ಕೋವಿಡ್-19 ತಡೆಗೆ ಇನ್ನಷ್ಟು ಕಾರ್ಯಪ್ರವೃತ್ತರಾಗಿ: ಸಚಿವ ಜಾರಕಿಹೊಳಿ ಸೂಚನೆ


Team Udayavani, Sep 4, 2020, 2:25 PM IST

ಕೋವಿಡ್-19 ತಡೆಗೆ ಇನ್ನಷ್ಟು ಕಾರ್ಯಪ್ರವೃತ್ತರಾಗಿ: ಸಚಿವ ಜಾರಕಿಹೊಳಿ ಸೂಚನೆ

ಬೆಳಗಾವಿ: ಪ್ರತಿ ತಾಲೂಕಿಗಳಲ್ಲಿರುವ ಕೋವಿಡ್-19 ಸೆಂಟರ್ ಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ವರದಿ ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ಮಾಡೋಣ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸೂಚನೆ ನೀಡಿದರು.

ಕೋವಿಡ್-19 ಹಾಗೂ ಅತಿವೃಷ್ಟಿಗೆ ಸಂಬಂಧಿಸಿದಂತೆ  ಜಿಲ್ಲೆಯಲ್ಲಿ ಮತ್ತು ಬೆಳಗಾವಿ ನಗರದಲ್ಲಿ ಕೈಗೊಂಡಿರುವ ತುರ್ತು ಕ್ರಮಗಳ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ಮೂರು ನಾಲ್ಕು ವರ್ಷಗಳಲ್ಲಿ ಹೊಸ ಹೊಸ ರೋಗಗಳು ಹರಡುತ್ತದೆ. ಆದರೆ ಆ ರೋಗಗಳಿಗೆ ಹೋಲಿಸಿದರೆ ಕೋವಿಡ್ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ.

ಜುಲೈ ಹಾಗೂ ಆಗಸ್ಟ್ ತಿಂಗಳಿಗೆ ಹೊಲಿಸಿದರೆ ಕೋವಿಡ್-19 ಸ್ವಲ್ಪ ಹತೊಟಿಗೆ ಬಂದಿದೆ. ಜನರು ಕೋವಿಡ್ ಎದುರಿಸಲು ಮಾನಸಿಕವಾಗಿ ಸಿದ್ದರಾಗಿದ್ದಾರೆ. ಜ‌ನರು ಹೆದರುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮ ಮಟ್ಟದಲ್ಲಿ ಕೋವಿಡ್-19 ಹರಡುವ ಪ್ರಮಾಣ ಕಡಿಮೆ ಆಗುತ್ತಿದೆ. ಸೋಂಕು ತಡೆಗೆ ಗ್ರಾಮೀಣ ಮಟ್ಟದಲ್ಲಿ ಜ‌ನರು ಸಹಕರಿಸಿದರು. ವಲಸೆ ಕಾರ್ಮಿಕರು ಬಂದ ಮೇಲೆ ಗ್ರಾಮೀಣ ಮಟ್ಟದಲ್ಲಿ ಸೋಂಕು ಹರಡಿತು ಎಂದು ಅಭಿಪ್ರಾಯಪಟ್ಟರು.

ಪೊಲೀಸರಿಗೆ ಸೋಂಕು ದೃಢಪಟ್ಟರೆ ಮನೆಯಲ್ಲಿಯೇ ಚಿಕಿತ್ಸೆ ನೀಡುವುದು ಉತ್ತಮ. ಅದೇ ರೀತಿ ಸಾರ್ವಜನಿಕರಿಗೆ ಸೋಂಕು ದೃಢಪಟ್ಟರೆ ಮನೆಯಲ್ಲಿ ಚಿಕಿತ್ಸೆ ನೀಡುವುದು ಉತ್ತಮವಾಗಿರುತ್ತದೆ. ‌ಮನೆಯಲ್ಲಿ ಚಿಕಿತ್ಸೆ ನೀಡುವುದರಿಂದ ಅವರಿಗೆ ಒಳ್ಳೆಯ ಆಹಾರದ ಜೊತೆಗೆ ಕುಟುಂಬ ಸದಸ್ಯರಿಂದ ಧೈರ್ಯ ಸಿಗುತ್ತದೆ ಎಂದು ತಿಳಿಸಿದರು.

