ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ


Team Udayavani, Sep 8, 2020, 5:21 PM IST

ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

ಹಾವೇರಿ: ಜಿಲ್ಲೆಯ ರಾಣಿಬೆನ್ನೂರ ತಾಲೂಕು ಚಿಕ್ಕಕುರುವತ್ತಿ ಗ್ರಾಮದಲ್ಲಿ ಮಂಜೂರಾಗಿರುವ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಕೂಡಲೇ ಚಾಲನೆ ನೀಡಬೇಕು ಎಂದು ಒತ್ತಾಯಿಸಿ ಡಾ| ಬಿ.ಆರ್‌. ಅಂಬೇಡ್ಕರ್‌ ಅಭಿಮಾನಿಗಳ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣನವರಿಗೆ ಮನವಿ ಸಲ್ಲಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಕೆಲಹೊತ್ತು ಪ್ರತಿಭಟನೆ ನಡೆಸಿದ ಸಾರ್ವಜನಿಕರು ಚಿಕ್ಕಕುರುವತ್ತಿ ಗ್ರಾಮಕ್ಕೆ 2019-20ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಇದೇ ಅವ ಧಿಯಲ್ಲಿ ಅನುಮೋದನೆಗೊಂಡ ಹರನಗಿರಿ ಗ್ರಾಮದಲ್ಲಿ ಆ. 24ರಂದು ಶಾಸಕರು ಭವನ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ. ಆದರೆ ಚಿಕ್ಕಕುರುವತ್ತಿ ಗ್ರಾಮದ ಭವನ ನಿರ್ಮಾಣಕ್ಕೆ ಮೀನಮೇಷಎಣಿಸುತ್ತಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ.

ಗ್ರಾಮಕ್ಕೆ ಮಂಜೂರಾಗಿರುವ ಭವನವನ್ನು ನಿರ್ಮಿಸಲು ಶಾಸಕರು ಕೂಡಲೇ ಮುಂದಾಗಬೇಕು. ಇಲ್ಲವಾದರೆ ಇದು ಸಂವಿಧಾನ ಶಿಲ್ಪಿಗೆ ಶಾಸಕರು ಮಾಡುವ ಅವಮಾನವಾಗಲಿದೆ. ಈಗಾಗಲೇ ತಹಶೀಲ್ದಾರ್‌ಗೂ ಈ ಕುರಿತು ಮನವಿ ಸಲ್ಲಿಸಲಾಗಿದೆ. ಆದರೆ ಅವರು ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ರಾಣಿಬೆನ್ನೂರ ಶಾಸಕರು ಹಾಗೂ ತಹಶೀಲ್ದಾರರು ದಲಿತರಿಗೆ ಸ್ಪಂದಿಸುತ್ತಿಲ್ಲ. ಅಲ್ಲದೇ ತಾಲೂಕಿನಲ್ಲಿ ಅಕ್ರಮವಾಗಿ ಮರಳು ದಂಧೆ, ಮಟ್ಕಾ, ಇಸ್ಪೀಟ್‌ ದಂಧೆ ಎಗ್ಗಿಲ್ಲದೇ ಸಾಗಿದೆ.ಕೂಡಲೇ ಅಕ್ರಮ ದಂಧೆಗಳಿಗೂ ಕಡಿವಾಣ ಹಾಕಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಜಿಲ್ಲಾಧಿಕಾರಿಗಳು ಕೂಡಲೇ ಚಿಕ್ಕಕುರುವತ್ತಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಪರಿಶೀಲಿಸಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಚಾಲನೆ ಕೊಡಿಸಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಮತ್ತೆ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ. ಮುಖಂಡರಾದ ಹನುಮಂತಪ್ಪ ಕಬ್ಟಾರ, ಹನುಮಂತಪ್ಪ ಪಾತ್ರೇರ, ರಮೇಶ ಮಲ್ಲಾಡದ, ಫಕ್ಕಿರೇಶ ಆನ್ವೇರಿ, ಸಿದ್ದಪ್ಪ ಆನ್ವೇರಿ, ಮಾಲತೇಶ ಬಾರ್ಕಿ, ಬಸಪ್ಪ ಹೊನ್ನತ್ತಿ, ವಿರುಪಾಕ್ಷಪ್ಪ ಹೊನ್ನತ್ತೆಪ್ಪನವರ, ಶಿವಪ್ಪ ಪಾತ್ರೇರ, ಬಸವರಾಜ ಬಸಾಪುರ, ಕುಮಾರ ಮಡಿವಾಳರ, ಬಸಪ್ಪ ರಾಮಣ್ಣನವರ, ಬಸವರಾಜ ಹಂಡ್ರೆ, ದುರ್ಗಪ್ಪ ಹಿರಿಯಣ್ಣನವರ, ರಮೇಶ ಹಂಚಿನಮನಿ ಇತರರಿದ್ದರು.

ಟಾಪ್ ನ್ಯೂಸ್

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.