ಪ್ರಸಿದ್ಧ ದೇಗುಲಗಳಿಗೆ ಜಿಲ್ಲಾಧಿಕಾರಿ ಭೇಟಿ


Team Udayavani, Sep 5, 2020, 1:49 PM IST

ಪ್ರಸಿದ್ಧ ದೇಗುಲಗಳಿಗೆ ಜಿಲ್ಲಾಧಿಕಾರಿ ಭೇಟಿ

ಚಾಮರಾಜನಗರ: ಜಿಲ್ಲೆಯ ಐತಿಹಾಸಿಕ ಪರಂಪರೆಯುಳ್ಳ ವಿವಿಧ ದೇವಾಲಯಗಳಿಗೆ ಜಿಲ್ಲಾಧಿಕಾರಿ ಡಾ.ಎಂ. ಆರ್‌.ರವಿ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೇಂದ್ರ ಪ್ರಾಚ್ಯ ವಸ್ತು ಪರಂಪರೆ ಇಲಾಖೆ ವ್ಯಾಪ್ತಿಗೊಳಪಡುವ ಚಾಮರಾಜ  ನಗರ ತಾಲೂಕಿನ ಇತಿಹಾಸವುಳ್ಳ ನರಸಮಂಗಲದ ರಾಮಲಿಂಗೇಶ್ವರ ದೇವಾಲಯಕ್ಕೆ ಮೊದಲಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಅಲ್ಲಿನ ದೇವಾಲಯದ ಸಂಪೂರ್ಣ ಪ್ರದೇಶವನ್ನು ವೀಕ್ಷಿಸಿದರು. ದೇವಾಲಯದ ಸಪ್ತಮಾತೃಕೆ ಮೂರ್ತಿಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿ, ಇದರ ಇತಿಹಾಸ ಪರಿಚಯಿಸುವ ಮಹತ್ವದ ಬಗ್ಗೆ ಹೆಚ್ಚು ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಗ್ರಾಮಸ್ಥರ ಹಿರಿಯರಿಂದ ದೇವಾಲಯದ ಪರಂಪರೆ, ಇತಿಹಾಸ ಕುರಿತ ಅನುಭವದ ಮಾಹಿತಿ ಪಡೆದರು. ದೇವಾಲಯದ ಆವರಣದಲ್ಲಿ ವಿದ್ಯುತ್‌ ದೀಪ ಅಳವಡಿಸಬೇಕು, ಅತ್ಯಂತ ಪುರಾತನ ದೇವಾಲಯದ ಸಂರಕ್ಷಣೆಗೆ ವಿಶೇಷ ಒತ್ತು ನೀಡಬೇಕು ಎಂದರು.

ಬಳಿಕ ಗುಂಡ್ಲುಪೇಟೆ ಪಟ್ಟಣದ ಆರಂಭದಲ್ಲಿಯೇ ಇರುವ ಪರವಾಸುದೇವ ದೇವಾಲಯಕ್ಕೆ ಭೇಟಿ ಕೊಟ್ಟು ಅಲ್ಲಿನ ಕಲ್ಯಾಣಿ ಕೊಳ ವೀಕ್ಷಿಸಿದರು. ದೇವಾಲಯ ಸುತ್ತಮುತ್ತಲ ಪ್ರದೇಶ ಪರಿಶೀಲಿಸಿ ಸ್ವಚ್ಛವಾಗಿಟ್ಟುಕೊಳ್ಳಲು ಸೂಚಿಸಿದರು. ದೇವಾಲಯದ ಸಂಬಂಧ ಇರುವ ಜಾಗದ ಸಮಸ್ಯೆಗಳ ಬಗ್ಗೆ ವಿವರ ಪಡೆದ ಜಿಲ್ಲಾಧಿಕಾರಿಗಳು ಈ ಸಂಬಂಧ ದಾಖಲೆ ಸಂಗ್ರಹಿಸಿಟ್ಟುಕೊಳ್ಳಬೇಕು. ದೇವಾಲಯದ ಸಂರಕ್ಷಣೆ ಹಾಗೂ ನೈರ್ಮಲ್ಯ ಕಾಪಾಡಲು ತಹಶೀಲ್ದಾರ್‌ ಮತ್ತು ಪುರಸಭೆ ಮುಖ್ಯ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.

ಗುಂಡ್ಲುಪೇಟೆ ಪಟ್ಟಣದ ವಿಜಯ ನಾರಾಯಣ ದೇವಾಲಯಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವಾಲಯದ ಇತಿಹಾಸ, ಪರಂಪರೆ ಕುರಿತು ಪ್ರವಾಸಿಗರು, ಸ್ಥಳೀಯರಿಗೆ ತಿಳಿಸುವಂತಾಗಬೇಕು. ದೇವಾಲಯ ಕುರಿತು ಫ‌ಲಕಗಳನ್ನು ಅಳವಡಿಸಬೇಕು, ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ.  ಎಂ. ಆರ್‌.ರವಿ ನಿರ್ದೇಶನ ನೀಡಿದರು.

ತಹಶೀಲ್ದಾರ್‌ ನಂಜುಂಡಯ್ಯ, ಪ್ರವಾಸೋದ್ಯಮ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಎಚ್‌.ಕೆ.ಗಿರೀಶ್‌, ಪುರಸಭೆ ಮುಖ್ಯ ಅಧಿಕಾರಿ ರಮೇಶ್‌, ಪ್ರಾಚ್ಯ ವಸ್ತು ಇಲಾಖೆ ಸ್ಥಳೀಯ ಅಧಿಕಾರಿಗಳು ಇದ್ದರು

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.