2 ಲಕ್ಷ ರೂ. ಮೌಲ್ಯದ ಗಾಂಜಾ ವಶ
Team Udayavani, Sep 6, 2020, 3:07 PM IST
ಬೆಳಗಾವಿ: ಜಿಲ್ಲೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ದಾಳಿ ನಡೆಸಿ ಸುಮಾರು 2.15 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡು ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 1.20 ಲಕ್ಷ ರೂ. ಮೌಲ್ಯದ 120 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸುಟ್ಟಟ್ಟಿ ಗ್ರಾಮದ ಲಕ್ಕಪ್ಪ ಸತ್ಯಪ್ಪ ಖೋತ ಹಾಗೂಲಕ್ಷ್ಮಣ ಲಕ್ಕಪ್ಪ ಖೋತ ಎಂಬುವರನ್ನು ಬಂಧಿಸಲಾಗಿದೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಾರಾಷ್ಟ್ರದ ಜತ್ತ ತಾಲೂಕಿನಜೀರಗಿಹಾಳ ಗ್ರಾಮದ ಸಾಗರ ಭರಮಣ್ಣ ಕಟ್ಟೇಕಾರ ಹಾಗೂ ಗುರುಲಿಂಗ ಹೊಳೆಪ್ಪಡೊಳ್ಳಿ ಎಂಬಾತರನ್ನು ಬಂಧಿಸಲಾಗಿದೆ. 39 ಸಾವಿರ ರೂ. ಮೌಲ್ಯದ ಸುಮಾರು 2 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. 17 ಕೆ.ಜಿ. ಗಾಂಜಾ ವಶ: ಚಿಕ್ಕೋಡಿಪೊಲೀಸ್ ಠಾಣಾ ವ್ಯಾಪ್ತಿಯ ಬೆಳಗಲಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ 17 ಕೆ.ಜಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮುಗಳಖೋಡ ಗ್ರಾಮದ ಶಿವಪ್ಪ ಸತ್ಯಪ್ಪ ಶಿರಗಾಂವಿಯನ್ನು ಬಂಧಿಸಲಾಗಿದೆ. ಸುಮಾರು 36 ಸಾವಿರ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಚಿಕ್ಕೋಡಿ ಪಿಎಸ್‌ಐ ಆರ್.ಎಚ್. ಬಗಲಿ, ಸಿಬ್ಬಂದಿಗಳಾದ ಬಿ.ಬಿ.ಮಾರ್ಗನಕೊಪ್ಪ, ಬಿ.ಎಚ್. ಮಾಳಿ, ಎಸ್.ಎಂ.ಚೌಗಲಾ, ಕೆ.ವಿ. ಚೆಲ್ಲಿಕೇರಿ, ಆರ್.ಆರ್. ಕರಿಗಾರ, ಬಿ.ಎ. ಲಕ್ಕನ್ನವರ, ಆರ್.ಎಲ್. ಶೀಳನ್ನವರ, ಎ.ಎಂ. ಮೆಂಡಿಗೇರಿ ದಾಳಿ ನಡೆಸಿದ್ದರು. ಚಿಕ್ಕೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಟಕುರ್ಕಿ ಗ್ರಾಮದ ಮಹಾಂತೇಶ ರಾಮಣ್ಣ ಕಲುತಿ ಎಂಬಾತನನ್ನು ಬಂಧಿಸಲಾಗಿದೆ. 17 ಸಾವಿರ ರೂ. ಮೌಲ್ಯದ 872 ಗ್ರಾಂ. ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.