ಕೋವಿಡ್: ಹಾಟ್ ಸ್ಪಾಟ್ ದೇಶಗಳ ಪೈಕಿ ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ
24 ಗಂಟೆಗಳಲ್ಲಿ 90 ಸಾವಿರಕ್ಕೂ ಅಧಿಕ ಪ್ರಕರಣ ಪತ್ತೆಯಾದ ಮೊದಲ ದೇಶ ಎಂಬ ಕುಖ್ಯಾತಿಗೂ ಭಾರತ ಪಾತ್ರವಾಗಿದೆ
Team Udayavani, Sep 7, 2020, 10:15 AM IST
Representative Image
ನವದೆಹಲಿ: ದೇಶದಲ್ಲಿ ಕೊರೊನಾ ವ್ಯಾಪಿಸುವಿಕೆ ತೀವ್ರಗೊಂಡಿದ್ದು, ಇದೇ ಮೊದಲ ಬಾರಿಗೆ ಒಂದೇ ದಿನ ದಾಖಲೆಯ 90,632 ಕೋವಿಡ್ ಪ್ರಕರಣಗಳು
ಪತ್ತೆಯಾಗಿವೆ. ಈ ಮೂಲಕ ಭಾರತವು ಬ್ರೆಜಿಲ್ ಅನ್ನೂ ಹಿಂದಿಕ್ಕಿ, ಜಗತ್ತಿನ ಹಾಟ್ ಸ್ಪಾಟ್ ದೇಶಗಳ ಪೈಕಿ ಎರಡನೇ ಸ್ಥಾನಕ್ಕೇರಿದೆ.
ಬ್ರೆಜಿಲ್‌ನಲ್ಲಿ ಭಾನುವಾರ ಕೋವಿಡ್ ದೃಢಪಟ್ಟವರ ಸಂಖ್ಯೆ 41.23 ಲಕ್ಷ ದಾಟಿದರೆ, ಭಾರತದ ಸೋಂಕಿತರ ಒಟ್ಟಾರೆ ಸಂಖ್ಯೆ 41.60 ಲಕ್ಷ ಮೀರಿದೆ. ಅಲ್ಲದೆ, 24 ಗಂಟೆಗಳಲ್ಲಿ 90 ಸಾವಿರಕ್ಕೂ ಅಧಿಕ ಪ್ರಕರಣ ಪತ್ತೆಯಾದ ಮೊದಲ ದೇಶ ಎಂಬ ಕುಖ್ಯಾತಿಗೂ ಭಾರತ ಪಾತ್ರವಾಗಿದೆ. 64.35 ಲಕ್ಷ ಸೋಂಕಿತರನ್ನು ಹೊಂದಿರುವ ಅಮೆರಿಕ ಜಗತ್ತಿನಲ್ಲೇ ಅತಿ ಹೆಚ್ಚು ಪ್ರಕರಣಗಳಿರುವ ದೇಶವಾಗಿದೆ.
ಶನಿವಾರ ಬೆಳಗ್ಗೆ 8ರಿಂದ ಸೋಮವಾರ ಬೆಳಗ್ಗೆ 8ರವರೆಗೆ 1,065 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದೇ ವೇಳೆ, ಈವರೆಗೆ 32 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಗುಣಮುಖ ಪ್ರಮಾಣ ಶೇ.77.32ಕ್ಕೇರಿಕೆಯಾಗಿದೆ. ಅಲ್ಲದೆ, ಒಂದೇ ದಿನದಲ್ಲಿ ದಾಖಲೆಯ 70 ಸಾವಿರಕ್ಕೂ ಹೆಚ್ಚು ರೋಗಿಗಳು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಈ ನಡುವೆ, ಬಾಲಿವುಡ್ ನಟ ಅರ್ಜುನ್ ಕಪೂರ್ ಹಾಗೂ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ದೀಪೇಂದರ್ ಸಿಂಗ್ ಹೂಡಾಗೆ ಕೊರೊನಾ ದೃಢಪಟ್ಟಿದೆ.
ಸೆ. 5ರವರೆಗೆ 15 ಲಕ್ಷದಷ್ಟುಭಾರತೀಯರು ಸ್ವದೇಶಕ್ಕೆ
ಕೋವಿಡ್ ಲಾಕ್‌ಡೌನ್ ಬಳಿಕ ವಿದೇಶಗಳಲ್ಲಿದ್ದ ಸುಮಾರು 15 ಲಕ್ಷ ಭಾರತೀಯರು ಸ್ವದೇಶಕ್ಕೆ ವಾಪಸಾಗಿದ್ದಾರೆ. ಆ ಪೈಕಿ 4.5 ಲಕ್ಷಕ್ಕೂ ಅಧಿಕ ಮಂದಿ ‘ವಂದೇ ಭಾರತ್’ ಯೋಜನೆಯಡಿ ವ್ಯವಸ್ಥೆ ಮಾಡಲಾಗಿದ್ದ ವಿಶೇಷ ವಿಮಾನಗಳ ಮೂಲಕ ಆಗಮಿಸಿದ್ದಾರೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಲಾಕ್ ಡೌನ್‌ನಿಂದಾಗಿ ವಿದೇಶಗಳಲ್ಲಿ ಅತಂತ್ರರಾಗಿದ್ದ ಭಾರತೀಯರನ್ನು ಕರೆತರಲೆಂದು ಮೇ 6ರಿಂದ ವಂದೇ ಭಾರತ್‌ನಡಿ ವಿಮಾನಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಹಳಷ್ಟು ಜನರು ಇದರ ಲಾಭ ಪಡೆದುಕೊಂಡು ತಾಯ್ನಾಡಿಗೆ ಮರಳಿದ್ದಾರೆ. ಸೆ. 5ರಂದು 4,059 ಭಾರತೀಯರು ಸ್ವದೇಶಕ್ಕೆ ಬಂದಿಳಿದಿದ್ದಾರೆ ಎಂದೂ ಪುರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.