ಚಾಮರಾಜನಗರ: ಇಂದು 64 ಮಂದಿಗೆ ಕೋವಿಡ್ ದೃಢ: 51 ಮಂದಿ ಗುಣಮುಖ
Team Udayavani, Sep 10, 2020, 8:12 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 64 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 51 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಮೂವರು ಸೋಂಕಿತರು ಮೃತಪಟ್ಟಿದ್ದಾರೆ.
ಚಾಮರಾಜನಗರ ತಾಲೂಕು ಹೊಂಗನೂರು ಗ್ರಾಮದ 70 ವರ್ಷದ ವೃದ್ಧರು ಸೆ.9ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಸೆ.10ರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಪಟ್ಟಣದ 65 ವರ್ಷದ ಮಹಿಳೆ ಸೆ.9ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಸೆ. 10ರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಪಟ್ಟಣದ ನಿವಾಸಿ 72 ವರ್ಷದ ವೃದ್ಧರು ಸೆ. 10ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಗುರುವಾರ ಗುಂಡ್ಲುಪೇಟೆ ತಾಲೂಕಿನ 21, ಚಾಮರಾಜನಗರ 20, ಕೊಳ್ಳೇಗಾಲ 13, ಯಳಂದೂರು 03, ಹನೂರು ತಾಲೂಕಿನಿಂದ 07 ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿ ಇದುವರೆಗೆ 2835 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ 2251 ಮಂದಿ ಗುಣಮುಖರಾಗಿದ್ದಾರೆ. 525 ಸಕ್ರಿಯ ಪ್ರಕರಣಗಳಿವೆ. ಒಟ್ಟು 60 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
34 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 149 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ.
ಇಂದಿನ ಪ್ರಕರಣಗಳು-64
ಇಂದು ಗುಣಮುಖ-51
ಒಟ್ಟು ಗುಣಮುಖ-2251
ಇಂದಿನ ಸಾವು-03
ಒಟ್ಟು ಸಾವು-60
ಸಕ್ರಿಯ ಪ್ರಕರಣಗಳು-525
ಒಟ್ಟು ಸೋಂಕಿತರು-2835
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.