ಕೋವಿಡ್ ದೂರವಾದ ನಂತರ ಶಿಕ್ಷಕರ ದಿನ
Team Udayavani, Sep 4, 2020, 6:24 PM IST
ಬೀದರ: ದೇಶ ಕೋವಿಡ್ ಸಂಕಷ್ಟದಿಂದ ಪಾರಾದ ನಂತರ ಮತ್ತೆ ಜನಜೀವನ ಯಥಾಸ್ಥಿತಿಗೆ ಮರಳಿ ಸಮಾರಂಭಗಳು ನಡೆಸುವಂತಾದರೆ ಜಿಲ್ಲಾ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಕ್ಷಕರ ದಿನಾಚರಣೆ ಹಮ್ಮಿಕೊಂಡು ಜಿಲ್ಲೆಯ ಶಿಕ್ಷಕರನ್ನು ಗೌರವಿಸುವುದಾಗಿ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.
ಕಳೆದ ಹತ್ತಾರು ವರ್ಷಗಳಿಂದ ತಾವು ಔರಾದ ತಾಲೂಕಿನಲ್ಲಿ ಶಿಕ್ಷಕರಿಗೆ ಗೌರವಿಸುವ ಕೆಲಸ ಮಾಡುತ್ತಿದ್ದು, ತತ್ಪರಿಣಾಮ ಔರಾದ ತಾಲೂಕಿನ ಎಸ್ಸೆಸ್ಸೆಲ್ಸಿ-ಪಿಯುಸಿ ಫಲಿತಾಂಶದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಈ ದೇಶದ ಭವಿಷ್ಯ ರೂಪಿಸುವ ಶಿಕ್ಷಕರನ್ನು ಗೌರವಿಸುವ ಮಹತ್ವದ ಕಾರ್ಯ ತಾವು ಮುಂದುವರಿಸುವುದಾಗಿ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಈ ವರ್ಷದ ಶಿಕ್ಷಕರ ದಿನಾಚರಣೆ ನಿಮಿತ್ತ ಜಿಲ್ಲೆ ಮತ್ತು ರಾಜ್ಯದ ಶಿಕ್ಷಕರಿಗೆ ಶುಭಾಶಯ ಕೋರುತ್ತೇನೆ. ಶಿಕ್ಷಕರೂ ತಮ್ಮ ಕರ್ತವ್ಯಗಳಿಂದ ವಿಮುಖರಾಗಬಾರದು. ಕೋವಿಡ್ ಹಿನ್ನೆಲೆಯಲ್ಲಿ ವಠಾರ ಶಾಲೆಗಳನ್ನು ಶಿಸ್ತುಬದ್ಧ ರೀತಿಯಲ್ಲಿ ನಡೆಸಿಕೊಂಡು ಹೋಗಬೇಕು. ಕೋವಿಡ್ ಜಾಗರೂಕತೆ ಕ್ರಮ ಮಕ್ಕಳಿಗೆ ತಿಳಿಹೇಳಬೇಕು. ಜಿಲ್ಲೆಯನ್ನು ಶೈಕ್ಷಣಿಕವಾಗಿ ಮುಂದುವರಿಯುವಂತೆ ಮಾಡುವಲ್ಲಿ ಎಲ್ಲ ಶಿಕ್ಷಕರು ಶ್ರಮ ವಹಿಸಲು ಕರೆ ನೀಡಿದ್ದಾರೆ. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನದಿಂದ ದೇಶಾದ್ಯಂತ ಏಳು ದಿನಗಳ ಶೋಕಾಚರಣೆ ಇರುವುದರಿಂದ ಸೆ.5ರಂದು ನಡೆಯುವ ಶಿಕ್ಷಕರ ದಿನಾಚರಣೆಯನ್ನು ಆಯಾ ಶಾಲೆಗಳಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.