ಸಾಕ್ಷರತೆಯಲ್ಲಿ ಜಿಲ್ಲೆ ಶೇ.80 ಸಾಧನೆ
Team Udayavani, Sep 9, 2020, 2:59 PM IST
ಸಾಂದರ್ಭಿಕ ಚಿತ್ರ
ಧಾರವಾಡ: ರಾಜ್ಯದ 30 ಜಿಲ್ಲೆಗಳಲ್ಲಿ ಧಾರವಾಡ ಜಿಲ್ಲೆಯು ಸಾಕ್ಷರತಾ ಪ್ರಮಾಣದಲ್ಲಿ ಉತ್ತಮ ಸಾಧನೆ ಮಾಡಿದೆ. 2011ರ ಜನಗಣತಿ ಪ್ರಕಾರ ಜಿಲ್ಲೆಯ ಸಾಕ್ಷರತಾ ಪ್ರಮಾಣ ಶೇ.80 ಪ್ರಗತಿ ಸಾಧಿಸಲಾಗಿದೆ.
ಪುರುಷರ ಸಾಕ್ಷರತೆಯ ಪ್ರಮಾಣಶೇ.96.39, ಮಹಿಳೆಯರ ಸಾಕ್ಷರತೆಯ ಪ್ರಮಾಣ ಶೇ.73.46 ಸಾಧಿಸಲಾಗಿದೆ.ಜಿಲ್ಲಾ ಪಂಚಾಯತ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಇಲಾಖೆ 2019-20 ನೇ ಸಾಲಿನಲ್ಲಿ 4742 ಕಲಿಕೆಯ ಗುರಿ ಹೊಂದಿದ್ದು, ವಯಸ್ಕರಿಗೆ ಓದು, ಬರಹ ಹಾಗೂ ಸಾಮಾನ್ಯ ಲೆಕ್ಕಾಚಾರ ಆಸಕ್ತಬೋಧಕರ ಮೂಲಕ ಸಂಜೆ ಅವರವರಬಿಡುವಿನ ವೇಳೆಯಲ್ಲಿ ವಯಸ್ಕರರ ಮನೆಕಟ್ಟೆ ಮೇಲೆ ಇಲಾಖಾ ನಿಯಮಾನುಸಾರ ಕಲಿಸುವ ಪಕ್ರಿಯೆ ನಡೆಯುತ್ತಿದೆ.
2019-20ನೇ ಸಾಲಿನಲ್ಲಿ ಸಾಕ್ಷರತಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನಮಿಶ್ರೀಕೋಟಿ, ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮ, ಮಜ್ಜಿಗುಡ್ಡ, ಸೈದಾಪುರ, ಬಸಾಪುರ, ಹುಬ್ಬಳ್ಳಿ ತಾಲೂಕಿನ ಬೆಳಗಲಿ, ಪಾಳ, ವೀರಾಪುರ, ಕುಂದಗೋಳ ತಾಲೂಕಿನ ಕಡಪಟ್ಟಿ,ಯರಿನಾರಾಯಣಪುರ, ಅಲ್ಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೇ.100 ಸಾಕ್ಷರತಾ ಪ್ರಮಾಣ ಸಾಧಿಸುವ ಗುರಿ ಹೊಂದಲಾಗಿದೆ.
ಇದಲ್ಲದೇ ಮುಂಬರುವ 2020-21 ನೇ ಸಾಲಿನ ಜನಗಣತಿ ಸಾಕ್ಷರತಾ ಪ್ರಮಾಣದಲ್ಲಿ ಶೇ.90ಕ್ಕಿಂತ ಹೆಚ್ಚು ಸಾಧಿಸುವ ಆಶಯ ಹೊಂದಲಾಗಿದೆ.
ಜಿಲ್ಲೆಯಲ್ಲಿ ಸೇವಾಸಕ್ತರ ಜತೆಗೆ ಸಾಕ್ಷರತಾ ಕಾರ್ಯಕ್ರಮಗಳ ಅರಿವು ಮೂಡಿಸುವ ಹಾಗೂ ಜಿಲ್ಲೆಯಲ್ಲಿ ಸಾಕ್ಷರತಾ ಶೇ.100 ಸಾಧನೆ ಮಾಡುವ ವಿಶ್ವಾಸವಿದೆ. –ಬಸವರಾಜ ಮಾಯಾಚಾರ್ಯ, ಪ್ರಭಾರಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.