ಕೇಂದ್ರದಿಂದ ಮಾಸ್ಕ್, ಪಿಪಿಇ ಕಿಟ್ ಇಲ್ಲ : ಟೋಪೆ
Team Udayavani, Sep 9, 2020, 5:36 PM IST
ಮುಂಬಯಿ, ಸೆ. 8: ಕೇಂದ್ರ ಸರಕಾರ ಇನ್ನು ಮುಂದೆ ಮುಖಗವಸು, ವೆಂಟಿಲೇಟರ್, ಪಿಪಿಇ ಕಿಟ್‌ಗಳನ್ನು ನೀಡುವುದಿಲ್ಲ ಎಂದು ರಾಜ್ಯ ಸರಕಾರಕ್ಕೆ ಕೇಂದ್ರ ಸರಕಾರದಿಂದ ಪತ್ರ ಬಂದಿದೆ ಎಂದು ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.
ಕೇಂದ್ರದ ಪತ್ರಕ್ಕೆಪ್ರತಿಕ್ರಿಯಿಸಿದ ಟೋಪೆ, ಕೇಂದ್ರದ ಇಂತಹ ಅಸಹಕಾರವನ್ನು ಸಮರ್ಥಿಸಲಾಗುವುದಿಲ್ಲ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ನಾವು ಕೇಂದ್ರ ಸಚಿವ ಪ್ರಕಾಶ್ ಜಾಬ್ಡೇಕರ್ ಅವರೊಂದಿಗೆ ಪುಣೆಯಲ್ಲಿ ಶನಿವಾರ ಮಾತನಾಡಿದ್ದೇವೆ ಎಂದು ಅವರು ಹೇಳಿದರು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕೇಂದ್ರ ಆರೋಗ್ಯ ಸಚಿವರು ಮತ್ತು ಪ್ರಧಾನ ಮಂತ್ರಿಗೆ ಪತ್ರ ಬರೆಯಲಿದೆ. ರಾಜ್ಯ ಸರಕಾರವು ತನ್ನ ಜಂಬೋ ಆಸ್ಪತ್ರೆಯಲ್ಲಿ ಆಮ್ಲಜನಕ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಿದೆ ಮತ್ತು ಚಿಕಿತ್ಸೆಯಲ್ಲಿ ಯಾವುದೇ ತೊಂದರೆಯಾಗದಂತೆ ಐಸಿಯು ಹಾಸಿಗೆಗಳನ್ನು ಹೆಚ್ಚಿಸಲಾಗುತ್ತಿದೆ ಎಂದರು. ಇನ್ನೂ ಆರು ಜಿಲ್ಲೆಗಳಲ್ಲಿ ಟೆಲಿ-ಐಸಿಯುಗಳನ್ನು ಸೋಮವಾರ ಪ್ರಾರಂಭಿಸಲಾಗಿದೆ. ಆದ್ದರಿಂದ ಸೋಂಕಿತರ ಚಿಕಿತ್ಸೆಯಲ್ಲಿ ತಜ್ಞ ವೈದ್ಯರ ತತ್‌ಕ್ಷಣದ ಮಾರ್ಗದರ್ಶನ ಪಡೆಯಲಾಗುವುದು. ಲಾಕ್‌ಡೌನ್‌ಗಳ ಸಡಿಲಿಕೆ, ಅಂತರ್ ಜಿಲ್ಲಾ ಸಂಚಾರ ನಿರ್ಬಂಧ ಇಲ್ಲದಿರುವುದು, ಇ-ಪಾಸ್ ವಿತರಣೆ, ಕಚೇರಿಗಳಲ್ಲಿ ಹೆಚ್ಚಿನ ಉಪಸ್ಥಿತಿ ಯಿಂದಾಗಿ ಸೋಂಕು ಹೆಚ್ಚುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದರು.
ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಾಗುತ್ತದೆ ಮತ್ತು ಹಾಸಿಗೆಗಳು ಲಭ್ಯವಿಲ್ಲ ಎಂದು ಆರೋಗ್ಯ ಸಚಿವರು ಹೇಳಿದರು. ಯಾವುದೇ ರೋಗಲಕ್ಷಣಗಳಿಲ್ಲದ ಸೋಂಕಿತರು ಮನೆಯಲ್ಲಿಯೇ ಇರಬೇಕು. 80ರಷ್ಟುಜನರಿಗೆ ರೋಗಲಕ್ಷಣಗಳಿಲ್ಲ, ಆದ್ದರಿಂದಅವರನ್ನು ಮನೆಯಲ್ಲಿಯೇ ನೋಡಿಕೊಳ್ಳ ಬೇಕು ಎಂದು ಅವರು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.