20 ಸಾವಿರ ಗರ್ಭಿಣಿಯರಿಗೆ ಪಿಎಂ ಮಾತೃವಂದನಾ ನೆರವು
ಮೊದಲ ಬಾರಿಗೆ ಗರ್ಭಿಣಿಯಾದವರಿಗೆ ಸಿಗಲಿದೆ ಉಪಯೋಗ
Team Udayavani, Sep 9, 2020, 2:50 PM IST
ಹುಬ್ಬಳ್ಳಿ: ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಸಾವಿರಾರು ಗರ್ಭಿಣಿಯರಿಗೆ ಸಹಕಾರಿಯಾಗಿದ್ದು, ಹು-ಧಾ ನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ವಿಭಾಗದಲ್ಲಿ ಸುಮಾರು 20 ಸಾವಿರ ಫಲಾನುಭವಿಗಳು ಲಾಭ ಪಡೆದಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಜನವರಿ 2017ರಿಂದ ಆರಂಭಗೊಂಡ ಯೋಜನೆಯಲ್ಲಿ ಅವಳಿನಗರದಲ್ಲಿ ಗರ್ಭಿಣಿಯರು ಅರ್ಜಿ ಸಲ್ಲಿಸಿದ್ದು, ಯೋಜನೆ ಆರಂಭವಾದಾಗಿನಿಂದಇಲ್ಲಿಯವರೆಗೆ 16507 ಲಾಭ ಪಡೆದಿದ್ದಾರೆ.
ಮಹಾನಗರ ವ್ಯಾಪ್ತಿಯಲ್ಲಿನ 67 ವಾರ್ಡ್‌ಗಳಲ್ಲಿನ 432 ಅಂಗನವಾಡಿ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಿದ್ದರು. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ಮೊದಲ ಬಾರಿಗೆ ಗರ್ಭಿಣಿಯಾದಾಗ ಮಾತ್ರ ಈ ಯೋಜನೆ ಉಪಯೋಗ ಪಡೆಯಬಹುದಾಗಿದ್ದು, ಹತ್ತಿರದ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ನೀಡುವ ತಾಯಿ ಕಾರ್ಡ್ ಸೇರಿದಂತೆ ಸಮರ್ಪಕ ದಾಖಲೆಗಳನ್ನು ಅಂಗನವಾಡಿ ಕೇಂದ್ರದ ಮೂಲಕ ಇಲಾಖೆಗೆ ಕಳುಹಿಸಲಾಗುತ್ತದೆ. ನೀಡಿರುವ ದಾಖಲೆಗಳನ್ನು ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದಲ್ಲಿ ಅವರ ಖಾತೆ ಮೂರು ಹಂತಗಳಲ್ಲಿ ಹಣ ಜಮಾವಣೆ ಮಾಡಲಾಗುತ್ತದೆ.
ಮೊದಲ ಹಂತದಲ್ಲಿ ಗರ್ಭಿಣಿ 150 ದಿನಗಳ ಪೂರೈಸಿ ಇಲಾಖೆಗೆ ಸಲ್ಲಿಸುವ ದಾಖಲೆಗಳನ್ನು ಪರಿಶೀಲಿಸಿ ಖಾತೆಗೆ 1 ಸಾವಿರ ರೂ.ಗಳ ಜಮೆ ಮಾಡಲಾಗುತ್ತದೆ. ಎರಡನೇ ಹಂತದಲ್ಲಿ ಗರ್ಭಿಣಿ 6 ತಿಂಗಳ ಪೂರ್ಣಗೊಂಡ 2 ಸಾವಿರ ನಗರದ ಜಮೆ ಮಾಡಲಾಗುತ್ತದೆ. 3ನೇ ಹಂತದ ಹಣವನ್ನು ಮಗು ಜನನದ ನಂತರ ಮಗುವಿಗೆ ಮೂರನೇ ಚುಚುಮದ್ದು ಹಾಕಿಸಿರುವ ಮಾಹಿತಿ ನೀಡಿದನಂತರ 2 ಸಾವಿರ ನಗದು ಅವರ ಖಾತೆಗೆ ಜಮೆಮಾಡಲಾಗುತ್ತದೆ. ಮೂರು ಹಂತಗಳಲ್ಲಿ ಒಟ್ಟು 5 ಸಾವಿರ ರೂ. ನೀಡಲಾಗುತ್ತದೆ.
