ಸೇವಾ ಮನೋಭಾವದ ಶಿಕ್ಷಕರಿಂದ ಉತ್ತಮ ಶಾಲೆ; ದ.ಕ: ಶಿಕ್ಷಕರ ದಿನಾಚರಣೆಯಲ್ಲಿ ಡಿಸಿ ರಾಜೇಂದ್ರ
Team Udayavani, Sep 5, 2020, 11:30 PM IST
ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿದರು.
ಮಂಗಳೂರು: ಕೇವಲ ಕಟ್ಟಡಗಳಿಂದಷ್ಟೇ ಒಂದು ಉತ್ತಮ ಶಾಲೆ ಸೃಷ್ಟಿಯಾಗುವುದಿಲ್ಲ. ಬದಲಾಗಿ ವಿಶೇಷ ಸೇವಾ ಮನೋಭಾವದ ಶಿಕ್ಷಕರಿಂದಾಗಿ ಉತ್ತಮ ಶಾಲೆ ರೂಪುಗೊಳ್ಳುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಹೇಳಿದರು.
ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಉರ್ವ ಕೆನರಾ ಹೈಸ್ಕೂಲ್‌ನಲ್ಲಿ ಶನಿವಾರ ಜರಗಿದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಯೋರ್ವರ ಯಶಸ್ಸಿನ ಹಿಂದೆ ಗುರುಗಳ ಪಾತ್ರ ಇದ್ದೇ ಇರುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಕರೇ ಹೀರೋಗಳು. ಶಿಕ್ಷಕರ ನಡೆ, ನುಡಿ, ಆಚಾರ ವಿಚಾರವನ್ನು ಮಕ್ಕಳು ಅನುಕರಿಸುತ್ತಾರೆ. ಆದ್ದರಿಂದ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ಕೇವಲ ಕೆಲಸ ಎಂದು ಪರಿಗಣಿಸದೆ ಅದನ್ನು ಮೀರಿ ಸೇವೆ ಸಲ್ಲಿಸುವ ಶಿಕ್ಷಕರು ವಿದ್ಯಾರ್ಥಿಯ ಭವಿಷ್ಯ ರೂಪಿಸುವ ದೇವರಾಗುತ್ತಾರೆ. ಶಿಕ್ಷಣದ ಜತೆಗೆ ಜೀವನ ಮೌಲ್ಯ, ನಾಗರಿಕ ತಣ್ತೀಗಳನ್ನು ಕೂಡ ಹೇಳಿಕೊಡುವ ಕೆಲಸ ಶಿಕ್ಷಕರಿಂದ ಆದಾಗ ಭವ್ಯ ಭಾರತದ ನಿರ್ಮಾಣ ಸಾಧ್ಯ ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉದ್ಘಾಟಿಸಿದರು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು, ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಹನಿರ್ದೇಶಕ ಸಿಪ್ರಿಯನ್ ಮೊಂತೆರೋ, ಜಿ.ಪಂ. ಸದಸ್ಯರಾದ ಜನರ್ದಾನ ಗೌಡ, ಧನಲಕ್ಷ್ಮೀ ಗಟ್ಟಿ, ತಾ.ಪಂ. ಸದಸ್ಯರಾದ ವಜ್ರಾಕ್ಷಿ ಶೆಟ್ಟಿ, ರಶ್ಮಿ ಆಚಾರ್ಯ, ಶಶಿಕಲಾ, ಮಂಗಳೂರು ವಲಯ ಬಿಇಒ ಸದಾನಂದ ಪೂಂಜಾ, ಕಾರ್ಪೊರೇಟರ್ ಸಂಧ್ಯಾ ಮೋಹನ ಆಚಾರ್ಯ, ಕೆನರಾ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ನಮಿತಾ ಪ್ರಕಾಶ್ ಉಪಸ್ಥಿತರಿದ್ದರು.
ಶಿಕ್ಷಣಾಧಿಕಾರಿ ದಯಾವತಿ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ಮತ್ತು ರವೀಂದ್ರನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿದರು.
ಯಾಕೂಬ್ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ
ಮಂಗಳೂರು: ಬೆಳ್ತಂಗಡಿಯ ನಡ ಸರಕಾರಿ ಶಾಲೆಯ ಶಿಕ್ಷಕ ಯಾಕೂಬ್ ಕೊಯ್ಯೂರು ಅವರಿಗೆ ಮಂಗಳೂರಿನಲ್ಲಿ ನಡೆದ ಶಿಕ್ಷಕರ ದಿನಾ ಚರಣೆ ಸಂದರ್ಭ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದು ವರ್ಚುವಲ್ ಕಾರ್ಯಕ್ರಮವಾಗಿದ್ದು, ಹೊಸದಿಲ್ಲಿಯಿಂದ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಕೇಂದ್ರ ಮಾನವ ಸಂಪದ ಸಚಿವ ಡಾ| ರಮೇಶ್ ಪೊಕ್ರಿಯಾಲ್ ಉಪಸ್ಥಿತರಿದ್ದರು. ಯಾಕೂಬ್ ಸಾಧನೆಗಳ ಬಗ್ಗೆ ಕಿರುಚಿತ್ರ ವನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು. ಬಳಿಕ ಕೇಂದ್ರ ಸರಕಾರದ ಪರವಾಗಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಪ್ರಶಸ್ತಿ ಹಾಗೂ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ರಾಜ್ಯದಲ್ಲೇ ಮೊದಲ ಬಾರಿಗೆ ಗಣಿತ ಪ್ರಯೋಗಾಲಯವನ್ನು ನಡ ಸರಕಾರಿ ಶಾಲೆಯಲ್ಲಿ ಸ್ಥಾಪಿಸಿ ಗಣಿತವನ್ನು ಸುಲಭವಾಗಿ ಮಕ್ಕಳಿಗೆ ಕಲಿಸುವಲ್ಲಿ ಯಶಸ್ವಿಯಾಗಿರುವ ಯಾಕೂಬ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಬೋಧನೆ, ಪ್ರಯೋಗ, ವೀಡಿಯೋಗಳನ್ನು ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.