ಬೈಂದೂರು ಅಗ್ನಿಶಾಮಕ ಠಾಣೆ ಉದ್ಘಾಟನೆ; “ಬಜೆಟ್‌ನಲ್ಲಿ 10 ಅಗ್ನಿಶಾಮಕ ಠಾಣೆ ಮಂಜೂರು’


Team Udayavani, Sep 8, 2020, 10:17 PM IST

ಬೈಂದೂರು ಅಗ್ನಿಶಾಮಕ ಠಾಣೆ ಉದ್ಘಾಟನೆ; “ಬಜೆಟ್‌ನಲ್ಲಿ 10 ಅಗ್ನಿಶಾಮಕ ಠಾಣೆ ಮಂಜೂರು’

ಅಗ್ನಿಶಾಮಕ ಠಾಣೆಯ ವರ್ಚುವಲ್‌ ಉದ್ಘಾಟನೆಯನ್ನು ಬಸವರಾಜ ಬೊಮ್ಮಾಯಿ ನೆರವೇರಿಸಿದರು.

ಬೈಂದೂರು: ಬೈಂದೂರು ಕ್ಷೇತ್ರದಲ್ಲಿ ಸಂಸದರು ಹಾಗೂ ಶಾಸಕರ ಪ್ರಯತ್ನದಿಂದ ಅತ್ಯಂತ ಶೀಘ್ರವಾಗಿ ಅಗ್ನಿಶಾಮಕ ಠಾಣೆಯ ಮಂಜೂರಾತಿ ದೊರೆತಿದೆ. ಒಟ್ಟು 1,500ಕ್ಕೂ ಅಧಿಕ ಖಾಲಿ ಹುದ್ದೆಗಳನ್ನು ಒಂದೆರಡು ತಿಂಗಳಲ್ಲಿ ಭರ್ತಿ ಮಾಡಲಾಗುತ್ತದೆ. 20 ರಿಂದ 25 ವಾಹನಗಳನ್ನು ಪ್ರಸಕ್ತ ಸಾಲಿನಲ್ಲಿ ಸೇರ್ಪಡೆ ಮಾಡಿಕೊಡಲಾಗುವುದು.ಬೈಂದೂರು ಸೇರಿದಂತೆ 3 ಅಗ್ನಿಶಾಮಕ ಠಾಣೆಗಳಿಗೆ ಶಾಶ್ವತ ಮತ್ತು ಸ್ವಂತ ಕಟ್ಟಡ ನಿರ್ಮಾಣಕ್ಕೆ ಪ್ರಕ್ರಿಯೆ ನಡೆಯುತ್ತಿದೆ.  ರಾಜ್ಯದಲ್ಲಿ 10 ಹೊಸ ಅಗ್ನಿಶಾಮಕ ಠಾಣೆಗಳಿಗೆ ಮಂಜೂರಾತಿ ದೊರೆತಿದೆ ಎಂದು ರಾಜ್ಯ ಗೃಹಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಬೈಂದೂರು ತಾಲೂಕಿನಲ್ಲಿ ನೂತನ ಅಗ್ನಿಶಾಮಕ ಠಾಣೆಯ ವರ್ಚುವಲ್‌ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ನಾಮಫಲಕ ಅನಾವರಣಗೊಳಿಸಿ ಮಾತನಾಡಿದ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಬೈಂದೂರು ಅಭಿವೃದ್ಧಿಗೆ ಈಗಾಗಲೇ ರಾಜ್ಯ ಸರಕಾರ ಒಂದು ಸಾವಿರಕ್ಕೂ ಅಧಿಕ ಕೋಟಿ ರೂ. ಅನುದಾನ ಮಂಜೂರಾತಿ ಮಾಡಿದೆ.ಬಹುನಿರೀಕ್ಷಿತ ಯೋಜನೆಗಳು ಸಾಕಾರ ಗೊಂಡು ಅಂತಿಮ ಹಂತದಲ್ಲಿದೆ. ಕೇಂದ್ರದಿಂದ ಕುಡಿಯುವ ನೀರಿಗಾಗಿ 200 ಕೋ.ರೂ. ಹೆಚ್ಚುವರಿ ಅನುದಾನ ದೊರೆತಿದೆ. ಪ್ರವಾಸೋದ್ಯಮ ಸೇರಿದಂತೆ ಬೈಂದೂರಿನ ಭೌಗೋಳಿಕ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬೈಂದೂರು ಪಟ್ಟಣ ಪಂಚಾಯತ್‌ ತನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ಶೆಟ್ಟಿ ಬೈಂದೂರಿನ ಅಭಿವೃದ್ಧಿಯ ಕನಸು ನನಸಾಗುತ್ತಿದೆ. ಬಹುನಿರೀಕ್ಷಿತ ಯೋಜನೆಗಳು ಸಾಕಾರಗೊಂಡು ಮಾದರಿ ತಾಲೂಕಾಗಿ ಮಾರ್ಪಡಲಿದೆ ಎಂದರು.

