ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಪತ್ತೆ; ಓರ್ವನ ಬಂಧನ
Team Udayavani, Sep 8, 2020, 10:44 PM IST
ಬಂಟ್ವಾಳ: ರಾಜ್ಯದಲ್ಲಿ ಡ್ರಗ್ಸ್ ದಂಧೆಯ ಬಿಸಿ ಬಿಸಿ ಸುದ್ದಿಯ ಮಧ್ಯೆ ಬಂಟ್ವಾಳ ತಾಲೂಕಿನಲ್ಲಿಯೂ ಲಕ್ಷಾಂತರ ರೂ ಮೌಲ್ಯದ ಗಾಂಜಾ ಪತ್ತೆ ಮಾಡಿದ ಬಂಟ್ವಾಳ ನಗರ ಠಾಣಾ ಎಸ್. ಐ. ಅವಿನಾಶ್ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಪರ್ಲಿಯಾ ನಿವಾಸಿ ಅಹಮ್ಮದ್ ಸಾಬಿತ್ (30) ಬಂಧಿತ ಆರೋಪಿಯಾಗಿದ್ದು ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ.
ಬಂಧಿತರಿಂದ 39 ಕೆ.ಜಿ.948 ಗ್ರಾಂ ತೂಕದ 19,97,400 ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಅಹಮ್ಮದ್ ಸಾಬಿತ್ ಮತ್ತು ಆತನ ಚಿಕ್ಕಮ್ಮನ ಮಗ ಇಬ್ಬರು ಸೇರಿ ಗಾಂಜಾವನ್ನು ಪರ್ಲಿಯಾ ಬಾಡಿಗೆ ಕೊಠಡಿಯಲ್ಲಿ ದಾಸ್ತಾನು ಇರಿಸಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ನಗರ ಠಾಣಾ ಪೋಲೀಸರು ದಾಳಿ ನಡೆಸಿ ಸೊತ್ತುಗಳ ಸಹಿತ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಎಸ್.ಪಿ. ಲಕ್ಮೀಪ್ರಸಾದ್ ಅವರ ನಿರ್ದೇಶನದಂತೆ ಬಂಟ್ವಾಳ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ ಅವರ ಮಾರ್ಗದರ್ಶನ ದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತ್ರತ್ವದಲ್ಲಿ ಬಂಟ್ವಾಳ ಎಸ್. ಐ.ಅವಿನಾಶ್ ಅವರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ
Sullia: ಬೈಕ್ ಗಳ ನಡುವೆ ಅಪಘಾತ
ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್ ವಿಧಿವಶ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.