ಮಂಗಳೂರು ಐಟಿ ಕಚೇರಿಯ ವಿಭಾಗ ಗೋವಾಕ್ಕೆ ಎತ್ತಂಗಡಿ

ಕರಾವಳಿಯ ತೆರಿಗೆದಾರರಿಗೆ ಮತ್ತೂಂದು ಅನ್ಯಾಯ

Team Udayavani, Sep 4, 2020, 6:25 AM IST

ಮಂಗಳೂರು ಐಟಿ ಕಚೇರಿಯ ವಿಭಾಗ ಗೋವಾಕ್ಕೆ ಎತ್ತಂಗಡಿ

ಸಾಂದರ್ಭಿಕ ಚಿತ್ರ

ಉಡುಪಿ: ವಿಶೇಷ ಆರ್ಥಿಕ ವಲಯ ಸಹಿತ ಸಾವಿರಾರು ಉನ್ನತ ಉದ್ಯಮಗಳನ್ನು ಹೊಂದಿರುವ ಮಂಗಳೂರು, ತನ್ನಲ್ಲಿರುವ ಆದಾಯ ತೆರಿಗೆ ಪ್ರಧಾನ ಆಯುಕ್ತ (ಪಿಸಿಐಟಿ)ರ ಕಚೇರಿಯನ್ನು ಕಳೆದುಕೊಳ್ಳಲಿದೆ. ಕೇಂದ್ರ ಸರಕಾರದ ಸೂಚನೆಯಂತೆ ಮಂಗಳೂರಿನ ಕಚೇರಿಯು ಗೋವಾ ಕಚೇರಿಯೊಂದಿಗೆ ವಿಲೀನಗೊಳ್ಳ ಲಿದೆ. ಒಂದುವೇಳೆ ಹೀಗಾದರೆ ಕರಾವಳಿಯ ತೆರಿಗೆದಾರರು ಗೋವಾಕ್ಕೆ ಅಲೆಯಬೇಕಾದ ಸ್ಥಿತಿ ಉದ್ಭವಿಸಲಿದೆ. ಪ್ರಸ್ತುತ ಕರಾವಳಿಯ ತೆರಿಗೆ ದಾರರು ಆಕ್ಷೇಪಿತ ತೆರಿಗೆ ಪರಿಷ್ಕರಣೆ ಮತ್ತು ಇತರ ತೆರಿಗೆ ಸಂಬಂಧಿ ಕೆಲಸಗಳಿಗಾಗಿ ಈ ಕಚೇರಿಯನ್ನು ಆಶ್ರ ಯಿಸಿ ದ್ದಾರೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಈ ಕಚೇರಿ ಒಳಗೊಂಡಿದೆ.

ಕರಾವಳಿಯಲ್ಲಿ ದೊಡ್ಡ ಮಟ್ಟದ ವ್ಯಾಪಾರ ಕೇಂದ್ರಗಳು, ಕೈಗಾರಿಕೆಗಳಿದ್ದು, ದೇಶದಲ್ಲಿ ಅತೀ ವೇಗವಾಗಿ ಬೆಳೆಯು ತ್ತಿರುವ ಜಿಲ್ಲೆಗಳಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿವೆ. ಬೆಂಗಳೂರಿನ ಅನಂತರ ಉದ್ಯಮ ಸ್ಥಾಪನೆಗೆ ಉತ್ತಮ ವಾತಾವರಣ ಈ ಜಿಲ್ಲೆಗಳು ಹೊಂದಿವೆ. ಜತೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಸುಮಾರು 4 ಲಕ್ಷ ಮಂದಿ ತೆರಿಗೆದಾರರು ವಾರ್ಷಿಕ 3,300 ಕೋ.ರೂ. ತೆರಿಗೆ ಪಾವತಿಸುತ್ತಿದ್ದಾರೆ. ರಾಜ್ಯದಲ್ಲಿ ತೆರಿಗೆ ಪಾವತಿಯಲ್ಲಿ ಮೊದಲ ಸ್ಥಾನ ಬೆಂಗಳೂರಿಗೆ, ದ್ವಿತೀಯ ಸ್ಥಾನ ಮಂಗಳೂರಿಗಿದ್ದರೆ, ಹುಬ್ಬಳ್ಳಿ ತೃತೀಯ ಸ್ಥಾನದಲ್ಲಿದೆ.

