ಬುಡಕಟ್ಟು ಸಮುದಾಯದ ಏಳಿಗೆಗೆ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕೆ ಕೇಂದ್ರ ಸರ್ಕಾರ ಮೆಚ್ಚುಗೆ

Team Udayavani, Sep 3, 2020, 6:12 PM IST

ಬುಡಕಟ್ಟು ಸಮುದಾಯದ ಏಳಿಗೆಗೆ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕೆ ಕೇಂದ್ರ ಸರ್ಕಾರ ಮೆಚ್ಚುಗೆ

ಬೆಂಗಳೂರು : ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಕೇಂದ್ರ ಪುರಸ್ಕೃತ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಕೇಂದ್ರ ಸರ್ಕಾರವು ಮೆಚ್ಚುಗೆ ವ್ಯಕ್ತಪಡಿಸಿದೆ. ಬುಡಕಟ್ಟು ಸಮುದಾಯದ ಏಳಿಗೆಗೆ ಪೂರಕವಾಗಿ ಮತ್ತಷ್ಟು ಯೋಜನೆಗಳನ್ನು ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಕೇಂದ್ರ ಬುಡಕಟ್ಟು ಸಚಿವರಿಗೆ ತಿಳಿಸಿದರು.

ಕೇಂದ್ರ ಬುಡಕಟ್ಟು ಸಚಿವರಾದ ಶ್ರೀ ಅರ್ಜುನ್ ಮುಂಡ ಅವರೊಂದಿಗೆ ವಿಡಿಯೋ ಸಂವಾದದ ಮೂಲಕ ರಾಜ್ಯ ಸರ್ಕಾರವು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ವಿವರಿಸಿದ ಡಿಸಿಎಂ, ಬುಡಕಟ್ಟು ಜನರು ವಾಸಿಸುವ ಅರಣ್ಯ ಪ್ರದೇಶಗಳಲ್ಲಿರುವ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಮೂಲಭೂತಸೌಕರ್ಯಗಳನ್ನು ಒದಗಿಸಲಾಗಿದೆ. ಕಲ್ಯಾಣ ಕರ್ನಾಟಕದ 10 ಸಂಚಾರಿ ಆರೋಗ್ಯ ಘಟಕಗಳನ್ನು ಪ್ರಾರಂಭಿಸಲಾಗುವುದು. ವಿಜ್ಞಾನ ಮತ್ತು ತಂತ್ರಜ್ಞಾನ ವನ್ನು ಬಳಕೆ ಮಾಡಿಕೊಂಡು ಸಮುದಾಯದ ಪಾಲುಗೊಳ್ಳುವಿಕೆಯೊಂದಿಗೆ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತದೆ. ರಾಜ್ಯದ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳ ಸಮುದಾಯ ಆರೋಗ್ಯ ಕೋಶದಡಿ ಬುಡಕಟ್ಟು ಆರೋಗ್ಯ ಘಟಕವನ್ನು ಪ್ರಾರಂಭಿಸಲಾಗುವುದು. ರಾಜ್ಯದಲ್ಲಿರುವ 10 ವೈದ್ಯಕೀಯ ಮಹಾವಿದ್ಯಾಲಯ ಅಥವಾ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಧರ್ಮಶಾಲೆ ಪ್ರಾರಂಭಿಸಿ, ಆದಿವಾಸಿ ಆರೋಗ್ಯ ಕಾರ್ಯಕರ್ತರನ್ನು ನೇಮಿಸಲಾಗುವುದು.

