ಸಂಸತ್‌ನ ಮುಂಗಾರು ಅಧಿವೇಶನ; ಸದನ ಸಮರಕ್ಕೆ ಕಾಂಗ್ರೆಸ್ ಸಜ್ಜು
ಉಪಸಭಾಧ್ಯಕ್ಷ, ಉಪಸಭಾಪತಿ ಸ್ಥಾನಕ್ಕೆ ಜಂಟಿ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧಾರ
Team Udayavani, Sep 9, 2020, 6:18 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಸಂಸತ್‌ನ ಮುಂಗಾರು ಅಧಿವೇಶನ ಸೆ. 14ರಿಂದ ಶುರುವಾಗಲಿದ್ದು, ಸದನದಲ್ಲಿ ಸರಕಾರವನ್ನು ವಿವಿಧ ವಿಚಾರಗಳ ಮೂಲಕ ಎದುರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ರಣತಂತ್ರ ರೂಪಿಸಿದೆ. ಈ ಬಗ್ಗೆ ಮಂಗಳವಾರ ನಡೆದ ಕಾಂಗ್ರೆಸ್ ಸಭೆಯಲ್ಲಿ ಇತರ ವಿಪಕ್ಷಗಳ ಜತೆಗೂಡಿ ಲೋಕಸಭೆಯಲ್ಲಿ ಉಪ ಸಭಾಧ್ಯಕ್ಷರ ಸ್ಥಾನಕ್ಕೆ ಮತ್ತು ರಾಜ್ಯಸಭೆಯಲ್ಲಿನ ಉಪ ಸಭಾಪತಿ ಸ್ಥಾನಕ್ಕೆ ಜಂಟಿಯಾಗಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧರಿಸಿದೆ.
ಸಂಸತ್‌ನ ಬಜೆಟ್ ಅಧಿವೇಶನದಲ್ಲಿಯೇ ಉಪ ಸಭಾಪತಿ ಹುದ್ದೆಗೆ ಆಯ್ಕೆ ನಡೆಯಬೇಕಾಗಿತ್ತು. ಕೋವಿಡ್ ಹಿನ್ನೆಲೆ ಅಧಿವೇಶನ ಮುಂದೂಡಲಾಗಿತ್ತು. ಲೋಕಸಭೆ, ರಾಜ್ಯಸಭೆ ಉಪ ಸಭಾಧ್ಯಕ್ಷ, ಉಪಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಸೆ. 11ರಂದು ಕೊನೆಯ ದಿನ. ಹಲವು ವಿಚಾರಗಳಲ್ಲಿ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಈಗ ಸದನದಲ್ಲಿ ಸರಕಾರದ ವಿರುದ್ಧ ಹೋರಾಟ ನಡೆಸಲು ಅಣಿಯಾಗುತ್ತಿವೆ.
1999ರ ಡಿಸೆಂಬರ್‌ನಲ್ಲಿ ಅಟಲ್ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೇರಿದಾಗ ಕಾಂಗ್ರೆಸ್‌ನ ಪಿ.ಎಂ. ಸಯೀದ್ ಲೋಕಸಭೆಯ ಉಪಸಭಾಪತಿಯಾಗಿದ್ದರು. 2004ರ ಯುಪಿಎ ಸರಕಾರದ ಅವಧಿಯಲ್ಲಿ ಶಿರೋಮಣಿ ಅಕಾಲಿ ದಳದ ಚರಣ್ ಜಿತ್ ಸಿಂಗ್ ಅತ್ವಾಲ್ ಈ ಹುದ್ದೆಗೇರಿದ್ದರು. 2014ರಲ್ಲಿ ಮೋದಿ ನೇತೃತ್ವದ ಎನ್‌ಡಿಎ ಗೆದ್ದ ಸಂದರ್ಭದಲ್ಲಿ ಎಐಎಡಿಎಂಕೆಯ ಡಾ| ಎಂ. ತಂಬಿದೊರೈಗೆ ಉಪಸಭಾಪತಿ ಸ್ಥಾನ ನೀಡಲಾಗಿತ್ತು.
ವಿಧೇಯಕಗಳ ಅಂಗೀಕಾರಕ್ಕೆ ಮುದ್ರಿತ ಮತಪತ್ರ ಬಳಕೆ: ಸಂಸತ್ ಅಧಿವೇಶನದಲ್ಲಿ ಮಸೂದೆಗಳ ಅಂಗೀಕಾರಕ್ಕೆ ನಡೆಯಲಿರುವ ಮತದಾನಕ್ಕೆ ಮತಪತ್ರಗಳನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ. ಈ ಮೊದಲು ಇದ್ದಂತೆ ವಿದ್ಯುನ್ಮಾನ ಮತ ವ್ಯವಸ್ಥೆಯನ್ನು ಹಾಲಿ ಅಧಿವೇಶನದಲ್ಲಿ ಬಳಕೆ ಮಾಡದೇ ಇರುವ ನಿರ್ಧಾರಕ್ಕೆ ಬರಲಾಗಿದೆ. ಲೋಕಸಭೆ ಮತ್ತು ರಾಜ್ಯಸಭೆ ಪ್ರತ್ಯೇಕ ಸಮಯದಲ್ಲಿ ಕಲಾಪ ನಡೆಸಲಿವೆ. ಲೋಕಸಭೆ, ರಾಜ್ಯಸಭೆಯ ಕೊಠಡಿಗಳಲ್ಲಿ ಮತ್ತು ಗ್ಯಾಲರಿಗಳಲ್ಲಿ ಕುಳಿತವರಿಗೆ ಮತದಾನದ ಅಗತ್ಯ ವಿದ್ದಲ್ಲಿ ಮುದ್ರಿತ ಮತಪತ್ರ ನೀಡಲಾಗುತ್ತದೆ. ಅದರಲ್ಲಿ ನಿಗದಿತ ಮಸೂದೆಯ ಪರ ಮತ್ತು ವಿರೋಧ ಎಂಬ ಎರಡು ಆಯ್ಕೆಗಳನ್ನು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮುದ್ರಿಸಲಾಗಿರುತ್ತದೆ. ವಿದ್ಯುನ್ಮಾನ ಮತ ವ್ಯವಸ್ಥೆಯಲ್ಲಿ 5 ನಿಮಿಷಗಳಲ್ಲೇ ಮತದಾನದ ಫಲಿತಾಂಶ ಸಿಗುತ್ತಿತ್ತು. ಆದರೆ ಮತಪತ್ರ ಬಳಸಿದರೆ, ಈ ಪ್ರಕ್ರಿಯೆ ಪೂರ್ಣಗೊಳ್ಳಲು ಕನಿಷ್ಠ 30 ನಿಮಿಷಗಳು ಬೇಕಾಗುತ್ತವೆ. ಹಾಲಿ ಅಧಿವೇಶನದಲ್ಲಿ ಕೇಂದ್ರ ಸರಕಾರ 11 ಅಧ್ಯಾದೇಶಗಳನ್ನು ಮಂಡಿಸಿ ಅನುಮೋದನೆ ಪಡೆದುಕೊಳ್ಳಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.