ಉದ್ಯಮ ಸ್ನೇಹಿ ರಾಜ್ಯಗಳು-2019; ಆಂಧ್ರಪ್ರದೇಶಕ್ಕೆ ಅಗ್ರ, ಕರ್ನಾಟಕಕ್ಕೆ ಹದಿನೇಳನೇ ಸ್ಥಾನ

Team Udayavani, Sep 6, 2020, 6:08 AM IST

ಉದ್ಯಮ ಸ್ನೇಹಿ ರಾಜ್ಯಗಳು-2019; ಆಂಧ್ರಪ್ರದೇಶಕ್ಕೆ ಅಗ್ರ, ಕರ್ನಾಟಕಕ್ಕೆ ಹದಿನೇಳನೇ ಸ್ಥಾನ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಕೇಂದ್ರ ಸರಕಾರವು “ಉದ್ಯಮ ಸ್ನೇಹಿ ರಾಜ್ಯ-2019’ರ ಪಟ್ಟಿ ಬಿಡುಗಡೆ ಮಾಡಿದ್ದು, ನೆರೆಯ ಆಂಧ್ರಪ್ರದೇಶವು ಮತ್ತೂಮ್ಮೆ ಭಾರತದ ನಂಬರ್‌ 1 ಉದ್ಯಮ ಸ್ನೇಹಿ ರಾಜ್ಯದ ಗರಿಮೆಗೆ ಪಾತ್ರವಾಗಿದೆ. ತದನಂತರದ ಸ್ಥಾನಗಳಲ್ಲಿ ಕ್ರಮವಾಗಿ ಉತ್ತರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿವೆ.

ವ್ಯಾಪಾರ ಸುಧಾರಣಾ ಕ್ರಿಯಾ ಯೋಜನೆಯ ಮಾನದಂಡಗಳ ಮೇಲೆ (ಬಾರ್ಪ್‌ -2019) ಈ ಪಟ್ಟಿಯನ್ನು ಸಿದ್ಧಪಡಿಸಿದ್ದಾಗಿ, ಸುದ್ಧಿ ಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. ಬಾರ್ಪ್‌(ಬ್ಯುಸಿನೆಸ್‌ ಆ್ಯಕ್ಷನ್‌ ರಿಫಾರ್ಮ್ ಪ್ಲ್ರಾನ್‌) ಅಡಿಯಲ್ಲಿ ಸಿದ್ಧವಾಗಿರುವ ಈ ಪಟ್ಟಿಯು ನಿರ್ಮಾಣ ಪರವಾನಗಿ, ಕಾರ್ಮಿಕ ಕಾನೂನುಗಳ ನಿರ್ವಹಣೆ, ಸುಗಮ ಹೂಡಿಕೆ ವ್ಯವಸ್ಥೆ, ಭೂ ಲಭ್ಯತೆ, ಏಕಗವಾಕ್ಷಿ ವ್ಯವಸ್ಥೆ ಮುಂತಾದ ಮಾನದಂಡಗಳನ್ನು ಒಳಗೊಂಡಿದ್ದು, ಇವುಗಳ ಆಧಾರದ ಮೇಲೆ ಯಾವ ರಾಜ್ಯ ಉದ್ಯಮ ಸ್ನೇಹಿಯಾಗಿದೆ ಎನ್ನುವುದನ್ನು ನಿರ್ಧರಿಸಲಾಗುತ್ತದೆ.

ರಾಜ್ಯದ ವಿಷಯಕ್ಕೆ ಬರುವುದಾದರೆ “ಬಾರ್ಪ್‌ 2019′ ಪಟ್ಟಿಯಲ್ಲಿ ಕರ್ನಾಟಕವು 17ನೇ ಸ್ಥಾನದಲ್ಲಿ ಇದೆ. 2018ರಲ್ಲಿ 12ನೇ ಸ್ಥಾನದಲ್ಲಿದ್ದ ಉತ್ತರಪ್ರದೇಶ ಎರಡನೇ ಸ್ಥಾನಕ್ಕೇರಿದ್ದರೆ, ಎರಡು ವರ್ಷಗಳ ಹಿಂದೆ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ 23ನೇ ಸ್ಥಾನದಲ್ಲಿದ್ದ ರಾಷ್ಟ್ರ ರಾಜಧಾನಿ ದೆಹಲಿ 2019ರಲ್ಲಿ 12ನೇ ಸ್ಥಾನ ತಲುಪಿದೆ.

ಈ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಅವರು, “”ಒಂದು ರಾಜ್ಯವು ಉತ್ತಮ ರ್‍ಯಾಂಕಿಂಗ್‌ ಪಡೆದಿದೆ ಎಂದಾಕ್ಷಣ ಅದು ಯಾವುದೇ ರೀತಿಯಲ್ಲೂ ಅನ್ಯ ರಾಜ್ಯಗಳಿಗಿಂತ ಉತ್ಕೃಷ್ಟ ಎಂದು ಖಂಡಿತ ಅಲ್ಲ.

ಎಲ್ಲಾ ರಾಜ್ಯಗಳ ಪ್ರಯತ್ನವೂ ಪರಿಗಣಿತವಾಗುತ್ತದೆ” ಎಂದಿದ್ದಾರೆ. ಈ ಪಟ್ಟಿಯು ಮಾರ್ಚ್‌ ತಿಂಗಳಲ್ಲೇ ಬಿಡುಗಡೆಯಾಗಬೇಕಿತ್ತು, ಕೋವಿಡ್‌ ಕಾರಣದಿಂದ ಮುಂದೂಡಲ್ಪಟ್ಟಿತ್ತು.

ಟಾಪ್ ನ್ಯೂಸ್

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.