ರಿಯಾ ಚಕ್ರವರ್ತಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ, ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್
Team Udayavani, Sep 9, 2020, 7:53 AM IST
ಮುಂಬೈ: ಡ್ರಗ್ಸ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನ್ಯಾಯಾಲಯವು ರಿಯಾ ಚಕ್ರವರ್ತಿಯನ್ನು ಸೆಪ್ಟೆಂಬರ್ 22ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಅವರ ವಕೀಲ ಸತೀಶ್ ಮನೇಶಿಂದೆ ಖಚಿತಪಡಿಸಿದ್ದಾರೆ.
ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ(ಎನ್ ಸಿ ಬಿ) ರಿಯಾ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಮಂಗಳವಾರ ಬಂಧಿಸಿತ್ತು. ಬಳಿಕ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಯಿತು. ರಿಯಾ ಚಕ್ರವರ್ತಿಯ ವಿಚಾರಣೆ ನಡೆಸಿದ ಕೋರ್ಟ್, ಆರೋಪಿಯನ್ನು ಸೆಪ್ಟೆಂಬರ್ 22ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಮಂಗಳವಾರ ಮಧ್ಯಾಹ್ನ, ಪ್ರಕರಣದಲ್ಲಿ ಬಂಧಿತರಾದ ಇತರ ಆರೋಪಿಗಳ ಹೇಳಿಕೆಗಳ ಆಧಾರದ ಮೇಲೆ ಚಕ್ರವರ್ತಿಯನ್ನು ಬಂಧಿಸಲಾಯಿತು. ಇಲ್ಲಿಯವರೆಗೆ, ಎನ್‌ಸಿಬಿ ರಿಯಾ ಚಕ್ರವರ್ತಿಯ ಸಹೋದರ ಶೋಯಿಕ್ ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಿದೆ. ಏತನ್ಮಧ್ಯೆ ಜಾಮೀನು ಕೋರಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ನಟಿ ರಿಯಾ ಡ್ರಗ್ಸ್ ಮಾಫಿಯಾ ಜತೆ ನಂಟು ಹೊಂದಿದ್ದು, ತನ್ನ ಗೆಳೆಯ ಸುಶಾಂತ್ ಸಿಂಗ್ ಗಾಗಿ ಡ್ರಗ್ಸ್ ಸಂಗ್ರಹಿಸಿದ್ದಳು ಎಂದು ಎನ್ ಸಿಬಿ ಆರೋಪಿಸಿದೆ.
ರಿಯಾ ಚಕ್ರವರ್ತಿಯನ್ನು ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ವಸ್ತುಗಳ ಕಾಯ್ದೆಯ ಸೆಕ್ಷನ್ 27 ಎ, 21, 22, 29 ಮತ್ತು 28ರ ಅಡಿಯಲ್ಲಿ ಬಂಧಿಸಲಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ರಿಯಾಳನ್ನು ಮುಂಬೈ ಬೈಕುಲ್ಲಾ ಜೈಲಿಗೆ ಸ್ಥಳಾಂತರಿಸಲಾಗುವುದು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Mika Singh: ಮಿಕಾ ಹಾಡಿಗೆ ಫಿದಾ..ಪಾಕ್ ಅಭಿಮಾನಿಯಿಂದ 3 ಕೋಟಿ ರೂ. ವಾಚ್, ಚಿನ್ನ ಗಿಫ್ಟ್
Actress: ಸಲ್ಮಾನ್,ಶಾರುಖ್ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50 ಲಕ್ಷ ರೂ. ಡಿಮ್ಯಾಂಡ್
Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.