ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆದಿಜಾಂಬವ ಸಂಘ ಪ್ರತಿಭಟನೆ

Team Udayavani, Sep 1, 2020, 4:50 PM IST

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆದಿಜಾಂಬವ ಸಂಘ ಪ್ರತಿಭಟನೆ

ಧಾರವಾಡ: ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭಿವೃದ್ಧಿ ಕಾಮಗಾರಿಗಳಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳು ದುರ್ಬಳಕೆ ಆಗಿರುವುದನ್ನು ಖಂಡಿಸಿ ರಾಜ್ಯ ಆದಿಜಾಂಬವ (ಮಾದರ) ಸಂಘದ ನೇತೃತ್ವದಲ್ಲಿ ಡಿಸಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಕಡಪಾ ಮೈದಾನದಿಂದ ಡಿಸಿ ಕಚೇರಿವರೆಗೆ ಸಂಘದ ನೇತೃತ್ವದಲ್ಲಿ ಎಸ್‌ಸಿ-ಎಸ್‌ಟಿ ಸಮುದಾಯದಿಂದ ಪ್ರತಿಭಟನಾ ರ್ಯಾಲಿ ಕೈಗೊಳ್ಳಲಾಯಿತು. ಬಳಿಕ ಡಿಸಿ ಕಚೇರಿ ಎದುರು ಧರಣಿ ಕೈಗೊಂಡು ಜಿಲ್ಲಾಡಳಿತ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಲೋಕೋಪಯೋಗಿ ಇಲಾಖೆ, ಜಿಪಂ, ಸಣ್ಣ ನೀರಾವರಿ, ಹು-ಧಾ ಮಹಾನಗರ ಪಾಲಿಕೆ ಹಾಗೂ ಇನ್ನುಳಿದ ಎಲ್ಲ ಇಲಾಖೆಗಳಲ್ಲಿ ಎಸ್‌ಸಿಪಿ/ಟಿಎಸ್‌ಪಿ, ಶಾಸನ ಬದ್ಧ ಅನುದಾನ ದುರುಪಯೋಗ ಮಾಡಿದ ಅಧಿಕಾರಿಗಳ ಮೇಲೆ ಕೂಡಲೇ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಬಗರಹುಕುಂ ಭೂಮಿ ಸಾಗುವಳಿ ಮಾಡಿದ ಪಜಾ/ಪಪಂ ಜನರಿಗೆ ಕೂಡಲೇ ಸಾಗುವಳಿ ಚೀಟಿ ವಿತರಿಸಬೇಕು ಎಂದು ಆಗ್ರಹಿಸಲಾಯಿತು.

ಸರ್ವೇ ಮಾಡಿ ಮನೆಯಿಲ್ಲದವರಿಗೆ ಕೂಡಲೇ ನಿವೇಶನ ಮತ್ತು ಮನೆಗಳನ್ನು ನೀಡಬೇಕು. ಪಜಾ/ಪಪಂ ಜನರ ಭೂಮಿಯನ್ನು ಕೆಐಎಡಿಬಿಗೆ ಸರಕಾರ ಭೂಸ್ವಾಧೀನ ಮಾಡಿಕೊಂಡಿದ್ದು, ಅವರಿಗೆ ಭೂ ಮಂಜೂರಾತಿ ಮಾಡದೇ ಜಮೀನು ವಶಪಡಿಸಿಕೊಂಡಿದೆ. ಇದು ಕಾನೂನುಬಾಹಿರವಾಗಿದ್ದು, ಅಂತಹ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಮೊಕದ್ದಮೆ ಹೂಡಬೇಕು. ಹು-ಧಾ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ನೇಮಕ ಪ್ರಕ್ರಿಯೆ ನೀಡಬೇಕು ಎಂದು ಒತ್ತಾಯಿಸಲಾಯಿತು.

ಕವಿವಿ, ಕೃವಿವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿವಿಗಳಲ್ಲಿ ಎಸ್‌ಸಿಪಿ/ಟಿಎಸ್‌ಪಿ ಅನುದಾನ ದುರ್ಬಳಕೆಯಾಗಿದೆ. ಇದನ್ನು ಕೂಡಲೇ ಉನ್ನತ ಮಟ್ಟದ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕ್ರಿಮಿನಲ್‌ ಮೊಕದ್ದಮೆ ಮಾಡಬೇಕು. ಸಮಾಜ ಕಲ್ಯಾಣ ಇಲಾಖೆ ಎಲ್ಲಯೋಜನೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪಜಾ/ಪಪಂ ಗುತ್ತಿಗೆದಾರರಿಗೆ ಟೆಂಡರ್‌ ನೀಡಬೇಕು. ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಪಜಾ/ಪಪಂ ಸಮುದಾಯದವರಿಗೆ ಪ್ರತ್ಯೇಕ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಲಾಯಿತು.

ಮಾಜಿ ಸಚಿವ ಅಲ್ಕೋಡ್‌ ಹನುಮಂತಪ್ಪ, ಜಿಲ್ಲಾಧ್ಯಕ್ಷ ಅಶೋಕ ದೊಡಮನಿ, ವೆಂಕಟೇಶ ಸಗಬಾಲ, ಶಂಕರ ದೊಡಮನಿ, ಕಲ್ಮೇಶ ಹಾದಿಮನಿ, ಸಂಗಮೇಶ ಮಾದರ, ಬಸವರಾಜ ಮಾದರ ಇನ್ನಿತರರಿದ್ದರು.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.