ಆಂಧ್ರಪ್ರದೇಶ ಶತಮಾನಗಳ ಇತಿಹಾಸ ಇರುವ ದೇವಾಲಯದ ರಥಕ್ಕೆ ಬೆಂಕಿ; ಕಾರಣ ನಿಗೂಢ
Team Udayavani, Sep 6, 2020, 3:47 PM IST
ಅಮರಾವತಿ ; ಆಂಧ್ರ ಪ್ರದೇಶದ ಶತಮಾನಗಳ ಹಳೆಯ ದೇವಾಲಯವಾದ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿರುವ ಮರದ ರಥ ಬೆಂಕಿಗೆ ಆಹುತಿಯಾಗಿದೆ ಎಂದು ದೇವಾಲಯದ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ.
ಆಂದ್ರಪ್ರದೇಶದ ಪೂರ್ವ ಗೋದಾವರಿಯಲ್ಲಿರುವ ಪುರಾತನ ಪ್ರಸಿದ್ಧ ದೇವಾಲಯವಾದ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿರುವ 40 ಅಡಿ ಎತ್ತರದ ಮರದ ರಥವೊಂದು ಬೆಂಕಿಗೆ ಆಹುತಿಯಾದ ಘಟನೆ ರವಿವಾರ ಮುಂಜಾನೆ ಸಂಭವಿಸಿದೆ.
ಮರದ ರಥ ದೇವಳದ ಅವರದಲ್ಲಿರುವ ಕೊಠಡಿಯಲ್ಲಿ ನಿಲ್ಲಿಸಲಾಗಿತ್ತು ಆದರೆ ರವಿವಾರ ಮುಂಜಾನೆ 1 ಗಂಟೆಯಿಂದ ಮೂರು ಗಂಟೆಯ ಅವಧಿಯಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿದ್ದು ಘಟನೆಯ ಕುರಿತು ತನಿಖೆಗೆ ಮುಂದಾಗಿದ್ದಾರೆ,
ಶತಮಾನಗಳಷ್ಟು ಹಳೆಯದಾದ ಈ ರಥವನ್ನು ದೇವಸ್ಥಾನದ ವಿಶೇಷ ದಿನಗಳ ಸಂದರ್ಭ ರಥೋತ್ಸವಕ್ಕೆ ಹೊರಕ್ಕೆ ತರಲಾಗುತ್ತದೆ. ಆದರೆ ಕಳೆದ ಏಪ್ರಿಲ್ ತಿಂಗಳಲ್ಲಿ ರಥವನ್ನು ಶೆಡ್ ನಿಂದ ಹೊರಗಡೆ ತಂದಿದ್ದು ಆ ಬಳಿಕ ರಥವನ್ನು ದೇವಸ್ಥಾನದ ರಥದ ಶೆಡ್ ನಲ್ಲಿ ಇಡಲಾಗಿತ್ತು ಯಾರೋ ಕಿಡಿಗೇಡಿಗಳು ರಥಕ್ಕೆ ಬೆಂಕಿ ಹಚ್ಚಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಲ್ಲಿ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.
ತೇಗದ ಮರದಿಂದ ನಿರ್ಮಾಣ ಮಾಡಿರುವ ಈ ರಥವು ಶತಮಾನಗಳ ಇತಿಹಾಸವನ್ನು ಹೊಂದಿದೆ.
ಪೋಲೀಸರ ಹೇಳಿಕೆಯಂತೆ ರಥಕ್ಕೆ ಬೆಂಕಿ ಹೇಗೆ ಹಿಡಿಯಿತು ಎಂದು ತನಿಖೆ ನಡೆಸುತ್ತಿದ್ದೇವೆ, ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿರ ಬಹುದೋ ಅಥವಾ ಬೇರೆ ಯಾರಾದರೂ ಕಿಡಿಗೇಡಿಗಳು ಈ ಕೃತ್ಯವನ್ನು ಎಸಗಿದ್ದಾರೋ ಎಂಬ ಎರಡು ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ, ಕಳೆದ ಕೆಲವು ತಿಂಗಳ ಹಿಂದೆ ಆಂಧ್ರಪ್ರದೇಶದ ನೆಲ್ಲೂರು ತಾಲೂಕಿನಲ್ಲಿ ಮಾನಸಿಕ ಅಸ್ವಸ್ತನೊಬ್ಬ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಿದ್ದ ಘಟನೆಯೂ ಇದೆ ಹಾಗಾಗಿ ಎಲ್ಲಾ ಆಯಾಮಗಳಲ್ಲೂ ತನಿಖೆಯನ್ನು ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.