ಡ್ರಗ್ ಪ್ರಕರಣ: ಗಡಿಯಲ್ಲಿ ಅಲರ್ಟ್
Team Udayavani, Sep 7, 2020, 2:01 PM IST
ಶಿಡ್ಲಘಟ್ಟ: ರಾಜ್ಯದಲ್ಲಿ ಡ್ರಗ್ಸ್ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಆಂಧ್ರಕ್ಕೆ ಹೊಂದುಕೊಂಡಿರುವ ಚಿಕ್ಕಬಳ್ಳಾಪುರದಲ್ಲಿ ಪೊಲೀಸ್ ಇಲಾಖೆಯ ಹೈಅಲರ್ಟ್ ಆಗಿ ಕೆಲಸವನ್ನು ನಿರ್ವಹಿಸುತ್ತಿದೆ. ಎಸ್ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಇಲಾಖೆ ಸಿಬ್ಬಂದಿ ಹದ್ದಿನ ಕಣ್ಣಿಟ್ಟು ರಾಷ್ಟ್ರೀಯ ಹೆದ್ದಾರಿ 7, ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳ ಮೂಲಕ ತೆರಳುವ ವಾಹನಗಳನ್ನು ತಪಾಸಣೆ ನಡೆಸಲು ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ.
ಜೊತೆಗೆ ಶ್ವಾನದಳದ ಮೂಲಕ ವಾಹನ ತಪಾಸಣೆ ನಡೆಸುವ ಕಾರ್ಯ ಭರದಿಂದ ಸಾಗಿದೆ. ಜಿಲ್ಲೆಯ ಬಾಗೇಪಲ್ಲಿ, ಹಿಂದೂಪುರಕ್ಕೆ ಸಮೀಪದಲ್ಲಿರುವ ಗೌರಿಬಿದನೂರು, ಪಾತಪಾಳ್ಯ, ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಹಾಗೂ ಚೇಳೂರು ಹೋಬಳಿ ಸಹಿತ ಜಿಲ್ಲೆಯ ಐದು ಕಡೆ ಚೆಕ್‌ಪೋಸ್ಟ್ ಸ್ಥಾಪಿಸಿ ಬೆಂಗಳೂರು, ಹೈದ್ರಾಬಾದ್ ಸೇರಿ ಇನ್ನಿತರೆ ಪ್ರದೇಶಗಳಿಂದ ಬರುವ ವಾಹನ ಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚಿಗೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಿ ಡಿಜಿಪಿ ಅವರು, ಜಿಲ್ಲೆಯಲ್ಲಿ ಗಾಂಜಾ ಪ್ರಕರಣ ಭೇದಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಸೂಚನೆ ನೀಡಿದ್ದರು.
ಉದಯವಾಣಿಯೊಂದಿಗೆ ಜಿಲ್ಲಾ ಎಸ್ಪಿ ಮಿಥುನ್‌ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಗಡಿ ಭಾಗಗಳಲ್ಲಿ ಐದು ಕಡೆ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಅನುಮಾನ ಬಂದ ವಾಹನಗಳನ್ನು ಶ್ವಾನ ದಳದ ಮೂಲಕ ತಪಾಸಣೆ ನಡೆಸುವ ಕೆಲಸವನ್ನು ಮಾಡುತ್ತಿದ್ದೇವೆ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ- ಜಿಲ್ಲಾ ಮತ್ತು ತಾಲೂಕು ಹೆದ್ದಾರಿಗಳ ಮೂಲಕ ಹಾದು ಹೋಗುವ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಮೇಲೆ ಕಣ್ಣಿರಿಸಲಾಗಿದೆ. ಸಾರ್ವಜನಿ ಕರು ಸಹ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.