ಕರಾವಳಿಗೆ ಮತ್ತೆ ಅನ್ಯಾಯ
ಈಗಾಗಲೇ ರೈಲ್ವೇ ವಲಯ ಸೇರಿದಂತೆ ಹಲವು ಬೇಡಿಕೆ ಗಳ ಈಡೇರಿಕೆಗಾಗಿ ಕರಾವಳಿಗರು ಸರಕಾರಗಳ ಎದುರು ಆಗ್ರಹಿಸುತ್ತಲೇ ಇದ್ದಾರೆ. ಅವು ಈಡೇರುವ ಮೊದಲೇ, ಮತ್ತೂಂದು ಮಹತ್ವದ ಕಚೇರಿಯನ್ನು ಕಳೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣ ವಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕೇವಲ ಮೂರು (ಬೆಂಗಳೂರು, ಹುಬ್ಬಳ್ಳಿ, ಮಂಗಳೂರು) ಪಿಸಿಐಟಿ ಕಚೇರಿಗಳಿವೆ. ಈ ಸಂಖ್ಯೆಯೂ ಇತರ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ. ವಾಸ್ತವ ಹೀಗಿರುವಾಗ ಇರುವ ಒಂದು ಪ್ರಮುಖ ಕಚೇರಿಯನ್ನೂ ಬೇರೆ ರಾಜ್ಯದ ಕೇಂದ್ರದೊಂದಿಗೆ ವಿಲೀನಗೊಳಿಸುವುದು ಸರಿಯಲ್ಲ. ಇದರ ವಿರುದ್ಧ ಜನಪ್ರತಿನಿಧಿಗಳು ಧ್ವನಿ ಎತ್ತಬೇಕು ಮತ್ತು ಕಚೇರಿಯನ್ನು ಶತಾಯಗತಾಯ ಉಳಿಸಿಕೊಳ್ಳಬೇಕು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗತೊಡಗಿದೆ.

ಒಂದೆಡೆ ಪ್ರೋತ್ಸಾಹ, ಮತ್ತೂಂದೆಡೆ ಸಮಸ್ಯೆ
ಕೈಗಾರಿಕೆಗಳ ಸಂಖ್ಯೆ ಹೆಚ್ಚಿ ಜನರಿಗೆ ಉದ್ಯೋಗ ದೊರಕಬೇಕು. ಅದಕ್ಕೆ ಪೂರಕ ಉದ್ಯಮಸ್ನೇಹಿ ವಾತಾವರಣ ನಿರ್ಮಿಸಲು ಸರಕಾರ ಒಂದೆಡೆ ಒದ್ದಾಡುತ್ತಿದ್ದರೆ, ಮತ್ತೂಂದೆಡೆ ಇರುವ ಉದ್ಯಮಗಳಿಗೆ ಸಿಗುತ್ತಿದ್ದ ಹೊಸ ಹೊಸ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡುವ
ಆಯುಕ್ತರ ಕಚೇರಿಯನ್ನು ವಿಲೀನಗೊಳಿಸಲಾಗುತ್ತಿದೆ. ಇದು ಸೂಕ್ತವಾದು ದಲ್ಲ. ಹೊಸ ಯೋಜನೆಯ ಕ್ಲಿಷ್ಟಕರ ವಿಷಯಗಳ ಮಾಹಿತಿಗೂ ಗೋವಾಕ್ಕೆ ಹೋಗಿಬರುವುದು ಎಷ್ಟು ಜನರಿಗೆ ಸಾಧ್ಯ ಎಂಬುದು ತೆರಿಗೆದಾರರ ವಲಯದ ಪ್ರಶ್ನೆ.

