13 ದಿನಗಳಲ್ಲಿ 10 ಲಕ್ಷ ಪ್ರಕರಣ: 40 ಲಕ್ಷಕ್ಕಿಂತ ಹೆಚ್ಚು ಸೋಂಕಿತರುಳ್ಳ 3ನೇ ದೇಶ ಭಾರತ
Team Udayavani, Sep 6, 2020, 3:34 AM IST
ನವದೆಹಲಿ: ದೇಶವು 30 ಲಕ್ಷ ಸೋಂಕಿತರನ್ನು ಕಂಡ ಕೇವಲ 13 ದಿನಗಳಲ್ಲೇ ಸೋಂಕಿತರ ಸಂಖ್ಯೆ 40 ಲಕ್ಷ ದಾಟಿದೆ. ಅಂದರೆ 13 ದಿನಗಳ ಅವಧಿಯಲ್ಲಿ 10 ಲಕ್ಷ ಮಂದಿಗೆ ಕೋವಿಡ್ ದೃಢಪಟ್ಟಿದೆ ಎಂಬ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ನೀಡಿದೆ. ಅಷ್ಟೇ ಅಲ್ಲದೆ, ಈಗ ಭಾರತವು 40 ಲಕ್ಷಕ್ಕೂ ಹೆಚ್ಚು ಸೋಂಕಿತರನ್ನು ಕಂಡ 3ನೇ ರಾಷ್ಟ್ರವಾಗಿದೆ. ಮೊದಲೆರಡು ಸ್ಥಾನಗಳಲ್ಲಿ ಅಮೆರಿಕ ಮತ್ತು ಬ್ರೆಜಿಲ್ ಇವೆ.
ಇದೇ ವೇಳೆ, ಗುಣಮುಖ ಪ್ರಮಾಣವೂ ಸುಧಾರಿಸಿದ್ದು, ಒಟ್ಟಾರೆ ಈವರೆಗೆ 31.07 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿ, ಅದರ ಪ್ರಮಾಣ ಶೇ.77.23ಕ್ಕೇರಿಕೆಯಾಗಿದೆ ಎಂದೂ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಗರಿಷ್ಠ ಪ್ರಕರಣ ದಾಖಲು: ಶುಕ್ರವಾರ ಬೆಳಗ್ಗೆ 8ರಿಂದ ಶನಿವಾರ ಬೆಳಗ್ಗೆ 8ರವರೆಗೆ ದೇಶದಲ್ಲಿ ದಾಖಲೆಯ 86,432 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಅವಧಿಯಲ್ಲಿ 1,089 ಮಂದಿ ಸಾವಿಗೀಡಾಗಿದ್ದಾರೆ. ಶುಕ್ರವಾರ ಒಂದೇ ದಿನ 10.59 ಲಕ್ಷ ಸ್ಯಾಂಪಲ್ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 4.77 ಕೋಟಿಗೂ ಅಧಿಕ ಸ್ಯಾಂಪಲ್ಗಳ ಪರೀಕ್ಷೆ ನಡೆದಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.