ಶಿಕ್ಷಕರ ಪರಿಶ್ರಮದಿಂದ ಉತ್ತಮ ಫಲಿತಾಂಶ
Team Udayavani, Sep 6, 2020, 1:25 PM IST
ಚಿಂತಾಮಣಿ: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯಲು ಜಿಲ್ಲೆಯ ಶಿಕ್ಷಕರ ಪರಿಶ್ರಮ ಕಾರಣ ಎಂದು ಊಲವಾಡಿ ಗ್ರಾಪಂ ಪಿಡಿಒ ಕೆ.ಆರ್.ಮಂಜುನಾಥ್ ನುಡಿದರು.
ಬೂರಗಮಾಕಲಹಳ್ಳಿ ಸರ್ಕಾರಿ ಪ್ರೌಢ ಶಾಲೆಗೆ 2019-2020ನೇ ಸಾಲಿನಲ್ಲಿ ಶೇ. 100 ರಷ್ಟು ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಶಿಕ್ಷಕರ ದಿಣಾಚರಣೆ ಅಂಗವಾಗಿಶಾಲಾ ಶಿಕ್ಷಕರಿಗೆ ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನಿಸಿ ಅಭಿನಂದಿಸಿ ಅವರು ಮಾತನಾಡಿದರು. ನಾನು ಈ ಶಾಲೆಯನ್ನು ಅನೇಕ ವರ್ಷಗಳಿಂದ ನೋಡುತ್ತಿದ್ದೇನೆ. ಈ ಬಾರಿ ಶೇ.100 ಫಲಿತಾಂಶ ಪಡೆದಿರುವುದರಿಂದ ಜೊತೆಗೆ ನಾನು ಈ ಭಾಗದಲ್ಲಿ ಪಿಡಿಒ ಆಗಿ ಕೆಲಸ ನಿರ್ವಹಿಸುವ ಸಮಯದಲ್ಲಿ ಅತ್ಯುತ್ತಮ ಸಾಧನೆ ತೋರಿರುವುದು ಸಂತಸ ತಂದಿದೆ ಎಂದರು.
ಇದೇ ರೀತಿ ಮುಂದೆಯೂ ಕೂಡ ಶಿಕ್ಷಕರು ಉತ್ತಮ ಬೋಧನೆ ಮಾಡಿ ಶಾಲೆ ಉತ್ತಮ ಫಲಿತಾಂಶ ದಾಖಲಿಸಲು ನೆರವಾಗಬೇಕು. ಶಾಲೆಗೆ ಪಂಚಾಯತಿ ವತಿಯಿಂದ ಸಿಗಬೇಕಾದ ಮೂಲ ಸೌಲಭ್ಯ ವ್ಯವಸ್ಥೆ ಕಲ್ಪಿಸಿದ್ದು, ಮುಂದೆಯೂ ಸೌಕರ್ಯ ಒದಗಿಸಲಾಗುವುದು ಎಂದು ಹೇಳಿದರು. ಊಲವಾಡಿ ಗ್ರಾಪಂ ಆಡಳಿತಾಧಿಕಾರಿ ಹಾಗೂ ಎಪಿಎಂಸಿ ಕಾರ್ಯದರ್ಶಿ ಉಮಾ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಕಾರಣ ಸನ್ಮಾನಿಸುತ್ತಿರುವುದು ಸಂತೋಷವಾಗುತ್ತಿದೆ ಎಂದರು.
ಊಲವಾಡಿ ಗ್ರಾಪಂ ವತಿಯಿಂದ ಶಾಲಾ ಮುಖ್ಯೋಪಾಧ್ಯಾಯ ಆರ್.ನಾರಾಯಣರೆಡ್ಡಿ, ಶಿಕ್ಷಕರಾದ ಎಂ.ಎನ್.ಭಾಗ್ಯಲಕ್ಷ್ಮೀ, ಕಾಂಚನ, ಯಶೋಧಮಣಿ, ನವೀನ್‌ಕುಮಾರ್, ಜಿ. ಲಕ್ಷಿ¾àದೇವಮ್ಮ, ಬಾಷಾಸಾಬ್, ಪ್ರಥಮ ದರ್ಜೆ ಸಹಾಯಕ ಮಲ್ಲಿಕಾರ್ಜುನ್, ಶಿವಾನಂದ್ ಅವರನ್ನು ಸನ್ಮಾನಿಸಿದರು. ಉಪನ್ಯಾಸಕ ಸಂಘದ ಜಿಲ್ಲಾಧ್ಯಕ್ಷ ಮುನಿರೆಡ್ಡಿ, ಗ್ರಾಪಂ ಕಾರ್ಯದರ್ಶಿ ಆರ್.ವೆಂಕಟೇಶ್, ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.