಜಿಲ್ಲೆಯ ಘೋಷಣೆ ಬಗ್ಗೆ ನಾಟಕದ ಮಾತು ಹಾಗೂ ಸ್ವಚ್ಛ ಮಾತು ನನಗೆ ಅರ್ಥವಾಗುತ್ತದೆ. ಇವರಿಗೆ ರಾಜಕಾರಣ ಕಲಿಸಿದವನು ನಾನು. ಆದರೆ ರಮೇಶ್‌ ಜಾರಕಿಹೊಳಿ ಜಿಲ್ಲೆ ಮಾಡುತ್ತೇನೆಂದು ಆಶ್ವಾಸನೆ ಕೊಟ್ಟಿದ್ದಾರೆ. ಇಲ್ಲ ಅಂದರೆ ಇಲ್ಲ, ಹೂಂ ಎಂದರೆ ಹೂಂ ಎನ್ನುವ ಮಾತುಗಳನ್ನು ರಮೇಶ್‌ ಮಾತನಾಡಿದ್ದಾರೆ. ಇವರ ಮಾತುಗಳನ್ನ ಕೇಳಿದರೆ ಚಿಕ್ಕೋಡಿಯನ್ನು ಜಿಲ್ಲೆ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದರು. ಚಿಕ್ಕೋಡಿಯಲ್ಲಿ 500 ಹಾಸಿಗೆಯ ಸಿವಿಲ್‌ ಆಸ್ಪತ್ರೆ ಮಾಡಿ ಎಂದು ಸಚಿವ ರಮೇಶ ಜಾರಕಿಹೊಳಿ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಮನವಿ ಮಾಡಲಾಗಿದೆ. ಇದರಿಂದ ಅಥಣಿ, ಕಾಗವಾಡ, ರಾಯಬಾಗ, ನಿಪ್ಪಾಣಿ ಹಾಗೂ ಹುಕ್ಕೇರಿ ತಾಲೂಕಿನ ಗ್ರಾಮೀಣ ಜನರಿಗೆ ಅನುಕೂಲವಾಗುತ್ತದೆ ಎಂದರು.

ಟಾಪ್ ನ್ಯೂಸ್

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

Belagavi-SDA-Suside

Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್‌ ಪತ್ತೆ: ಪೊಲೀಸರಿಂದ ತನಿಖೆ ಚುರುಕು

lakshmi hebbalkar

Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.