ನಾಮಪತ್ರ ಸಲ್ಲಿಸಿದ ಹರಿವಂಶ ಸಿಂಗ್
Team Udayavani, Sep 10, 2020, 12:25 AM IST
ಇದೇ 14ರಿಂದ ಶುರುವಾಗಲಿರುವ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ಬುಧವಾರ, ರಾಜ್ಯ ಸಭಾ ಸ್ಪೀಕರ್ ವೆಂಕಯ್ಯ ನಾಯ್ಡು ಅಣಕು ಕಲಾಪ ನಡೆಸಿದರು.
ನವದೆಹಲಿ: ರಾಜ್ಯಸಭೆಯಲ್ಲಿ ಉಪ ಸಭಾಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಯು ರಾಜ್ಯಸಭಾ ಸದಸ್ಯ ಹರಿವಂಶ ನಾರಾಯಣ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ. ಮೇಲ್ಮನೆಯಲ್ಲಿನ ಸಂಖ್ಯಾಬಲದ ಲೆಕ್ಕಾಚಾರ ಗಮನಿಸಿ ದಾಗ ಅವರೇ ಹುದ್ದೆಗೆ ಆಯ್ಕೆಯಾಗುವ ಸಾಧ್ಯತೆ ಅಧಿಕವಾಗಿದೆ.
245 ಸದಸ್ಯ ಬಲದ ರಾಜ್ಯಸಭೆ ಯಲ್ಲಿ ಸರ್ಕಾರದ ಪರವಾಗಿ 116 ಸದಸ್ಯರು ಇದ್ದಾರೆ. ಇದಲ್ಲದೆ, ಬಿಜು ಜನತಾ ದಳ, ವೈ.ಎಸ್.ಆರ್.ಕಾಂಗ್ರೆಸ್, ತೆಲಂಗಾಣ ರಾಷ್ಟ್ರ ಸಮಿತಿ ಸದಸ್ಯರು ಸರ್ಕಾರದ ಅಭ್ಯರ್ಥಿ ಪರವಾಗಿ ಬೆಂಬಲ ಸೂಚಿಸಲಿವೆ. ಕಾಂಗ್ರೆಸ್ ಇತರ ಪ್ರತಿಪಕ್ಷಗಳ ಜತೆಗೆ ಸೇರಿಕೊಂಡು ಉಪಸಭಾಪತಿ ಸ್ಥಾನಕ್ಕೆ ಅಭ್ಯರ್ಥಿಯನ್ನು ಇಳಿಸುವ ಬಗ್ಗೆ ಯೋಚಿಸುತ್ತಿದ್ದಂತೆಯೇ ಎನ್‌ಡಿಎ ವತಿಯಿಂದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.
ಇದೇ ವೇಳೆ, ಲೋಕಸಭೆಯಲ್ಲಿನ ಉಪ ಸಭಾ ಧ್ಯಕ್ಷ ಹುದ್ದೆಯನ್ನು ಸಂಸತ್‌ನ ಮುಂಗಾರು ಅಧಿವೇಶನದಲ್ಲಿಯೇ ಭರ್ತಿ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಅಧಿರ್ ರಂಜನ್ ಚೌಧರಿ ಒತ್ತಾಯಿ ಸಿದ್ದಾರೆ. ಜತೆಗೆ ಪ್ರತಿಪಕ್ಷಗಳಿಗೆ ಆ ಹುದ್ದೆಯನ್ನು ನೀಡಬೇಕು. ಇಂಥ ಒಂದು ಸಂಪ್ರದಾಯ ಹಿಂದಿನಿಂದಲೂ ಇದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು
Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.