ಆರ್ಥಿಕ ವೈಫಲ್ಯಕ್ಕೆ ದೇವರನ್ನು ದೂಷಿಸುತ್ತಿದ್ದಾರೆ: ರಾವುತ್
Team Udayavani, Sep 8, 2020, 7:00 PM IST
ಮುಂಬಯಿ, ಸೆ. 7: ಭಾರತದ ಆರ್ಥಿಕತೆಯ ವೈಫಲ್ಯಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇವರುಗಳನ್ನು ದೂಷಿಸುತ್ತಿದ್ದಾರೆ ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ರವಿವಾರ ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ಅವರು ಎಲ್ಲ ವಿಷಯಗಳ ಬಗ್ಗೆ ಮಾತನಾಡುತ್ತಾರೆ, ಆದರೆ ವಿಫಲವಾದ ಆರ್ಥಿಕತೆ ಮತ್ತು ಅದಕ್ಕೆ ಸಂಬಂ ಧಿತ ವಿಷಯಗಳನ್ನು ಸ್ಪರ್ಶಿಸಲು ನಿರಾಕರಿಸುತ್ತಾರೆ ಎಂದು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ರಾವುತ್ ಹೇಳಿದ್ದಾರೆ.
ಕೋವಿಡ್ ಸೋಂಕು ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಿದೆ. ಇದು ದೇವರ ಕಾರ್ಯವಾಗಿದ್ದು, ಇದು ಪ್ರಸಕ್ತ ಹಣಕಾಸು ವರ್ಷದಲ್ಲಿ ಹಿನ್ನಡೆ ಕಾಣಲಿದೆ ಎಂದು ಸೀತಾರಾಮನ್ ಕಳೆದ ತಿಂಗಳು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರಾವುತ್, ದೇವರನು ಅಪರಾಧಿ ಎಂದು ಉಚ್ಚರಿಸಿದರೆ, ಯಾವ ನ್ಯಾಯಾಲಯದಲ್ಲಿ ಅದರ ವಿಚಾರಣೆ ನಡೆಸಬೇಕು? ಎಂದಿದ್ದಾರೆ. ನೋಟು ಅಪಮೌಲಿÂàಕರಣದಿಂದ ಹಿಡಿದು ಲಾಕ್‌ಡೌನ್ ವರೆಗೆ ಆರ್ಥಿಕತೆಯು ಸಂಪೂರ್ಣವಾಗಿ ಪಾರ್ಶ್ವವಾಯುವಿಗೆ ಒಳಗಾಗಿದೆ. ಆದರೆ ಕೇಂದ್ರ ಹಣಕಾಸು ಸಚಿವೆ ಇದಕ್ಕೆ ನೇರವಾಗಿ ದೇವರನ್ನು ದೂಷಿಸಿದ್ದಾರೆ. ಇದು ಹಿಂದುತ್ವದ ಅವಮಾನ. ಇದು ಯಾವ ರೀತಿಯ ಹಿಂದುತ್ವ? ಎಂದು ರಾವುತ್ ಪ್ರಶ್ನಿಸಿದ್ದಾರೆ.
ಕೋವಿಡ್ ಸೋಂಕಿಗೂ ಮುಂಚೆಯೇ ದೇಶದ ಆರ್ಥಿಕತೆ ಕುಸಿದಿದೆ ಎಂದು ರಾವುತ್ ಹೇಳಿದ್ದಾರೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ತೈಮಾಸಿಕದಲ್ಲಿ ಜಿಡಿಪಿ ಶೇ. 23.9ರಷ್ಟು ಕುಸಿದಿದೆ. ಇದು ಮಾನವ ದೋಷ ಮತ್ತು ಅಸಡ್ಡೆ ಮನೋಭಾವದಿಂದಾಗಿದೆ ಎಂದು ರಾವುತ್ ದೂರಿದ್ದಾರೆ. ಕೋವಿಡ್ ಸೋಂಕು ಮತ್ತು ಕುಸಿಯುತ್ತಿರುವ ಆರ್ಥಿಕತೆ ದೇವರ ಇಚ್ಛೆಯಾಗಿದೆ ಎಂದಾದರೆ ಸರಕಾರ ಮತ್ತು ಮಿಲಿಟರಿಯ ಆವಶ್ಯಕತೆ ಏನು. ದೇವರೇ ಎಲ್ಲವನ್ನೂ ನೋಡುಕೊಳ್ಳುತ್ತಾರೆ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.