ದಿಢೀರ್ ಶಾಕ್! ಬೆಳ್ಳಂಬೆಳಗ್ಗೆ ನಟಿ ರಾಗಿಣಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳಿಂದ ದಾಳಿ
ಏಕಾಏಕಿ ಸಿಸಿಬಿ ಅಧಿಕಾರಿಗಳನ್ನು ಕಂಡು ರಾಗಿ ದ್ವಿವೇದಿ ಶಾಕ್ ಗೆ ಒಳಗಾಗಿರುವುದಾಗಿ ಮೂಲಗಳು ಹೇಳಿವೆ
Team Udayavani, Sep 4, 2020, 8:15 AM IST
ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಶುಕ್ರವಾರ (ಸೆಪ್ಟೆಂಬರ್ 04, 2020) ಬೆಳ್ಳಂಬೆಳಗ್ಗೆ ನಟಿ ರಾಗಿಣಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.
ಬೆಳಗ್ಗೆ 6.30ಕ್ಕೆ ಎರಡು ಕಾರುಗಳಲ್ಲಿ ದಿಢೀರನೆ ನಟಿ ರಾಗಿಣಿ ಮನೆಗೆ ಆಗಮಿಸಿದ ಸಿಸಿಬಿ ಅಧಿಕಾರಿಗಳು, ಮನೆಯಲ್ಲಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಏಕಾಏಕಿ ಸಿಸಿಬಿ ಅಧಿಕಾರಿಗಳನ್ನು ಕಂಡು ರಾಗಿ ದ್ವಿವೇದಿ ಶಾಕ್ ಗೆ ಒಳಗಾಗಿರುವುದಾಗಿ ಮೂಲಗಳು ಹೇಳಿವೆ.
ನಟಿ ರಾಗಿಣಿ ಆಪ್ತ ರವಿಶಂಕರ್ ನನ್ನು ಬಂಧಿಸಿದ ಸಿಸಿಬಿ ಪೊಲೀಸರು ಮತ್ತೊಬ್ಬ ನಟಿ ಸಂಜನಾ ಗಲ್ರಾನಿ ಪರಿಚಯಸ್ಥ ರಾಹುಲ್ ಹಾಗೂ ನಟಿ ಶರ್ಮಿಳಾ ಮಾಂಡ್ರೆ ಪರಿಚಯಸ್ಥ ಎನ್ನಲಾದ ಕಾರ್ತಿಕ್ ರಾಜುವನ್ನು ವಶಕ್ಕೆ ಪಡೆದಿದ್ದರು.
ರವಿಶಂಕರ್ ನಗರದ ಡ್ರಗ್ ಪೆಡ್ಲರ್ ಗಳ ಜತೆ ಸಂಪರ್ಕ ಹೊಂದಿರುವ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದರು.
Karnataka: A search by Central Crime Branch (CCB) is underway at the residence of Kannada actress Ragini in Bengaluru, in connection with a drug case.
— ANI (@ANI) September 4, 2020
ರವಿಶಂಕರ್ ಮಾಹಿತಿಯನ್ನಾಧರಿಸಿ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಆದರೆ ಅನಾರೋಗ್ಯದ ಕಾರಣ ಸೋಮವಾರ ವಕೀಲರ ಜತೆ ಬರುವುದಾಗಿ ರಾಗಿಣಿ ಟ್ವೀಟ್ ಮೂಲಕ ತಿಳಿಸಿದ್ದಳು. ತಮಗೂ ಪ್ರಕರಣಕ್ಕೂ ಸಂಬಂಧವಿಲ್ಲ , ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದು, ಸಮಾಜದ ನಾಗರಿಕಳಾಗಿ ವಿಚಾರಣೆಗೆ ಹಾಜರಾಗುವುದು ನನ್ನ ಕರ್ತವ್ಯ. ಆದರೆ ಕಾರಣಾಂತರಗಳಿಂದ ಗುರುವಾರ ಹಾಜರಾಗಲು ಸಾಧ್ಯವಿಲ್ಲ. ಸೋಮವಾರ ವಕೀಲರ ಮೂಲಕ ಹಾಜರಾಗುವುದಾಗಿ ಬರೆದುಕೊಂಡಿದ್ದರು.
ಅದಕ್ಕೆ ಪ್ರತಿಕ್ರಿಯಿಸಿದ್ದ ಸಿಸಿಬಿ ಪೊಲೀಸರು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಶುಕ್ರವಾರವೇ ಹಾಜರಾಗಬೇಕೆಂದು ಸೂಚಿಸಿದ್ದರು. ಅಲ್ಲದೇ ರಾಗಿಣಿ ಮನೆ ಶೋಧ ಕಾರ್ಯ ನಡೆಸಲು ಕೋರ್ಟ್ ನಿಂದ ಸರ್ಚ್ ವಾರಂಟ್ ಕೂಡ ಪಡೆದುಕೊಂಡಿದ್ದು, ಶುಕ್ರವಾರ ಬೆಳಗ್ಗೆ ರಾಗಿಣಿ ಮನೆ ಮೇಲೆ ದಾಳಿ ನಡೆಸಿರುವ ಸಿಸಿಬಿ ತಂಡ ಶೋಧ ಕಾರ್ಯ ನಡೆಸುತ್ತಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.