ಕಲ್ಪತರುನಾಡಲ್ಲಿ ಅಕ್ಟೋಬರ್ ವೇಳೆಗೆ 10 ಸಾವಿರ ಸೋಂಕು! ದಿನೇ ದಿನೆ ಹೆಚ್ಚಾಗುತ್ತಿರುವ ಸೋಂಕು
Team Udayavani, Sep 3, 2020, 10:47 AM IST
ತುಮಕೂರು: ಮಳೆಗಾಲದಲ್ಲಿ ಕಲ್ಪತರು ನಾಡಿನ ಜನರಲ್ಲಿ ಸಹಜವಾಗಿ ಕಾಣಿಸಿಕೊಳ್ಳುತ್ತಿದ್ದ ಮಲೇರಿಯಾ, ಡೆಂಗ್ಯೂ,
ಚಿಕೂನ್ ಗುನ್ಯಾ, ಕರಳು ಬೇನೆಯಂತಹ ಸಾಂಕ್ರಾಮಿಕ ರೋಗಗಳನ್ನು ಹಿಂದಿಕ್ಕಿ ಕೋವಿಡ್ ವೈರಸ್ ಅಟ್ಟಹಾಸ ಮೆರೆಯುತ್ತಿದೆ.
ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ದಿನೇ ದಿನೆ ವೇಗವನ್ನು ಹೆಚ್ಚಳ ಮಾಡಿಕೊಳ್ಳುತ್ತಲಿದೆ. ಸೋಂಕಿನಿಂದ ಮೃತಪಡುವವರ
ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ಈವರೆಗೆ ಸೋಂಕಿಗೆ ಜಿಲ್ಲೆಯಲ್ಲಿ 169 ಮಂದಿ ಮೃತಪಟ್ಟಿದ್ದಾರೆ.
ಹತ್ತು ಸಾವಿರಕ್ಕೇರಿಕೆ: ದಿನೇ ದಿನೆ ಬರುತ್ತಿರುವ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಒಂದು ದಿನಕ್ಕೆ ಕನಿಷ್ಠ 150 ರಿಂದ 200
ಸೋಂಕಿತರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಸೆ.1ರ ವರೆಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು 6148 ಇದ್ದು, ಇದೇ ರೀತಿ
ಜಿಲ್ಲೆಯಲ್ಲಿ ಕೋವಿಡ್ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಾ ಹೋದರೆ ಅಕ್ಟೋಬರ್ ವೇಳೆಗೆ ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು
ಸೋಂಕಿತರಾಗುವ ಸಾಧ್ಯತೆ ನಿಶ್ಚಳವಾಗಿದೆ.
ಸೋಂಕು ಹೆಚ್ಚಳ: ಈಗ ಬರುತ್ತಿರುವ ಅಂಕಿ ಅಂಶಗಳನ್ನು ಗಮನಿಸಿದರೆ ಈ ಕೋವಿಡ್ ವೈರಸ್ ಈಗ ಹಳ್ಳಿಗಳಲ್ಲಿಯೇ ಹೆಚ್ಚು
ಸೋಂಕು ವ್ಯಾಪಿಸಿದ್ದು ಅಲ್ಲಿಯೇ ಸಾವಿನ ಪ್ರಮಾಣವೂ ಹೆಚ್ಚುತ್ತಿದೆ. ಒಂದು ಗ್ರಾಮದಲ್ಲಿ ಒಬ್ಬರಿಗೆ ಬಂದರೆ ಸುತ್ತಮುತ್ತ ವ್ಯಾಪಿಸುತ್ತಿದೆ, ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಸರ್ಕಾರಿ ಇಲಾಖೆಗಳ ನೌಕರರಿಗೆ ಕೋವಿಡ್ ದೃಢವಾಗುತ್ತಲೇ ಇದೆ.
4375 ಮಂದಿ ಗುಣಮುಖ: ತುಮಕೂರು ಕೋವಿಡ್-19 ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ಒದಗಿಸುವಲ್ಲಿ ಜಿಲ್ಲೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಈವರೆಗೆ ಒಟ್ಟು 6148 ಮಂದಿ ಆಸ್ಪತ್ರೆಗೆ ಸೇರಿರುವ ಸೋಂಕಿತರಲ್ಲಿ 4375 ಮಂದಿ ಗುಣಮುಖರಾಗಿ ತಮ್ಮ ಮನೆಗೆ ತೆರಳಿದ್ದಾರೆ ಎನ್ನುವುದು ಸಮಾಧಾನದ ವಿಷಯವಾಗಿದೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ: ಗುಣಮುಖರಾದ ಸೋಂಕಿತರಲ್ಲಿ ಮತ್ತೂಮ್ಮೆ ಸೋಂಕು ದೃಢಪಡುವ ಸಾಧ್ಯತೆಯಿರುವುದ ರಿಂದ ಅವರೂ ಮುಂಜಾಗ್ರತೆಯಿಂದಿರ ಬೇಕು. ತಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು, ಸರ್ಕಾರದ ಮಾರ್ಗಸೂಚನೆಗಳನ್ನು ಅನುಸರಿಸುವುದರಿಂದ ರೋಗ ಹರಡುವಿಕೆಯನ್ನು ನಿಯಂತ್ರಿಸಬಹುದು ಎನ್ನುತ್ತಾರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.