ಔರಾದ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲರ ಪುತ್ರ ಕೋವಿಡ್ ಸೋಂಕಿಗೆ ಬಲಿ
Team Udayavani, Sep 6, 2020, 6:30 PM IST
ಬೀದರ್ : ಔರಾದ ತಾಲೂಕಿನ ಸಂತಪೂರ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಮಾಜಿ ಶಾಸಕ ಗುಂಡಪ್ಪ ವಕೀಲ ಅವರ ಪುತ್ರ ಅನೀಲ ಗುಂಡಪ್ಪ ಬಿರಾದಾರ (47) ಹೆಮ್ಮಾರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಹೈದ್ರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನೀಲ ರವಿವಾರ ಮಧ್ಯಾಹ್ನ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೋವಿಡ್ ಲಕ್ಷಣ ಕಂಡು ಬಂದ ಹಿನ್ನಲೆಯಲ್ಲಿ ಬೀದರಿನಲ್ಲಿ ಆರಂಭಿಕ ಚಿಕಿತ್ಸೆ ಪಡೆದು, ನಂತರ ಕಳೆದ 10 ದಿನಗಳಿಂದ ಹೈದ್ರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆ ತೀವ್ರವಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಮೃತ ಅನೀಲ್ ಇಬ್ಬರು ಪತ್ನಿಯರು, ಮಕ್ಕಳನ್ನು ಅಗಲಿದ್ದಾರೆ.
ಇತ್ತಿಚೆಗೆ ಮಾಜಿ ಶಾಸಕ ಗುಂಪ್ಪ ವಕೀಲ ಅವರಲ್ಲೂ ಕೋವಿಡ್ ವೈರಾಣು ಪತ್ತೆಯಾಗಿತ್ತು. ಬ್ರಿಮ್ಸ್ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅನೀಲ್ ಅವರ ತಾಯಿಗೂ ಸೋಂಕು ತಗುಲಿದ್ದು, ಅವರೂ ಸಹ ಹೈದ್ರಾಬಾದ್ ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.