ಲಾಠಿಚಾರ್ಜ್‌ಗೆ ಕಾರಣರಾದವರಿಗೆ ಶಿಕ್ಷೆಯಾಗಲಿ

Team Udayavani, Sep 7, 2020, 5:25 PM IST

Ballary-tdy-1

ಬಳ್ಳಾರಿ: ಮಧ್ಯಪ್ರದೇಶದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್‌ಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿ ಸಬೇಕು. ಪ್ರತಿಭಟನಾಕಾರರ ವಿರುದ್ಧ ಮಾಡಿರುವ ಸುಳ್ಳು ಆರೋಪಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ನಗರದ ಡಿಸಿ ಕಚೇರಿ ಆವರಣದಲ್ಲಿ ಎಐಡಿವೈಒ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಮಧ್ಯ ಪ್ರದೇಶದ ವಿವಿಧ ಜಿಲ್ಲೆಗಳ 1500ಕ್ಕೂ ಹೆಚ್ಚು ಯುವಕರು ತಮ್ಮ ಜಿಲ್ಲೆಗಳಲ್ಲಿ ನಿರಂತರ ಹಲವಾರು ಪ್ರತಿಭಟನೆಗಳ ನಂತರ ಭೋಪಾಲ್‌ನಲ್ಲಿ ಶುಕ್ರವಾರ ಸಭೆ ಸೇರಿದ್ದರು. ಎಲ್ಲರಿಗೂ ಉದ್ಯೋಗ ನೀಡಿ, ಎಸ್‌ಎಸ್‌ಸಿ, ರೈಲ್ವೆ, ಶಿಕ್ಷಕರು ಮತ್ತು ಪೊಲೀಸ್‌ ಇಲಾಖೆ ನೇಮಕಾತಿ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಬೇಕು. ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬ ಬೇಡಿಕೆಗಳೊಂದಿಗೆ ಮುಖ್ಯಮಂತ್ರಿ ಶಿವರಾಜ್‌ಸಿಂಗ್‌ ಚೌಹಾಣ್‌ ಅವರಿಗೆ ಮನವಿಪತ್ರ ಸಲ್ಲಿಸಲು ಮುಂದಾಗಿದ್ದರು. ಆದರೆ, ಅವರ ಅಹವಾಲಗಳನ್ನು ಕೇಳುವಬದಲು, ಮಧ್ಯಪ್ರದೇಶ ಪೊಲೀಸರು ಅವರ ಮೇಲೆ ಲಾಠಿಚಾರ್ಜ್‌ ಮಾಡಿದ್ದಾರೆ. ಇದರಿಂದ ಅನೇಕರು ಗಾಯಗೊಂಡಿದ್ದಾರೆ. ಈ ಹೋರಾಟದ ನಾಯಕತ್ವ ವಹಿಸಿದ್ದ ಎಐಡಿವೈಓ ಮಧ್ಯಪ್ರದೇಶ ರಾಜ್ಯ ಕಾರ್ಯದರ್ಶಿ ಪ್ರಮೋದ್‌ ನಾಮದೇವ್‌ ಅವರೊಂದಿಗೆ ನೂರಾರು ಯುವಕರನ್ನು ಬಂಧಿಸಲಾಗಿದೆ. ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದು ಸರಿಯಲ್ಲ ಎಂದು ಪ್ರತಿಭಟನಾನಿರತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಸ್‌ಎಸ್‌ಸಿ, ಶಿಕ್ಷಕರು, ರೈಲ್ವೆ ಮತ್ತು ಪೊಲೀಸ್‌ ನೇಮಕಾತಿ ಪರೀಕ್ಷೆಗಳ ಫಲಿತಾಂಶಗಳನ್ನು ತಕ್ಷಣ ಪ್ರಕಟಿಸಬೇಕು. ಮಧ್ಯಪ್ರದೇಶದಲ್ಲಿ ಮಾತ್ರವಲ್ಲ. ದೇಶವ್ಯಾಪಿ ಯುವಜನರಿಗೆ ಉದ್ಯೋಗವನ್ನು ಖಾತ್ರಿಪಡಿಸಬೇಕು. ದೇಶಾದ್ಯಂತ ಸರ್ಕಾರಿ ಇಲಾಖೆಗಳಲ್ಲಿ ಖಾಲಿಯಿರುವ 23 ಲಕ್ಷ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಅಲ್ಲದೇ, ಎನ್‌ ಆರ್‌ಎ ರಾಷ್ಟೀಯ ನೇಮಕಾತಿ ಸಂಸ್ಥೆಯ ಯುವ ವಿರೋಧಿ ನೀತಿ ವಿರುದ್ಧ, ನಿರುದ್ಯೋಗದ ವಿರುದ್ಧ ದೇಶಾದ್ಯಂತ ಪ್ರಬಲ ಯುವ ಚಳವಳಿಯನ್ನು ನಿರ್ಮಿಸಲು ಯುವ ಸಮುದಾಯದ ಪ್ರತಿಯೊಂದು ವಿಭಾಗವು ಮುಂದೆ ಬರಬೇಕು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದ್ದಾರೆ.

ಬಳಿಕ ಜಿಲ್ಲಾಡಳಿತದ ಮೂಲಕ ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲಾಯಿತು. ಎಐಡಿವೈಒ ಸಂಘಟನೆಯ ಎನ್‌.ಕೆ.ರಾಜ, ರಾಜಶೇಖರ್‌, ಹೊನ್ನೂರಸ್ವಾಮಿ, ಪಂಪ, ಪ್ರಭು ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.