ವಾಹನ ನೋಂದಣಿ ಇಳಿಕೆ; ಶೇ.60ರಷ್ಟೇ ಗಳಿಕೆ

ಲಾಕ್‌ಡೌನ್‌ ಎಫೆಕ್ಟ್ ನಿಂದ ಆರ್‌ಟಿಒ ಕಚೇರಿ ಆದಾಯ ಕೊಕ್ಕೆ

Team Udayavani, Sep 7, 2020, 4:45 PM IST

ವಾಹನ ನೋಂದಣಿ ಇಳಿಕೆ; ಶೇ.60ರಷ್ಟೇ ಗಳಿಕೆ

ರಾಯಚೂರು: ಪ್ರತಿ ವರ್ಷ ನಿರೀಕ್ಷಿತ ಗುರಿ ಮೀರಿ ಆದಾಯ ಸಂಗ್ರಹಿಸುತ್ತಿದ್ದ ಪ್ರಾದೇಶಿಕ ಸಾರಿಗೆ ಕಚೇರಿಗೆ ಈ ಬಾರಿ ಕೋವಿಡ್ ಲಾಕ್‌ಡೌನ್‌ ಪರಿಣಾಮ ಜೋರಾಗಿದೆ. ಪ್ರಸಕ್ತ ವರ್ಷದ ನಾಲ್ಕು ತಿಂಗಳಲ್ಲಿ ಶೇ.40 ಆದಾಯಕ್ಕೆ ಕೊಕ್ಕೆ ಬಿದ್ದಿದ್ದು, ಇಂದಿಗೂ ಚೇತರಿಕೆ ಕಾಣಿಸುತ್ತಿಲ್ಲ.

ಲಾಕ್‌ಡೌನ್‌ ಪರಿಣಾಮ ಅಟೋಮೊಬೈಲ್‌ ಕ್ಷೇತ್ರದ ಮೇಲೂ ಭಾರೀ ಪರಿಣಾಮ ಬೀರಿದೆ. ಜನರಿಗೆ ಆದಾಯವೇ ನಿಂತು ಹೋದ ಪರಿಣಾಮ ಹೊಸ ವಾಹನಗಳ ಖರೀದಿಯಂತೂ ದೂರದ ಮಾತಾಗಿದೆ. ಇನ್ನೂ ಸುಮಾರು ಎರಡು ತಿಂಗಳು ಕಾಲ ಎಲ್ಲ ರೀತಿಯ ಕೆಲಸ ಕಾರ್ಯಗಳು ನಿಂತು ಹೋಗಿದ್ದರಿಂದ ಭಾರೀ ವಾಹನಗಳ ಖರೀದಿ ಕೂಡ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಇದರಿಂದ ವಾಹನ ನೋಂದಣಿಯಲ್ಲೂ ಭಾರೀ ಪ್ರಮಾಣದ ಕುಸಿತ ಕಂಡಿದೆ.

ಸಾಕಷ್ಟು ಹಿನ್ನಡೆ: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ನೋಂದಣಿಯಲ್ಲಿ ಸಾಕಷ್ಟು ಹಿನ್ನಡೆ ಕಂಡು ಬಂದಿದೆ. 2019-20ನೇ ಸಾಲಿನಲ್ಲಿ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಇಲಾಖೆಗೆ ಮಾಸಿಕ 5.58 ಕೋಟಿ ರೂ. ಗುರಿ ಇದ್ದರೆ, 2019ನೇ ಸಾಲಿನ ಏಪ್ರಿಲ್‌ನಲ್ಲಿ ಶೇ.81.74ರಷ್ಟು, ಮೇ ತಿಂಗಳಲ್ಲಿ ಶೇ.90.34ರಷ್ಟು, ಜೂನ್‌ನಲ್ಲಿ ಶೇ.97.17ರಷ್ಟು, ಜುಲೈನಲ್ಲಿ ಶೇ.92.99ರಷ್ಟು ಗುರಿ ಸಾಧಿಸಲಾಗಿತ್ತು. ಒಟ್ಟಾರೆ ಶೇ.90ರಷ್ಟು ಗುರಿ ಸಾಧಿಸಲಾಗಿತ್ತು. ಆದರೆ, 2020ರ ಏಪ್ರಿಲ್‌ನಲ್ಲಿ ಕೇವಲ ಶೇ.18.10ರಷ್ಟು, ಮೇನಲ್ಲಿ ಶೇ.47.39ರಷ್ಟು, ಜೂನ್‌ನಲ್ಲಿ ಶೇ.85.45ರಷ್ಟು, ಜುಲೈನಲ್ಲಿ ಶೇ.89.14ರಷ್ಟು ಗುರಿ ಸಾ ಧಿಸಲಾಗಿದೆ. ಒಟ್ಟಾರೆ ಶೇ.60ರಷ್ಟು ಮಾತ್ರ ಗುರಿ ಸಾಧನೆ ಆಗಿದೆ. ಜಿಲ್ಲೆಯ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಪ್ರತಿ ವರ್ಷ ತಿಂಗಳಿಗೆ 2-3 ಸಾವಿರ ಹೊಸ ವಾಹನಗಳು ನೋಂದಣಿಯಾಗುತ್ತಿದ್ದವು. ಈ ವರ್ಷ ಮಾತ್ರ ಏಪ್ರಿಲ್‌-ಜುಲೈವರೆಗೆ ನಾಲ್ಕು ತಿಂಗಳಲ್ಲಿ ಕೇವಲ 4,007 ಬೈಕ್‌, 240 ಕಾರ್‌, 337 ಟ್ರ್ಯಾಕ್ಟರ್‌ ಗಳು ಮಾತ್ರ ನೋಂದಣಿಯಾಗಿವೆ. ಇನ್ನು ಭಾರೀ ವಾಹನಗಳಾದ ಲಾರಿ, ಟಿಪ್ಪರ್‌ಗಳು ಬೆರಳೆಣಿಯಷ್ಟು ಮಾತ್ರ ನೋಂದಣಿಯಾಗಿವೆ.

