ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನಟಿ ರಾಗಿಣಿ ದ್ವಿವೇದಿ
Team Udayavani, Sep 7, 2020, 2:39 PM IST
ಬೆಂಗಳೂರು: ಮಾದಕ ವಸ್ತು ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಗೆ ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ. ಹತ್ತು ದಿನಗಳ ಕಾಲ ನಟಿ ರಾಗಿಣಿಯನ್ನು ಕಸ್ಟಡಿಗೆ ನೀಡಬೇಕೆಂದು ಸಿಸಿಬಿ ಪೊಲೀಸರು ಮನವಿ ಮಾಡಿದ್ದರು. ಆದರೆ ಐದು ದಿನಗಳ ಕಾಲ ಮಾತ್ರ ಕಸ್ಟಡಿಗೆ ನೀಡಲಾಗಿದೆ ಎಂದು ವರದಿಯಾಗಿದೆ.
ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ಕುರಿತು ತನಿಖೆ ಆರಂಭಿಸಿದ್ದ ಸಿಸಿಬಿ ಪೊಲೀಸರು ರಾಗಿಣಿಯ ಆಪ್ತ ಡ್ರಗ್ ಪೆಡ್ಲರ್ ರವಿಶಂಕರ್ನನ್ನು ವಶಕ್ಕೆ ಪಡೆದಿದ್ದರು. ಆಗ ಆತ ರಾಗಿಣಿಯ ಹೆಸರನ್ನೂ ಹೇಳಿದ್ದ ಎನ್ನಲಾಗಿದೆ. ಇದರ ಬೆನ್ನಲ್ಲೇ ಹಿನ್ನೆಲೆಯಲ್ಲಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿ, ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಅದೇ ದಿನ ಸಂಜೆ ನಟಿಯನ್ನು ಬಂಧಿಸಲಾಗಿತ್ತು.
ಇದನ್ನೂ ಓದಿ: ಬೀದಿ ನಾಯಿ ಸಂಬರಗಿಯನ್ನು ಹಾಗೆ ಬಿಡಬೇಡಿ, ನಾನು ಸತ್ತರೂ ಅವನನ್ನು ಬಿಡುವುದಿಲ್ಲ: ಸಂಜನಾ
ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಿ ಮೂರು ದಿನಗಳ ಕಾಲ ವಿಚಾರಣೆಗಾಗಿ ಪೊಲೀಸರ ವಶಕ್ಕೆ ಪಡೆಯಲಾಗಿತ್ತು. ಆದರೆ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಅನಾರೋಗ್ಯದ ನೆಪವೊಡ್ಡಿ ನಟಿ ವಿಚಾರಣೆಗೆ ಸಹಕಾರ ನೀಡಿರಲಿಲ್ಲ ಎನ್ನಲಾಗಿದೆ. ಈ ಕಾರಣದಿಂದ ಇಂದು ಮತ್ತೆ ಐದು ದಿನಗಳ ಕಾಲ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Waqf Notice: ಒಂದಿಂಚು ಜಮೀನು ವಕ್ಫ್ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ
MUST WATCH
ಹೊಸ ಸೇರ್ಪಡೆ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.