ಈ ಸಂದರ್ಭದಲ್ಲಿ ವಿದ್ಯುತ್‌ ಉಪಕೇಂದ್ರದಲ್ಲಿ 1×5 ಎಂ.ವಿ.ಎ. ಶಕ್ತಿ ಪರಿವರ್ತಕ ಕಾಮಗಾರಿಯನ್ನು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿ ದರು. ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ, ಕುಂದಾಪುರ ಸಹಾಯಕ ಕಮಿಷನರ್‌ ರಾಜು, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹೋಲೊಟ್‌, ಮಂಗಳೂರು ಪ್ರಾಂತ್ಯ ಅಗ್ನಿಶಾಮಕ ಇಲಾಖೆಯ ಮುಖ್ಯ ಅಧಿಕಾರಿ ಜಿ. ತಿಪ್ಪೇಸ್ವಾಮಿ, ಬೈಂದೂರು ತಹಶೀಲ್ದಾರ್‌ ಬಿ.ಪಿ. ಪೂಜಾರ್‌, ಬೈಂದೂರು ತಾ.ಪಂ. ಅಧ್ಯಕ್ಷ ಮಹೇಂದ್ರ ಪೂಜಾರಿ, ಉಪಾಧ್ಯಕ್ಷೆ ಮಾಲಿನಿ ಕೆ., ಕುಂದಾಪುರ ತಾ.ಪಂ. ಅಧ್ಯಕ್ಷೆ ಇಂದಿರಾ ಶೆಟ್ಟಿ, ಜಿ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷೆ ಶೋಭಾ ಪುತ್ರನ್‌, ನಗರಾಭಿವೃದ್ಧಿ ಅಧಿಕಾರಿ ಅರುಣ್‌ ಪ್ರಭಾ, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ರಾಜಪ್ಪ, ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ ರವಿ, ಮೆಸ್ಕಾಂ ಎಂಜಿನಿಯರಿಂಗ್‌ ಕಾರ್ಯನಿರ್ವಾಹಕ ರಾಜೇಶ್‌, ಜಿ.ಪಂ. ಸದಸ್ಯರಾದ ಶಂಕರ ಪೂಜಾರಿ, ಬಾಬು ಶೆಟ್ಟಿ, ಸುರೇಶ್‌ ಬಟ್ವಾಡಿ, ಬೈಂದೂರು ಪಟ್ಟಣ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೇಬಲ್‌ ಡಿ’ಸೋಜಾ ಉಪಸ್ಥಿತರಿದ್ದರು.

ಬೈಂದೂರು ಪ.ಪಂ. ಉದ್ಘಾಟನೆ
ಪಟ್ಟಣ ಪಂಚಾಯತ್‌ಗಳಿಗೆ ಅನುಕೂಲವಿರುವ ಎಲ್ಲ ಸೌಲಭ್ಯಗಳನ್ನು ಹಾಗೂ ಅನುದಾನಗಳನ್ನು ಸರಕಾರದ ಮಟ್ಟದಲ್ಲಿ ಶೀಘ್ರ ಮಂಜೂರು ಮಾಡಲಾಗುತ್ತದೆ.
– ಬಿ.ಎಂ. ಸುಕುಮಾರ್‌‌ ಶೆಟ್ಟಿ,  ಶಾಸಕರು

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.