ಲಂಚ ಪಡೆಯುತ್ತಿದ್ದ ಅಧಿಕಾರಿ ACB ಬಲೆಗೆ
Team Udayavani, Sep 8, 2020, 7:54 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಡರಗಿ (ಗದಗ): ರೈತರಿಗೆ ಸಹಾಯಧನ ಬಿಡುಗಡೆ ಲಂಚ ಪಡೆಯುತ್ತಿದ್ದ ತೋಟಗಾರಿಕೆ ಇಲಾಖೆಯ ಅಧಿಕಾರಿಯೊಬ್ಬರು ಮಂಗಳವಾರ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಮುಂಡರಗಿ ತಾಲೂಕು ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ್ ಹನುಮಂತಪ್ಪ ಬಾರಕೇರ್ ಎಂಬುವವರು ತಮ್ಮ ಕಚೇರಿಯಲ್ಲಿ ರೈತರೊಬ್ಬರಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ರೈತರೊಬ್ಬರು ತಮ್ಮ ಎರಡು ಹೆಕ್ಟರ್ ಜಮೀನಿನಲ್ಲಿ ಪೊಪ್ಪಾಯಿ ಬೆಳೆ ಬೆಳೆದಿದ್ದರು. ಅದಕ್ಕೆ ಸರಕಾರದಿಂದ ಪ್ರತಿ ಹೆಕ್ಟರ್‌ಗೆ 1.75 ಲಕ್ಷ ರೂ. ಗಳಂತೆ ಎರಡು ಹೆಕ್ಟರ್‌ಗೆ 3.50 ಲಕ್ಷ ರೂ. ಸಹಾಯಧನ ಮಂಜೂರಾಗಿತ್ತು.
ಈ ಹಣವನ್ನು ನೀಡಲು 14 ಸಾವಿರ ರೂ. ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಎಸಿಬಿ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು.
ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.