ಹೆಸರು-ಉದ್ದು ಖರೀದಿ ಕೇಂದ್ರ ಆರಂಭಿಸಲು ಆಗ್ರಹ
Team Udayavani, Sep 9, 2020, 4:01 PM IST
ಚಿಂಚೋಳಿ: ತಾಲೂಕಿನಲ್ಲಿ ಹೆಸರು, ಉದ್ದು ಖರೀದಿ ಕೇಂದ್ರ ಪ್ರಾರಂಭಿಸಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಸುಲೇಪೇಟ ಗ್ರಾಮದ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ರಸ್ತೆಗೆ ಹೆಸರು ಕಾಳು ಚೆಲ್ಲಿ ಎತ್ತುಗಳೊಂದಿಗೆ ಪ್ರತಿಭಟನೆ ನಡೆಸಿದರು.
ಈ ವೇಳೆ ರೈತ ಮುಖಂಡ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ತಾಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಹೆಸರು, ಉದ್ದು, ತೊಗರಿ ಬೆಳೆಗಳು ಸಂಪೂರ್ಣ ಹಾನಿಗೊಂಡಿವೆ. ಇದರಿಂದಾಗಿ ರೈತರ ಜೀವನ ದಿವಾಳಿಯಾಗುತ್ತಿದೆ. ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರವನ್ನು ಮುಖ್ಯಮಂತ್ರಿಗಳು ಘೋಷಣೆ ಮೂಲಕ ರೈತರ ನೆರವಿಗೆ ಬರಬೇಕೆಂದು ಆಗ್ರಹಿಸಿದರು.
ಮುಂಗಾರು ಬಿತ್ತನೆಗೋಸ್ಕರವಾಗಿ ಬ್ಯಾಂಕಿನಿಂದ ಬೆಳೆ ಸಾಲ ಪಡೆದುಕೊಂಡಿರುವ ರೈತರ ಸಾಲಮನ್ನಾ ಮಾಡದೇ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ರೈತರಿಗೆ ಅತಿವೃಷ್ಟಿಯಿಂದ ಉಂಟಾದ ಹಾನಿಯ ಕುರಿತು ವಿಶೇಷ ಪ್ಯಾಕೇಜ್‌ನಲ್ಲಿ ಪರಿಹಾರ ಘೋಷಣೆ ಮಾಡಬೇಕು. ಮುಲ್ಲಾಮಾರಿ ಜಲಾಶಯದಿಂದ ಏಕಕಾಲಕ್ಕೆ ಹಠಾತ್ತನೆ 25 ಸಾವಿರ ಕ್ಯೂಸೆಕ್ ನೀರನ್ನು ರಾತೋರಾತ್ರಿ ಹರಿದು ಬಿಟ್ಟಿದ್ದರಿಂದ ವಿವಿಧ ಬೆಳೆಗಳು ಮತ್ತು ಪಂಪ್‌ಸೆಟ್ ಗಳು ಕೊಚ್ಚಿಕೊಂಡು ಹೋಗಿವೆ. ಸರಕಾರ ಹಾನಿ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಇನ್ನುವರೆಗೆ ನೀಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಹಣಮಂತ ಪೂಜಾರಿ, ಮೋಹಿನ ಮೋಮಿನ ಸುಲೇಪೇಟ, ಪ್ರದೀಪ ತಿರಲಾಪುರ, ಪರಮೇಶ್ವರ ಕಾಂತಾ, ತುಳಜಪ್ಪ ಮೋಘಾ, ಮಹಮ್ಮದ ಶಬ್ಬೀರ ತೇಗಲತಿಪ್ಪಿ, ದೌಲಪ್ಪ ಕೊಡಂಪಳ್ಳಿ ಇದ್ದರು. ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸುಲೇಪೇಟ ನಾಡ ಕಚೇರಿ ಉಪತಹಶೀಲ್ದಾರ್ ರಘುನಾಥ ಅವರಿಗೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.