ಡ್ರಗ್ ಮಾಫಿಯಾ ವಿರುದ್ಧ ಕ್ರಮಕ್ಕೆ ಆಗ್ರಹ
Team Udayavani, Sep 4, 2020, 6:35 PM IST
ವಿಜಯಪುರ: ರಾಜ್ಯದಲ್ಲಿ ಡ್ರಗ್ಸ್ ದಂಧೆ ಹಿಂದೆ ರಾಷ್ಟ್ರಘಾತುಕರ ಸಂಚು ಅಡಗಿದ್ದು, ಕೂಡಲೇ ಈ ಮಾದಕ ವಸ್ತುಗಳ ಜಾಲದ ಮೂಲಕ ದೇಶದ್ರೋದಹ ಕೃತ್ಯದಲ್ಲಿ ಪಾಲ್ಗೊಂಡ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಜಿಲ್ಲಾ ಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಸಹ ಕಾರ್ಯದರ್ಶಿ ಸಚಿನ್ ಕುಳಗೇರಿ, ಕನ್ನಡ ಚಿತ್ರ ರಂಗದ ನಂಟು ಹೊಂದಿರುವುದನ್ನುಬೃಹತ್ ಡ್ರಗ್ಸ್ ಜಾಲವನ್ನು ಎನ್‌ಸಿಬಿ ಅಧಿ ಕಾರಿಗಳು ಭೇದಿಸಿದ್ದಾರೆ. ಈ ಡ್ರಗ್ಸ್ ಜಾಲದ ಹಿಂದೆ ಸಮಾಜದಲ್ಲಿ ಇರುವಂಥ ಪ್ರತಿಷ್ಠಿತ ಪ್ರಭಾವಿ ಹಾಗೂ ಶ್ರೀಮಂತ ಕುಟುಂಬಗಳವ್ಯಕ್ತಿಗಳು, ಸಿನಿಮಾ ನಟ-ನಟಿಯರು, ರಾಜಕಾರಣಿಗಳ ಮಕ್ಕಳ ದೊಡ್ಡ ಜಾಲವೇ ಇದೆ. ಈ ಕುರಿತು ಮಾಧ್ಯಮಗಳಲ್ಲಿ ನಿತ್ಯವೂ ಒಂದೊಂದು ವರದಿ ಬಿತ್ತರವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸಮಾಜಕ್ಕೆ ಮಾದರಿ ಆಗಬೇಕಾದವರು ಮಾದಕ ವ್ಯಸನಿಗಳಾಗಿ ಸಮಾಜಕ್ಕೆಕಳಂಕ ತರುವ ಹಾಗೂ ಸಮಾಜವನ್ನು ಕೆಲಸದಲ್ಲಿ ತೊಡಗಿದ್ದಾರೆ. ಡ್ರಗ್ಸ್ ಜಾಲದ ಪಿಡುಗಿನಿಂದ ದೇಶದ ಯುವ ಶಕ್ತಿಯನ್ನು ರಕ್ಷಿಸಿಕೊಳ್ಳಲು ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಬುಡಸಮೇತ ಕಿತ್ತು ಹಾಕಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಶಕ್ತಿ ಮೀರಿ ಕೆಲಸ ಮಾಡಬೇಕಾಗಿದೆ. ರಾಜ್ಯ ಸರ್ಕಾರ ಡ್ರಗ್ಸ್ ನಿಯಂತ್ರಣಕ್ಕೆ ಕಠಿಣ ಕಾನೂನುಗಳನ್ನು ರೂಪಿಸಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡು ಕರ್ನಾಟಕ ರಾಜ್ಯವನ್ನು ನಶೆ ಮುಕ್ತ ರಾಜ್ಯವಾಗಿ ಮಾಡಿ ಎಂದು ಆಗ್ರಹಿಸಿದರು.
