ಸಿಟಿ ರವಿ ಅಧಿಕಾರದ ಮತ್ತಿನಲ್ಲಿದ್ದಾರೆ! ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು; HDK
Team Udayavani, Sep 1, 2020, 4:51 PM IST
ಬೆಂಗಳೂರು : ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು ಎಂದು ಸಿಟಿ ರವಿ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ .
ಕುಮಾರಸ್ವಾಮಿ ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಸಿಟಿ ರವಿ ವಿರುದ್ಧ ಗರಂ ಆಗಿದ್ದು ಸರಣಿ ಟ್ವೀಟ್ ಮಾಡಿದ ಅವರು ನಾನು ಮುಖ್ಯಮಂತ್ರಿ ಆಗಿದ್ದಾಗ ಕ್ರಿಕೆಟ್ ಬೆಟ್ಟಿಂಗ್, ಮಾದಕ ದ್ರವ್ಯ, ಮೀಟರ್ ಬಡ್ಡಿ ಹತ್ತಿಕ್ಕಲು ವಿಶೇಷ ತಂಡ ರಚಿಸಿದ್ದೆ. ಇದರಿಂದ ಕನಲಿ ಹೋಗಿದ್ದ ದಂಧೆಕೋರರು ಶ್ರೀಲಂಕಾ ಹಾಗೂ ಮುಂಬೈಗೆ ಹಾರಿ ಹೋಗಿದ್ದರು. ಆಮೇಲೆ ಶಾಸಕರನ್ನು ಮುಂಬೈಗೆ ಕರೆದೊಯ್ಯುವಾಗ ಶಾಸಕರ ಜೊತೆ ಕಂಪನಿ ಕೊಟ್ಟಿದ್ದರು ಎಂದ ಹೆಚ್ ಡಿಕೆ ಸಿ.ಟಿ. ರವಿ ಬೇರೆಯವರ ಬಗ್ಗೆ ಮಾತನಾಡಿದಂತೆ ನನ್ನ ಬಗ್ಗೆ ಮಾತನಾಡಿದರೆ ನಾನು ಸುಮ್ಮನಿರಲ್ಲ. ಅಧಿಕಾರದಲ್ಲಿ ಇರುವ ಸಚಿವರು ಮಾತಿನಲ್ಲಿ ನಿಗಾ ಇಡುವುದು ಒಳಿತು ಎಂದಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್, ಮಾಫಿಯಾ ಬಳಸಿಕೊಂಡೇ ನಮ್ಮ ಸರಕಾರದಲ್ಲಿದ್ದ ಶಾಸಕರನ್ನು ಬಿಜೆಪಿಯವರು ಬುಕ್ ಮಾಡಿಕೊಂಡಿದ್ದರು ಎಂಬುದು ಗುಟ್ಟಾಗಿ ಉಳಿದಿಲ್ಲ. ಕೆಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಎರಡು ಗಂಟೆಗೊಂದು ವಿಶೇಷ ವಿಮಾನದ ಮೂಲಕ ಕರೆದುಕೊಂಡು ಹೋದಾಗ ಯಾರು ಜೊತೆಯಲ್ಲಿ ಇದ್ದರು ಎಂಬುದು ಇಡೀ ನಾಡಿಗೆ ಗೊತ್ತಿದೆ. ಶಾಸಕರನ್ನು ಖರೀದಿ ಮಾಡಿ, ಕ್ರಿಕೆಟ್ ಬೆಟ್ಟಿಂಗ್, ಡ್ರಗ್ ಮಾಫಿಯಾದ ಪಾಪದ ಹಣವನ್ನು ಚೆಲ್ಲಿ ಸರ್ಕಾರ ಉಳಿಸಿಕೊಳ್ಳುವ ವ್ಯಕ್ತಿ ನಾನಲ್ಲ. ಅಂತಹ ಕುಕೃತ್ಯಕ್ಕೆ ಇಳಿಯುವ ಜಾಯಮಾನ ನನ್ನದಾಗಿದ್ದರೆ ನನ್ನ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿರಲಿಲ್ಲ.
ಖಜಾನೆಗೆ 25 ಸಾವಿರ ಕೋಟಿ ಹಣವನ್ನು ಸಂಗ್ರಹಿಸಿ ರೈತರ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿ ನಾನು. ಹೀಗಾಗಿ ಲೂಟಿ ಮಾಡಿದವರು ಅಧಿಕಾರದ ಅಮಲಿನಲ್ಲಿ ತೇಲಾಡುವಾಗ ಬಾಯಿಗೆ ಬಂದಂತೆ ಮಾತನಾಡುತ್ತಿರುವುದನ್ನು ಕೇಳಿಸಿಕೊಳ್ಳಬೇಕಾಗಿಲ್ಲ.
ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬಂದ ಈ ಸರ್ಕಾರಕ್ಕೆ ಪ್ರಕೃತಿಯು ಸಹಕರಿಸುತ್ತಿಲ್ಲ. ಜನರ ದುಃಖ ದುಮ್ಮಾನಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ. ಅದು ಬಿಟ್ಟು ಬಾಯಿ ಚಪಲಕ್ಕೆ ಮಾತನಾಡುವ ಅಧಿಕಾರದ ಅಮಲು ಬಹಳ ಕಾಲ ಉಳಿಯುವುದಿಲ್ಲ ಎಂದು ಗುಡುಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.