ನಟಿ ರಾಗಿಣಿ ಉರುಳು ಮತ್ತಷ್ಟು ಬಿಗಿ; ಡ್ರಗ್ ಪೆಡ್ಲರ್ ನಿಯಾಜ್ ಬಂಧನ
ರಾಗಿಣಿ, ರಾಜಕಾರಣಿಗಳ ಮಕ್ಕಳು, ಸಿಲೆಬ್ರಿಟಿಗಳ ಜತೆ ಸಂಪರ್ಕ
Team Udayavani, Sep 8, 2020, 6:10 AM IST
ಬೆಂಗಳೂರು: ಚಿತ್ರ ನಟಿ ರಾಗಿಣಿಯನ್ನು ಮತ್ತೆ ಐದು ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿರುವ ಕೇಂದ್ರ ಅಪರಾಧ ವಿಭಾಗದ ಪೊಲೀಸರು ರಾಗಿಣಿಯ ಬ್ಯಾಂಕ್ ವ್ಯವಹಾರಗಳ ಕುರಿತು ತನಿಖೆ ಚುರುಕುಗೊಳಿಸಿದ್ದಾರೆ.
ಮತ್ತೂಂದೆಡೆ ರಾಗಿಣಿ ಮತ್ತಿತರ ಆರೋಪಿಗಳ ಜತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಕೇರಳ ಮೂಲದ ನಿಯಾಜ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಬಂಧನಕ್ಕೊಳಗಾಗಿರುವ ಲೂಮ್ ಪೆಪ್ಪರ್ ಸಾಂಬಾ ಜತೆ ರಾಗಿಣಿ ಹಣಕಾಸಿನ ವ್ಯವಹಾರ ನಡೆಸಿರುವುದು ಗೊತ್ತಾಗಿದೆ. ಆಕೆಯ ಬ್ಯಾಂಕ್ ಖಾತೆ ವಿವರ ಮತ್ತು ವಾಟ್ಸ್‌ಆ್ಯಪ್‌ನಲ್ಲಿ ಕೆಲವು ಮಾಹಿತಿ ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದು ಪ್ರಮುಖ ಬೆಳವಣಿಗೆಯಲ್ಲಿ ನಾಲ್ಕನೇ ಆರೋಪಿ, ಉದ್ಯಮಿ ಪ್ರಶಾಂತ್ ರಂಕಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಎಂಬಾಕೆಯನ್ನು ಸಿಸಿಬಿ ಪೊಲೀಸರು ಎರಡು ದಿನಗಳಿಂದ ವಿಚಾರಣೆಗೊಳಪಡಿಸಿದ್ದು, ಸೋಮವಾರ ರಾತ್ರಿ ಬಿಟ್ಟು ಕಳುಹಿಸಿದ್ದಾರೆ.
ಕೇರಳ ಮೂಲದ ನಿಯಾಜ್ ಹಲವು ವರ್ಷಗಳಿಂದ ಬೆಂಗಳೂರಿನ ಇಂದಿರಾನಗರದಲ್ಲಿ ವಾಸವಾಗಿದ್ದಾನೆ. ರಿಯಲ್ ಎಸ್ಟೇಟ್ ವ್ಯವಹಾರ ಮತ್ತು ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ನಡೆಸುವ ಆತ ಇಂದಿರಾನಗರ ಮತ್ತು ವೈಟ್‌ಫೀಲ್ಡ್ ಬಳಿ ಕ್ಲಬ್‌ಗಳನ್ನು ನಡೆಸುತ್ತಿದ್ದಾನೆ. ಇದರೊಂದಿಗೆ ಫ್ಯಾಷನ್ ಶೋ ಕುರಿತು ಜಾಹೀರಾತು ಪ್ರಕಟಿಸುವ ಜಾಹೀರಾತು ಸಂಸ್ಥೆಯನ್ನೂ ಆತ ಹೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಭರ್ಜರಿ ಕಾರ್ಯಾಚರಣೆ
ಮಾದಕ ವಸ್ತು ದಂಧೆ ಬಗ್ಗೆ ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿರುವ ನಡುವೆಯೇ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ನಾಲ್ಕೈದು ದಿನಗಳಲ್ಲಿ 28 ಮಂದಿಯನ್ನು ಬಂಧಿಸಿ, 2 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ
ಪೊಲೀಸರ ಕಾರ್ಯಾಚರಣೆಯಲ್ಲಿ ಡಾರ್ಕ್‌ವೆಬ್ ಸೈಟ್ ಮೂಲಕ ಐಷಾರಾಮಿ ಮಾದಕ ವಸ್ತುಗಳನ್ನು ಖರೀದಿಸಿ ನಗರದಲ್ಲಿ ಮಾರಾಟ ಮಾಡು ತ್ತಿದ್ದ 28 ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ವಶಕ್ಕೆ ಪಡೆದ ಮಾದಕ ವಸ್ತುಗಳ ಪೈಕಿ ಎಂಡಿಎಂಎ, ಎಲ್‌ಎಸ್‌ಡಿ, ಗಾಂಜಾ, ಕೋಕೇನ್, ಬ್ರೌನ್ ಶುಗರ್, ಕ್ರಿಸ್ಟಲ್, ಹೈಡ್ರೋ ಗಾಂಜಾ ಸೇರಿವೆ. ಆರೋಪಿಗಳ ಪೈಕಿ ವಿದೇಶಿಯರು, ನೆರೆ ರಾಜ್ಯದವರು, ವಿದ್ಯಾರ್ಥಿಗಳು ಇದ್ದಾರೆ. ಇವರಲ್ಲಿ ಕೆಲವರು ವ್ಯಸನಿಗಳಾಗಿದ್ದು, ಪೆಡ್ಲರ್‌ಗಳಾಗಿ ಬದಲಾಗಿದ್ದಾರೆ. ವಿದ್ಯಾರ್ಥಿಗಳು, ಐಟಿ- ಬಿಟಿ ಉದ್ಯೋಗಿಗಳು, ಯುವ ಸಮೂಹವನ್ನು ಗುರಿಯಾಗಿಸಿಕೊಂಡು ದಂಧೆ ನಡೆಸುತ್ತಿದ್ದರು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್ ಮಾರುವೇಷ’!
Naxal Activity: ರಾಜ್ಯದಲ್ಲಿ ನಕ್ಸಲ್ ಚಳವಳಿ ಅಂತ್ಯಗೊಂಡೀತೇ?
Debt Reduction: ನಬಾರ್ಡ್ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ
Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
MUST WATCH
ಹೊಸ ಸೇರ್ಪಡೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.