ಮಾದಕ ವಸ್ತುಗಳು ಸಮಾಜಕ್ಕೆ ಅತ್ಯಂತ ಹಾನಿಕಾರಕ ಆಗಿವೆ. ಈ ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾದವರು ಸ್ವತಃ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದಲ್ಲದೇ, ಸಮಾಜದ ಸ್ವಾಸ್ಥ್ಯ ವನ್ನು ಕೂಡ ಹಾಳು ಮಾಡುತ್ತೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ 2014 ರಲ್ಲಿ ಶಾಲಾ-ಕಾಲೇಜು ಕ್ಯಾಂಪಸ್‌ಗಳಲ್ಲಿನ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಲು ದೇಶ್ಯಾದ್ಯಂತ ನಶಾ ಮುಕ್ತ ಭಾರತ ಎಂಬ ಅಭಿಯಾನ ಹಮ್ಮಿಕೊಳ್ಳಬೇಕಿದೆ. ಇದಕ್ಕಾಗಿ ನಮ್ಮ ಸಂಘಟನೆ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕ್ಯಾಂಪಸ್‌ಗಳಲ್ಲಿ ಅನೇಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಜಾಗೃತಿ ಮೂಡಿಸಿತ್ತು ಎಂದು ವಿವರಿಸಿದರು.
ಆದರೆ ಇತ್ತೀಚೆಗೆ ಪೊಲೀಸರ ತನಿಖೆಯಲ್ಲಿ ಬೆಚ್ಚಿ ಬೀಳಿಸುವ ಹಲವು ಮಾಹಿತಿಗಳು ಹೊರಬಿದ್ದ ವಿಷಯ ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳು, ಯುವಕರು ಮಾದಕ ವ್ಯಸನ ಜಾಲದ ಗ್ರಾಹಕರಾಗಿದ್ದಾರೆ ಎಂಬ ಅಘಾತಕಾರಿ ಅಂಶಗಳು ಕೇಳಿಬರುತ್ತಿರುವುದು ವಿಷಾದನೀಯ ಎಂದರು.
ನಗರ ಕಾರ್ಯದರ್ಶಿ ಐಶ್ವರ್ಯ ಕುಲಕರ್ಣಿ ಮಾತನಾಡಿ, ರಾಜ್ಯದ ಹಲವು ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಜಾಲ ವ್ಯವಸ್ಥಿತವಾಗಿ ಕೋಡ್ ವರ್ಡ್‌ಗಳ ಮೂಲಕ ಈ ದಂಧೆ ನಡೆಸುತ್ತಿದೆ. ಇದರಿಂದ ಕಾಲೇಜುಗಳಲ್ಲಿ ಡ್ರಗ್ ಅಡಿಕ್ಟ್ ಆಗುವುದು ಒಂದು ರೀತಿಯಲ್ಲಿ ಫ್ಯಾಶನ್ ಆಗಿ ಮಾರ್ಪಡುತ್ತಿರುವ ಅಂಶವೂ ಬಯಲಾಗುತ್ತಿದೆ. ಇದಕ್ಕಾಗಿ ಪೋಷಕರು ತಮ್ಮ ಮಕ್ಕಳ ನೈತಿಕ ಮೌಲ್ಯದ ಜೀವನಕ್ಕಾಗಿ ಅಗತ್ಯ ಎಚ್ಚರಿಕೆ ವಹಿಸಬೇಕಿದೆ. ಮಕ್ಕಳೊಂದಿಗೆ ಮುಕ್ತವಾಗಿ ಮಾತನಾಡುವ ಮೂಲಕ ಮಕ್ಕಳೊಂದಿಗೆ ಬೆರೆಯುವ ಕೆಲಸ ಮಾಡಲಿ ಎಂದು ಕಿವಿಮಾತು ಹೇಳಿದರು.
ಬೆಂಗಳೂರಿನ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆ ತನಿಖೆ ಮತ್ತಷ್ಟು ಚುರುಕುಗೊಳಿಸಬೇಕಿದೆ. ಸದರಿ ಜಾಲದಲ್ಲಿ ಪ್ರಭಾವಿಗಳ ಹಸ್ತಕ್ಷೇಪ ಇರುವುದರಿಂದ ಯಾವುದೇ ಒತ್ತಡಕ್ಕೆ ಮಣಿಯದೆ ಸರ್ಕಾರ ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದು ಆಗ್ರಹಿಸಿದರು.
ಎಬಿವಿಪಿ ನಗರ ಸಂಘಟನಾ ಕಾರ್ಯದರ್ಶಿ ಬ್ರಹ್ಮಾನಂದ ಚಿತ್ರಗಾರ, ಸಿದ್ದು ಪತ್ತಾರ, ನವೀನ, ಪ್ರದೀಪ, ಅರುಣ ನಾಯಕ, ಪಾಂಡು ಮೋರೆ, ಸಂತೋಷ, ಶ್ರೀಧರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.