ಡ್ರಗ್ಸ್ ದಂಧೆ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ
Team Udayavani, Sep 1, 2020, 1:19 PM IST
ಸಾಂದರ್ಭಿಕ ಚಿತ್ರ
ರಾಮನಗರ: ಚಿತ್ರರಂಗದ ನಟ-ನಟಿಯರು ಸೇರಿ ಡ್ರಗ್ಸ್ ಸೇವಿಸುವ ಚಟದಲ್ಲಿರುವವರನ್ನು ಮುಲಾಜಿಲ್ಲದೆ ಬಂಧಿಸಿ, ರಾಜ್ಯದ ಯುವ ಸಮುದಾಯವನ್ನು ಕಾಪಾಡಬೇಕು ಎಂದು ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು. ನಗರದಲ್ಲಿ ಡೀಸಿ ಕಚೇರಿ ಮುಂದೆ ಜಮಾಯಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರಾದ ವೆಂಕಟಾಚಲಪತಿ ಅವರಿಗೆ ಮನವಿ ಸಲ್ಲಿಸಿದರು.
ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ಮಾತನಾಡಿ, ಶಬ್ದವೇದಿ ಚಿತ್ರದ ಮೂಲಕ ವರನಟ ಡಾ.ರಾಜ್‌ಕುಮಾರ್ ಮಾದಕ ವಸ್ತುಗಳ ಬಳಕೆ ವಿರೋಧಿಸಿದ್ದಾರೆ. ಜನತೆಗೆ ಅತ್ಯುತ್ತಮ ಸಂದೇಶ ರವಾನಿಸಿದ್ದಾರೆ. ಆದರೆ, ಇಂದು ಚಿತ್ರರಂಗದ ನಟ-ನಟಿಯರು ಮಾದಕ ವಸ್ತುಗಳ ಸೇವನೆ ಮಾಡುತ್ತಿದ್ದಾರೆ ಎಂಬುದು ನಾಚಿಕೆಗೇಡಿನ ಸಂಗತಿ. ಇವರಿಗೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳಿದ್ದು, ಅನುಕರಿಸಲು ಪ್ರಯತ್ನಿ ಸುತ್ತಾರೆ. ಪೊಲೀಸ್ ಇಲಾಖೆ ಯಾರ ಮುಲಾಜಿಗೂ ಒಳಗಾಗದೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದರು.
ಡ್ರಗ್ ಮಾಯಾ ಹಲವಾರು ವರ್ಷಗಳಿಂದ ಅಸ್ಥಿತ್ವದಲ್ಲಿದೆ. ಇದರ ಬಗ್ಗೆ ತಮಗೆ ಮಾಹಿತಿ ಇದೆ ಎಂದಿರುವ ಇಂದ್ರಜಿತ್ ಲಂಕೇಶ್, ಇಷ್ಟು ದಿನ ಮೌನವಹಿಸಿರುವುದು ಸರಿಯಲ್ಲ. ಡ್ರಗ್ ಮಾಫಿಯಾದಲ್ಲಿ ತೊಡಗಿಸಿಕೊಂಡವರಷ್ಟೇ ತಪ್ಪಿತಸ್ಥರಲ್ಲ, ಅದರ ಸತ್ಯ ತಿಳಿದಿದ್ದರೂ ಮೌನವಾಗಿದ್ದವರು ತಪ್ಪಿತಸ್ಥರೇ. ಮಾಹಿತಿ ಕೊಡಲು ಇಚ್ಚಿಸಿರುವ ಅವರಿಗೆ ಪೊಲೀಸರು ರಕ್ಷಣೆ ಕೊಡಬೇಕು ಎಂದರು.
ಜಿಲ್ಲಾಧ್ಯಕ್ಷ ಬೇವೂರು ಯೋಗೀಶ್‌ಗೌಡ, ರಾಜ್ಯ ಉಪಾಧ್ಯಕ್ಷ ಬೆಂಕಿ ಶ್ರೀಧರ್, ಯುವ ಘಟಕದ ಉಪಾಧ್ಯಕ್ಷ ರಂಜಿತ್‌ಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ನರಸಿಂಹ ಮಾರ್ಚನಹಳ್ಳಿ, ಚಿಕ್ಕಬಳ್ಳಾ ಪುರ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಪದಾಧಿಕಾರಿಗಳಾದ ವೆಂಕಟರಮಣ ಸ್ವಾಮಿ, ಚಂದನ್, ಚಿಕ್ಕಣ್ಣಪ್ಪ, ಕುಮಾರ್, ರಮೇಶ್, ರಾಜಣ್ಣ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.