ಕೆಎಸ್‌ಆರ್‌ಟಿಸಿ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ
Team Udayavani, Sep 5, 2020, 1:58 PM IST
ಚಾಮರಾಜನಗರ: ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ನಿಗದಿಪಡಿಸಿರುವ ಆಸನಗಳಷ್ಟು ಪ್ರಯಾಣಿಕರು ಪ್ರಯಾಣಿಸಲು ಕೆಲ ಷರತ್ತಿಗೊಳಪಟ್ಟು ಅನುಮತಿ ನೀಡಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ.
ಕೋವಿಡ್-19 ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಪಟ್ಟಣ ಪ್ರದೇಶಗಳಿಗೆ ಮಾತ್ರ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಿಸಲು ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡಲಾಗಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬಸ್‌ಗಳಲ್ಲಿ 30+2 ಪ್ರಯಾಣಿಕರು ಮಾತ್ರ ಸಮಯದ ನಿಬಂìಧವಿಲ್ಲದೇ ಪ್ರಯಾಣಿಸಲು ಅವಕಾಶ ನೀಡಿರುವುದನ್ನು ಹಿಂಪಡೆಯಲಾಗಿದೆ. ಬಸ್ ಗಳಲ್ಲಿ ನಿಗದಿಪಡಿಸಿರುವ ಆಸನಗಳಷ್ಟು ಪ್ರಯಾಣಿಕರು ಪ್ರಯಾಣಿಸಲು ಕೋವಿಡ್-19 ಮುಂಜಾಗ್ರತಾ ಕ್ರಮ ಪಾಲಿಸುವ ನಿಬಂಧನೆಗೊಳಪಟ್ಟು ಅನುಮತಿ ನೀಡಿದ್ದಾರೆ. ಪ್ರತಿಯೊಬ್ಬ ಪ್ರಯಾಣಿಕರು ಫೇಸ್ ಮಾಸ್ಕನ್ನು ಕಟ್ಟು ನಿಟ್ಟಾಗಿ ಧರಿಸಿರಬೇಕು. ಬಸ್ಸಿನಲ್ಲಿ ಜನಸಂದಣಿ ತಡೆಗಟ್ಟಲು ಯಾವುದೇ ಪ್ರಯಾಣಿಕರು ನಿಂತು ಪ್ರಯಾಣಿಸಲು ಅನುಮತಿಸಬಾರದು. ನಿರ್ದಿಷ್ಟ ಪಡಿಸಿದ
ಪ್ರತೀ ಪ್ರಯಾಣದ ನಂತರ ಬಸ್ ಗಳನ್ನು ಸ್ಯಾನಿಟೈಸ್ ಮಾಡಬೇಕು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಿಸಿರುವಷರತ್ತು ಕಟ್ಟುನಿಟ್ಟಾಗಿ ಪಾಲಿಸಬೇಕು. ಉಲ್ಲಂಘನೆಯಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.