ಹುಬ್ಬಳ್ಳಿ ಶಹರ ವ್ಯಾಪ್ತಿಯ 67 ವಾರ್ಡ್‌ಗಳಲ್ಲಿನ 432 ಅಂಗನವಾಡಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ಇಲ್ಲಿಯವರೆಗೆ ಸುಮಾರು 5.22 ಕೋಟಿ ರೂ. ಜಮಾ ಆಗಿದೆ. 2018-19ರಲ್ಲಿ 5862 ಫಲಾನುಭವಿಗಳು, 2019-20ರಲ್ಲಿ 5632 ಫಲಾನುಭವಿಗಳು ಹಾಗೂ 2020-21ನೇ ಸಾಲಿನ ಇಲ್ಲಿಯವರೆಗೆ 5013 ಫಲಾನುಭವಿಗಳ ಇದರ ಲಾಭ ಪಡೆದಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ ವಿಭಾಗ: ಹುಬ್ಬಳ್ಳಿ ಗ್ರಾಮೀಣವಿಭಾಗದಲ್ಲಿ 2017ರಿಂದ ಇಲ್ಲಿಯವರೆಗೆ 26 ಹಳ್ಳಿಗಳ 146 ಅಂಗನವಾಡಿ ಕೇಂದ್ರಗಳಿಂದ 4268 ಫಲಾನುಭವಿಗಳು ಇದರ ಲಾಭ ಪಡೆದಿದ್ದು ಇಲ್ಲಿಯವರೆಗೆ ಸುಮಾರು 1,20,57,000 ರೂ.ಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಈ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ವಿವಿಧ ಜಾಗೃತಿಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದಾರೆ.
ಕೋವಿಡ್ ಸಮಯದಲ್ಲಿ ತೊಂದರೆ: ಕೋವಿಡ್-19 ಸಮಯದಲ್ಲಿ ಅರ್ಜಿ ಸ್ವೀಕರಿಸಲು ತುಂಬಾ ತೊಂದರೆಯಾಗಿತ್ತು. ಪ್ರತಿ ತಿಂಗಳು ಒಂದು ಅಂಗನವಾಡಿ ಕೇಂದ್ರಗಳಲ್ಲಿ ಸುಮಾರು 25-30ರವರೆಗೆ ಬರುತ್ತಿದ್ದ ಅರ್ಜಿಗಳು ಕೇವಲ 2-3 ಸಲ್ಲಿಕೆಯಾಗಿವೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಗರ್ಭಿಣಿಯರು ಮನೆಯಿಂದ ಹೊರಬರಲಿಲ್ಲ.ಇನ್ನೂ ಅಂಗನವಾಡಿ ಕಾರ್ಯಕರ್ತೆಯರನ್ನು ಕೋವಿಡ್-19 ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಹೀಗಾಗಿ ಅರ್ಜಿ ಸಲ್ಲಿಕೆ ಪ್ರಮಾಣ ಕುಸಿತಕಂಡಿತ್ತು. ಲಾಕ್‌ಡೌನ್ ಸಡಿಲಿಕೆ ನಂತರ ಅರ್ಜಿಗಳು ಮೊದಲಿನಂತೆ ಸಲ್ಲಿಕೆಯಾಗುತ್ತಿವೆ.
ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಉತ್ತಮ ಯೋಜನೆಯಾಗಿದ್ದು ಶಹರ ವಿಭಾಗದಲ್ಲಿ ಹೆಚ್ಚಿನ ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ. ಈಗಾಗಲೇಇಲಾಖೆಯಿಂದ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಈ ಯೋಜನೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಗರ್ಭಿಣಿಯರಿಗೆ ಯೋಜನೆ ಮಾಹಿತಿ ನೀಡಲಾಗುತ್ತಿದೆ.– ಡಾ|ಕಮಲಾ ಬೈಲೂರ, ಶಹರ ಶಿಶು ಅಭಿವೃದ್ಧಿ ಯೋಜನಾಧಿಕಾರಿ.
ಕೋವಿಡ್-19 ಸಮಯದಲ್ಲಿ ಬಿಟ್ಟರೆ ಮತ್ಯಾವತ್ತು ಗ್ರಾಮೀಣ ಭಾಗದಲ್ಲಿ ತೊಂದರೆಯಾಗಿಲ್ಲ. ಗ್ರಾಮೀಣ ಭಾಗದಲ್ಲಿ ಗರ್ಭಿಣಿಯರಿಗೆ ಸರಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಕೊಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಇದಲ್ಲದೇ ಈ ಕುರಿತು ಎಲ್ಲ ಅಂಗನವಾಡಿ ಕೇಂದ್ರಗಳಲ್ಲೂ ಜಾಗೃತಿ ಮೂಡಿಸುವಂತಹ ಕೆಲಸಗಳನ್ನು ಮಾಡಲಾಗುತ್ತದೆ. -ಜ್ಯೋತಿ ಸಣ್ಣಕ್ಕಿ, ಮೇಲ್ವಿಚಾರಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ
-ಬಸವರಾಜ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.