ಮತ್ತೆ ಗರಿಗೆದರಿದ ಸಚಿವ ಸಂಪುಟ ವಿಸ್ತರಣೆ ಚರ್ಚೆ: ಕೆಲವೇ ದಿನಗಳಲ್ಲಿ ಬಿಎಸ್ ವೈ ದೆಹಲಿಗೆ
Team Udayavani, Sep 10, 2020, 3:03 PM IST
ಬೆಂಗಳೂರು: ರಾಜ್ಯದ ಬಿಎಸ್ ವೈ ಸರಕಾರದ ಸಚಿವ ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸದ್ಯಕ್ಕೆ ದೆಹಲಿ ಭೇಟಿ ಇಲ್ಲ ಎಂದಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇನ್ನು ಕೆಲವೇ ದಿನಗಳಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿ, ವರಿಷ್ಠರನ್ನು ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಇನ್ನೂ ನಾಲ್ಕೈದು ದಿನಗಳಲ್ಲಿ ದೆಹಲಿಗೆ ತೆರಳಲಿದ್ದು, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಕೆಲ ವಿಷಯಗಳ ಬಗ್ಗೆ ಚರ್ಚೆ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ವರಿಷ್ಠರು ಸಮಯ ನೀಡಿದ ಕೂಡಲೇ ದೆಹಲಿಗೆ ತೆರಳಲಿದ್ದು, ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಿಎಸ್ ವೈ ತಿಳಿಸಿದ್ದಾರೆ.
ಇದನ್ನೂ ಓದಿ: ಹೊನ್ನಾವರದಲ್ಲಿ ಬೋಟ್ ದುರಂತ: ಅಲೆಗಳ ಅಬ್ಬರಕ್ಕೆ ಅಳಿವೆಯಲ್ಲಿ ಮುಳುಗಿದ ಬೋಟ್
ಸೆ.21ರಿಂದ ವಿಧಾನಸಭೆಯ ಅಧಿವೇಶನಗಳು ಆರಂಭವಾಗಲಿದೆ. ಇದಕ್ಕೂ ಮೊದಲು ಸಿಎಂ ಬಿಎಸ್ ವೈ ದೆಹಲಿಗೆ ಭೇಟಿ ನೀಡಿ ಸಚಿವ ಸಂಪುಟ ವಿಸ್ತರಣೆ ಮಾಡುವ ಯೋಜನೆಯಲ್ಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಕೋವಿಡ್ ಕಾಲದಲ್ಲಿ ಕ್ರಿಕೆಟ್: ಐಪಿಎಲ್ ನಲ್ಲಿ ಅಭಿಮಾನಿಗಳಿಗೆ ನಿರಾಶೆ ಮಾಡಲಿದೆ ಈ ಏಳು ಅಂಶಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.