ಮರ ಕಳವು: ರೈತ ಸಂಘ ಆರೋಪ
Team Udayavani, Sep 1, 2020, 2:22 PM IST
ಶ್ರೀರಂಗಪಟ್ಟಣ: ತಾಲೂಕಿನ ಕೆ.ಶೆಟ್ಟಹಳ್ಳಿ ಮೀಸಲು ಅರಣ್ಯ ಇತರೆಡೆ ಅರಣ್ಯ ಇಲಾಖೆ ಸಿಬ್ಬಂದಿಯೇ ಮರಗಳನ್ನು ಕಡಿದು ಮಾರಾಟ ಮಾಡುತ್ತಿದ್ದಾರೆ ಎಂದು ರೈತ ಸಂಘ ಹಾಗೂ ದಲಿತ ಸಂಘರ್ಷ ಸಮಿತಿ ಮುಖಂಡರು ಆರೋಪಿಸಿದರು.
ತಾಲೂಕಿನ ಕೆ.ಶೆಟ್ಟಹಳ್ಳಿ ಮೀಸಲು ಅರಣ್ಯದಲ್ಲಿ, ಗುರುತು ಮಾಡದ ಮರಗಳನ್ನು ಕಡಿದಿರುವ ಸ್ಥಳಕ್ಕೆ ತೆರಳಿ ವೀಕ್ಷಿಸಿದ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು, ಅರಣ್ಯಾ ಅಧಿಕಾರಿಗಳ ವಿರುದ್ಧ ಆರೋಪ ಮಾಡಿದರು. ಬೆಲೆ ಬಾಳುವ ಮರಗಳನ್ನು ಕಡಿದು ಖಾಸಗಿ ವಾಹನದಲ್ಲಿ ಸಾಗಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಕಡಿದು ಇಟ್ಟಿರುವ ಇನ್ನೂ ಸಾಕಷ್ಟು ಮರಗಳು ಬಿದ್ದಿವೆ. ನಿಯಮಾನುಸಾರ ಕಡಿದ ಮರಗಳಿಗೆ ಸಂಖ್ಯೆ ಹಾಕದೆ ಮರ ಕಡಿದು ಹಾಕಿರುವುದು ಕಂಡುಬಂದಿದೆ. ತನಿಖೆ ನಡೆಸಬೇಕು ಎಂದು ಮೋಹನಕುಮಾರ್ ಆಗ್ರಹಿಸಿದರು.
ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜೇಶ್‌ಗೌಡ ಮಾತನಾಡಿ, ತಾಲೂಕಿನಲ್ಲಿ ಎರಡು ವರ್ಷಗಳಿಂದ ಬೆಲೆ ಬಾಳುವ ಮರಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳೇ ಕಡಿದು ಸಾಗಿಸುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಅಪರೂಪದ ರಕ್ತ ಚಂದನ ಮರಗಳ ಕಳವು ನಡೆದಿರುವ ಶಂಕೆ ಇದೆ. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ತಿಳಿಸಿದರು. ವಲಯ ಅರಣ್ಯಾಧಿಕಾರಿ (ಆರ್ ಎಫ್ಒ) ಸುನೀತಾ ಪ್ರತಿಕ್ರಿಯಿಸಿ, ಅರಣ್ಯ ಇಲಾಖೆ ಸಿಬ್ಬಂದಿ ಮರ ಕಳವು ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ವನ ಪಾಲಕರಿಂದ ಮಾಹಿತಿ ಪಡೆಯುತ್ತೇನೆ. ಅಗತ್ಯವಿದ್ದರೆ ಖದ್ದು ಸ್ಥಳ ಪರಿಶೀಲನೆ ನಡೆಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.