ಖರೀದಿಗೆ ಹಿಂದೇಟು: ಕಳೆದ ಆರು ತಿಂಗಳಿಂದ ಜನರಿಗೆ ಕೆಲಸವಿಲ್ಲದೇ, ಉತ್ತಮ ಆದಾಯವಿಲ್ಲದೇ ಜೀವನ ನಿರ್ವಹಣೆಯೇ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಹೊಸ ವಾಹನಗಳ ಖರೀದಿಗೆ ಜನ ಹಿಂದೇಟು ಹಾಕುತ್ತಿದ್ದಾರೆ. ಅದರ ಬದಲಿಗೆ ಹಳೇ ವಾಹನಗಳನ್ನೇ ಸಾವಿರಾರು ರೂ. ಖರ್ಚು ಮಾಡಿ ದುರಸ್ತಿ ಮಾಡಿಸಿಕೊಳ್ಳುತ್ತಿದ್ದಾರೆ. ಕೃಷಿ ಚಟುವಟಿಕೆ ಶುರುವಾಗಿದ್ದರಿಂದ ರೈತಾಪಿ ವರ್ಗದ ಜನ ಹಳೇ ವಾಹನಗಳನ್ನೇ ಹೆಚ್ಚು ದುರಸ್ತಿ ಮಾಡಿಸಿಕೊಳ್ಳುತ್ತಿದ್ದಾರೆ. ಹೊಸ ಬೈಕ್‌ ಖರೀದಿಸಲು 80 ಸಾವಿರ ರೂ.ದಿಂದ ಒಂದು ಲಕ್ಷ ರೂ. ಬೇಕು. ಅದರ ಬದಲಿಗೆ ಹಳೇ ಬೈಕ್‌ಗಳನ್ನೇ ದುರಸ್ತಿ ಮಾಡಿಕೊಳ್ಳುವುದು ಸೂಕ್ತ ಎನ್ನುತ್ತಾರೆ ಅಟೊಮೊಬೈಲ್ಸ್‌ ವ್ಯಾಪಾರಿ ವಿಜಯ್‌.

ಲಾಕ್‌ಡೌನ್‌ನಿಂದಾಗಿ ಅಟೋಮೊಬೈಲ್‌ ವಲಯ ತುಂಬ ದುರ್ಬಲಗೊಂಡಿದೆ. ಹೀಗಾಗಿ ವಾಹನ ನೋಂದಣಿಯಲ್ಲಿ ಶೇ.40ರಷ್ಟು ಹಿನ್ನಡೆಯಾಗಿದೆ. ಪ್ರತಿ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸಾಕಷ್ಟು ಹಿಂದುಳಿದಿದ್ದೇವೆ. ಕಳೆದ ತಿಂಗಳಿನಿಂದ ತುಸು ಚೇತರಿಕೆ ಕಂಡು ಬರುತ್ತಿದೆ. ಬಹುಶಃ ಮುಂಬರುವ ದಿನಗಳಲ್ಲಿ ಆದಾಯ ಹೆಚ್ಚಾಗಬಹುದು. -ಜಿ.ಪಿ. ವಿಶಾಲ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ, ರಾಯಚೂರು

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.