ಶೇ.60 ಕೋವಿಡ್ ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರಿಗೆ ಸರಿಯಾದ ಆಹಾರ ನೀಡಬೇಕು. ಕೋವಿಡ್ ಹತೊಟಿಗೆ ಬಂದಿದೆ. ಆದಾಗ್ಯೂ ಅಧಿಕಾರಿಗಳು ಇನ್ನು ಹೆಚ್ಚು ಕೆಲಸ ಮಾಡಬೇಕು. 15 ದಿನಗಳ ನಂತರ ಜಿಲ್ಲಾ ಆಸ್ಪತ್ರೆಯಲ್ಲಿ ಬೇರೆ ಬೇರೆ ರೋಗಿಗಳಿಗೆ ಚಿಕಿತ್ಸೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಜಿಲ್ಲಾಧಿಕಾರಿ ಎಮ್.ಜಿ. ಹಿರೇಮಠ ಅವರು, ಜಿಲ್ಲಾಸ್ಪತ್ರೆಯಲ್ಲಿ 700 ಬೆಡ್ ಗಳಿದ್ದು, ಆಕ್ಸಿಜನ್ ವ್ಯವಸ್ಥೆ ಕೂಡ ಇದೆ. ಜಿಲ್ಲೆಗೆ 54 ವೆಂಟಿಲೇಟರ್ ಬಂದಿದ್ದು, ಅದರಲ್ಲಿ 20 ವೇಂಟಿಲೆಟರ್ ಜಿಲ್ಲಾಸ್ಪತ್ರೆಗೆ ನೀಡಲಾಗಿದೆ.  ಉಳಿದ ವೆಂಟಿಲೇಟರ್ ತಾಲೂಕುಗಳಿಗೆ ನೀಡಲಾಗಿದೆ ಎಂದು ಸಚಿವರಿಗೆ ಮಾಹಿತಿಯನ್ನು ನೀಡಿದರು.

ಬೆಳಗಾವಿ ಜಿಲ್ಲೆ ಹಾಗೂ ಉಳಿದ ಜಿಲ್ಲೆಯ ಸಾವಿನ ಸರಾಸರಿ ನೋಡಿದರೆ ಬೆಳಗಾವಿಯಲ್ಲಿ ಸಾವಿನ ಸಂಖ್ಯೆ ಕಡಿಮೆ ಇದೆ ಎಂದರು.

ಸೋಂಕಿತರು ಬಯಸಿದಲ್ಲಿ ಚಿಕಿತ್ಸೆ ಪಡೆಯಬಹುದು. ಇದರಿಂದ ಸರ್ಕಾರಿ ಆಸ್ಪತ್ರೆಗೆ ಕಡಿಮೆ ಹೊರೆ ಆಗತ್ತದೆ ಎಂದು ಜಿಲ್ಲಾಧಿಕಾರಿ ಎಮ್.ಜಿ. ಹಿರೇಮಠ ಅವರು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ವಿ. ಮುನ್ಯಾಳ ಅವರು, ತಾಲೂಕು ಹಾಗೂ ಜಿಲ್ಲೆಯಲ್ಲಿ ಕೋವಿಡ್-19 ಸ್ಥಿತಿಗತಿ ಬಗ್ಗೆ ವಿವರಣೆ ನೀಡಿದರು. ಸೋಂಕಿನಿಂದ ಬಳಲುತ್ತಿದ್ದ 140 ಜ‌ನ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಮಾಡಿಸಲಾಗಿದೆ. ಈ ಸಂದರ್ಭದಲ್ಲಿ ಮಕ್ಕಳ ಕೋವಿಡ್-19 ವರದಿ ನೆಗೆಟಿವ್ ಬಂದಿರುತ್ತದೆ ಎಂದು ಹೇಳಿದರು.

ಈ ಬಾರಿ ಪ್ರವಾಹದಿಂದ ಸಮಸ್ಯೆ ಇಲ್ಲ: ಪ್ರವಾಹದಿಂದ ಈ ಬಾರಿ ಸಮಸ್ಯೆ ಆಗಿಲ್ಲಾ ಆದರು ರೈತರಿಗೆ ಬೆಳೆ ಪರಿಹಾರ ನೀಡಲು ಜಂಟಿಯಾಗಿ ಬೆಳ ಸಮಿಕ್ಷೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಪ್ರವಾಹದಿಂದ 1160 ಕೋಟಿ ನಷ್ಟ ಆಗಿದ್ದು, ಪ್ರವಾಹದ ಸಮೀಕ್ಷೆಗೆ ಕೇಂದ್ರ ತಂಡ ಭೇಟಿ ನೀಡಲಿದೆ. ಸದ್ಯದ ಮಟ್ಟಿಗೆ ಪ್ರವಾಹ ನಿಯಂತ್ರಣದಲ್ಲಿದೆ.‌ ರೈತರಿಂದ ಬೆಳೆ ಸಮೀಕ್ಷೆ ನಡೆಯುತ್ತಿದ್ದು, ರಾಜ್ಯದಲ್ಲಿ ಜಿಲ್ಲೆಯ ರೈತರು ಹೆಚ್ಚು ಸಮೀಕ್ಷೆ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಸಚಿವರಿಗೆ ತಿಳಿಸಿದರು.

ನಗರ ಪೋಲಿಸ್ ಆಯುಕ್ತ ಡಾ. ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಸಿ.ಇ.ಒ. ದರ್ಶನ ಎಚ್.ವ್ಹಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಬಿಮ್ಸ್ ನಿರ್ದೇಶಕ ಡಾ. ವಿನಯ ದಾಸ್ತಿಕೊಪ್ಪ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ.ಎಚ್ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.