![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 9, 2020, 12:06 PM IST
ಹೈದರಾಬಾದ್ : ತೆಲುಗಿನ ಕಿರುತೆರೆ ನಟಿ ಶ್ರಾವಣಿ ಕೊಂಡಪಲ್ಲಿ ಅವರು ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ನಟಿ ಶ್ರಾವಣಿ ಕೊಂಡಪಲ್ಲಿ ಅವರು ಹೈದರಾಬಾದ್‌ನ ಮಧುರನಗರದಲ್ಲಿರುವ ತನ್ನ ನಿವಾಸದಲ್ಲಿ ಬಾತ್‌ರೂಂನ ಸೀಲಿಂಗ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಆತ್ಮಹತ್ಯೆಗೆ ನಿರ್ದಿಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ.
ಏತನ್ಮಧ್ಯೆ, ಗೆಳೆಯ ದೇವರಾಜ್ ರೆಡ್ಡಿ ಕಿರುಕುಳ ನೀಡುವುದರಿಂದ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಶ್ರಾವಣಿಯ ಕುಟುಂಬ ಆರೋಪಿಸಿದೆ. ಸದ್ಯ ದೇವರಾಜ್ ವಿರುದ್ಧ ಎಸ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಂಧ್ರಪ್ರದೇಶದ ಕಾಕಿನಾಡ ಮೂಲದ ದೇವರಾಜ್ ಅವರು ಶ್ರಾವಣಿಗೆ ಕಳೆದ ಕೆಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ ಎಂದು ನಟಿ ಕುಟುಂಬಸ್ಥರ ಆರೋಪವಾಗಿದೆ.
ಶ್ರಾವಣಿ ಕಳೆದ 8 ವರ್ಷಗಳಿಂದ ತೆಲುಗು ಟಿವಿ ಉದ್ಯಮದಲ್ಲಿ ಸಕ್ರಿಯರಾಗಿದ್ದರು. ಜನಪ್ರಿಯ ತೆಲುಗು ಧಾರಾವಾಹಿಗಳಾದ ಮನಸು ಮಮಥಾ ಮತ್ತು ಮೌನರಾಗಂ ನಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದರು . ನಟಿಯ ಅಕಾಲಿಕ ಮರಣದಿಂದ ಕಿರುತೆರೆಗೆ ಆಘಾತವುಂಟಾಗಿದೆ.
ಶ್ರಾವಣಿ ಆತ್ಮಹತ್ಯೆಗೆ ದೇವರಾಜ ರೆಡ್ಡಿ ಕಾರಣವೋ ಅಥವಾ ಬೇರೆ ಏನಾದರು ಕಾರಣ ಇರಬಹುದೇ ಎಂದು ಪೋಲೀಸರ ತನಿಖೆಯ ಬಳಿಕ ಗೊತ್ತಾಗಲಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.