ರಿರ್ಟರ್ನ್ಸ್ ಫೈಲ್‌ ನೋಟಿಸ್‌ ಹೆಚ್ಚಳ!
ತೆರಿಗೆಗೆ ಸಂಬಂಧಿಸಿದ ಎಲ್ಲ ಮಾಹಿತಿಗಳು ಆನ್‌ಲೈನ್‌ನಲ್ಲಿ ಲಭ್ಯ ವಾಗುತ್ತಿರುವುದರಿಂದ ವಾರ್ಷಿಕ ರಿಟರ್ನ್ಸ್ ಫೈಲ್‌ ಮಾಡದವರಿಗೆ ನೋಟಿಸ್‌ ಹೆಚ್ಚುತ್ತಿದೆ. ಹಲವರು ಮಾಹಿತಿಯ ಕೊರತೆಯಿಂದ ರಿಟರ್ನ್ಸ್ಫೈ ಲ್‌ ಮಾಡುತ್ತಿಲ್ಲ. ಇಂತಹ ಸಂದರ್ಭದಲ್ಲಿ ಮಂಗಳೂರಿನ ಪಿಸಿಐಟಿ ಕಚೇರಿ ಇಲ್ಲಿಯೇ ಇದ್ದರೆ ಪ್ರಕರಣಗಳ ತ್ವರಿತ ವಿಲೇವಾರಿ ಸಾಧ್ಯವಾಗುತ್ತದೆ ಎಂಬುದು ಲೆಕ್ಕ ಪರಿಶೋಧಕರ ಅಭಿಪ್ರಾಯ.

ಪ್ರಧಾನ ಆಯುಕ್ತರ ಕಚೇರಿ ಯಾಕೆ?
ಪ್ರಮುಖ ತೆರಿಗೆಗಳು, ಕುಂದುಕೊರತೆ ಮತ್ತು ಅರ್ಜಿ ವಿಲೇವಾರಿಗಳಾದ 119, 220, 263, 264, ಬಡ್ಡಿ ಮನ್ನಾ, ಟಿಡಿಎಸ್‌ ವಿನಾಯಿತಿ ಪ್ರಮಾಣಪತ್ರ ಗಳಲ್ಲಿ ಪಿಸಿಐಟಿ ಕಚೇರಿ ಮುಖ್ಯ ಪಾತ್ರ ವಹಿಸುತ್ತದೆ. ಕರಾವಳಿಯಲ್ಲಿ ಸಹಕಾರಿ ಮತ್ತು ಶೆಡ್ನೂಲ್ಡ್‌ ಬ್ಯಾಂಕ್‌ಗಳು ಹೆಚ್ಚಿದ್ದು, ಮೌಲ್ಯಮಾಪನದಲ್ಲಿ ತೆರಿಗೆ ಆಕ್ಷೇಪ ಬಂದಾಗ ಪಿಸಿಐಟಿ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಬೃಹತ್‌ ಕೈಗಾರಿಕೆಗಳು, ಉನ್ನತ ಸಂಸ್ಥೆಗಳ ಕಚೇರಿಗಳು ಇಲ್ಲಿದ್ದು, ದೂರದ ಗೋವಾಕ್ಕೆ ಹೋಗುವುದು ಕಷ್ಟಸಾಧ್ಯ. ಅಷ್ಟಲ್ಲದೆ ಈ ಐಟಿ ಸಮಸ್ಯೆಗಳು ಒಂದೇ ಬಾರಿಗೆ ಪರಿಹಾರವಾಗವೆ. ಆಗಾಗ್ಗೆ ಹೋಗುವುದರಿಂದ ಸ್ಥಳೀಯ ತೆರಿಗೆದಾರರ ಸಮಯ ಮತ್ತು ಹಣ ಎರಡೂ ವ್ಯರ್ಥವಾಗಲಿವೆ.

ಮಂಗಳೂರಿನ ಪಿಸಿಐಟಿ ಕಚೇರಿಯನ್ನು ಗೋವಾ ದೊಂದಿಗೆ ವಿಲೀನ ಮಾಡದೆ ಇರುವುದು ಉತ್ತಮ. ಅವಿಭಜಿತ ಜಿಲ್ಲೆಯಲ್ಲಿ 4 ಲಕ್ಷ ಜನರು ತೆರಿಗೆ ಪಾವ ತಿಸು ತ್ತಿದ್ದು, ಆಡಿಟ್‌ ಆಕ್ಷೇಪಗಳಿಗೆ ಗೋವಾಕ್ಕೆ ತೆರಳು ವುದು ಕಷ್ಟಸಾಧ್ಯ. ಈ ಕಚೇರಿ ಇಲ್ಲೇ ಉಳಿಯಬೇಕು.
– ಪ್ರದೀಪ್‌ ಜೋಗಿ, ಅಧ್ಯಕ್ಷರು, ಭಾರತೀಯ ಲೆಕ್ಕ ಪರಿಶೋಧಕರ ಸಂಘದ ಉಡುಪಿ ಶಾಖೆ

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.