ಬುಡಕಟ್ಟು ಜನರ ಪರಂಪರಿಕ ವೈದ್ಯಪದ್ದತಿಗಳನ್ನು ದಾಖಲೀಕರಣ ಮತ್ತು ಆಯ್ದ ಔಷಧಿಗಳ ತಯಾರಿಕೆಗೆ ಅಗತ್ಯ ಮೂಲಭೂತಸೌಕರ್ಯಗಳನ್ನು ಒದಗಿಸಲಾಗುವುದು. ಕಿರಿ ಅರಣ್ಯ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಒದಗಿಸುವ ಕಾರ್ಯಕ್ರಮದಡಿ ಲ್ಯಾಂಪ್ಸ್ ಸಹಕಾರ ಸಂಘಗಳಿಗೆ ನೆರವು ನೀಡಲಾಗುವುದು. 19 ಪ್ರಧಾನ ಮಂತ್ರಿ ವನ-ಧನ ಕೇಂದ್ರ (ಪಿಎಂವಿಡಿವಿಕೆ)ಗಳನ್ನು ಸ್ಥಾಪಿಸಲಾಗಿದ್ದು, ಪ್ರತಿಕೇಂದ್ರಕ್ಕೆ ತಲಾ 15 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಬುಡಕಟ್ಟು ಜನರು ಸಂಗ್ರಹಿಸುವ ಕಿರು ಅರಣ್ಯ ಉತ್ಪನ್ನಗಳನ್ನು ಸಂಸ್ಕರಿಸಿ, ಮೌಲ್ಯವರ್ಧಿಸಿ ಮಾರುಕಟ್ಟೆ ಒದಗಿಸಲು ಮೈಸೂರಿನ ಸಿಎಫ್‍ಟಿಆರ್ ಐ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯೊಂದಿಗೆ ನಾನ್ ಟಿಂಬರ್ ಫಾರೆಸ್ಟ್ ಪ್ರೊಡೆಕ್ಟ್ ಕಲೆಕ್ಟರ್ ಎಂಟರ್ಪ್ರೈಸಸ್ ಅನ್ನು ಸ್ಥಾಪಿಸಲಾಗುತ್ತಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ನಾಗಪೂರ್ ಬಳಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿಗೊಂಡ 228 ಕುಟುಂಬಗಳ ರೈತ ಉತ್ಪಾದಕರ ಸಂಸ್ಥೆ ಸ್ಥಾಪಿಸಲು ಸಮೀಕ್ಷೆ ಕಾರ್ಯ ನಡೆಯುತ್ತಿದೆ. 2667 ಕುಟುಂಬಗಳಿಗೆ ಹೈನುಗಾರಿಕೆ, ಕುರಿ, ಮೇಕೆ, ಗೂಡ್ಸ್ ವಾಹನ ಸೇರಿದಂತೆ ಇತರ ಜೀವನೋಪಾಯ ಕಾರ್ಯಕ್ರಮಗಳಿಗೆ 21 ಕೋಟಿ ರೂ. ನೆರವು ನೀಡಲಾಗಿದೆ. ಬಿಳಿಗಿರಿ ರಂಗನ ಬೆಟ್ಟದಲ್ಲಿನ ಅರಣ್ಯ ಹಕ್ಕು ಅಧಿನಿಯಮದಡಿ ಹಕ್ಕು ಪತ್ರ ಪಡೆದಿರುವ 448 ಕುಟುಂಬಗಳು ಇಲಾಖೆಯ ನೆರವಿನೊಂದಿಗೆ ರೈತ ಉತ್ಪಾದನಾ ಸಂಸ್ಥೆಯನ್ನು ಸ್ಥಾಪಿಸಿ, ಕಾಫಿ ಬೋರ್ಡ್ ನ ತಾಂತ್ರಿಕ ಸಹಾಯದಿಂದ ಕಾಫಿ ಮತ್ತು ಮೆಣಸು ಬೆಳೆಗಳಿಗೆ ಪ್ರೋತ್ಸಾಹಿಸಿ ಈ ಕುಟುಂಬಗಳ ಆದಾಯವನ್ನು ಶೇ. 16 ರಿಂದ ಶೇ.43 ರಷ್ಟು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಬುಡಕಟ್ಟು ಸಮುದಾಯದವರಿಗೆ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಅತ್ಯುತ್ತವಾಗಿವೆ ಎಂದು ಕೇಂದ್ರ ಬುಡಕಟ್ಟು ಕಲ್ಯಾಣ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಶ್ರೀ ಸಂಗಪ್ಪ ಸಂವಾದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.