ಮಂಗಳೂರಿನಲ್ಲಿಯೂ ಅಂತಾರಾಷ್ಟ್ರೀಯ ವಲಸೆ ಕೇಂದ್ರ
ಹಲವು ದೇಶಗಳ ಜತೆ ಮಾತುಕತೆ; ಇನ್ನೆರಡು ವಾರಗಳಲ್ಲಿ ಕಾರ್ಯಾರಂಭ ನಿರೀಕ್ಷೆ
Team Udayavani, Sep 11, 2020, 6:28 AM IST
ಸಾಂದರ್ಭಿಕ ಚಿತ್ರ
ಮಹಾನಗರ: ವಿದೇಶಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸುವ, ಉದ್ಯೋಗ ಸಂಬಂಧಿ ವಂಚನೆಗಳನ್ನು ತಪ್ಪಿಸುವ ಉದ್ದೇಶದಿಂದ ಮಂಗಳೂರಿನಲ್ಲಿಯೂ “ಅಂತಾರಾಷ್ಟ್ರೀಯ ವಲಸೆ ಕೇಂದ್ರ’ (ಐಎಂಸಿಕೆ) ಸ್ಥಾಪನೆಯಾಗಲಿದೆ. ಕೌಶಲ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸಲಿರುವ ಈ ಕೇಂದ್ರ ಇನ್ನೆರಡು ವಾರಗಳಲ್ಲಿ ಅಸ್ತಿತ್ವಕ್ಕೆ ಬರುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿರುವ ಕೇಂದ್ರ ಕಚೇರಿಯಲ್ಲಿ ಇಂತಹ ಒಂದು ಕೇಂದ್ರ ಪ್ರಾಥಮಿಕ ಹಂತದ ಸೇವೆ ಆರಂಭಿಸಿದ್ದು ಬೇರೆ ಜಿಲ್ಲೆಯವರು ಸಹಾಯ ಪಡೆದುಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮಂಗಳೂರು, ಮೈಸೂರು, ಗುಲ್ಬರ್ಗ ಮತ್ತು ಬೆಳಗಾವಿಯಲ್ಲೂ ಕೇಂದ್ರಗಳು ಅಸ್ತಿತ್ವಕ್ಕೆ ಬರಲಿದ್ದು, ಅಕ್ಕಪಕ್ಕದ ಜಿಲ್ಲೆಗಳ ಅಭ್ಯರ್ಥಿ/ ಉದ್ಯೋಗಾಕಾಂಕ್ಷಿಗಳು ಇದರ ಪ್ರಯೋಜನ ಪಡೆಯಲು ಅವಕಾಶವಿರುತ್ತದೆ. ಉಡುಪಿ ಜಿಲ್ಲೆಯವರು ಮಂಗಳೂರಿನ ಕೇಂದ್ರದ ಉಪಯೋಗ ಪಡೆದುಕೊಳ್ಳಬಹುದಾಗಿದೆ. ಮಂಗಳೂರಿನಲ್ಲಿ ಪ್ರತ್ಯೇಕ ಕಟ್ಟಡದಲ್ಲಿ ಕೇಂದ್ರ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಇಲಾಖಾಧಿಕಾರಿಗಳು ತಿಳಿಸಿದ್ದಾರೆ.
ಹಲವು ದೇಶಗಳ ಜತೆ ಒಪ್ಪಂದ
ಗಲ್ಫ್, ಕೆನಡ, ಯುಕೆ, ಜಪಾನ್ ಮೊದಲಾದ ದೇಶಗಳ ರಾಯಭಾರ ಕಚೇರಿ, ಉದ್ಯೋಗ ನೇಮಕಾತಿ ಸಂಸ್ಥೆಗಳ ಜತೆಗೆ ಮಾತುಕತೆ-ಒಪ್ಪಂದ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲಿನ ಉದ್ಯೋಗ ಬೇಡಿಕೆಯನ್ನು ಗಮನದಲ್ಲಿರಿಸಿ ಅಭ್ಯರ್ಥಿಗಳನ್ನು ತಯಾರುಗೊಳಿಸಲು ಸಿದ್ಧತೆ ನಡೆದಿದೆ. ಕೊರೊನಾ, ವಿಮಾನಯಾನ ಸೇವೆ ಸ್ಥಗಿತಗೊಂಡಿದ್ದರಿಂದ ವಿದೇಶೀ ಉದ್ಯೋಗಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ಚುರುಕಾಗಿಲ್ಲ. ಮುಂದಿನ ದಿನಗಳಲ್ಲಿ ಉತ್ತಮ ಬೇಡಿಕೆ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ.
ಪ್ರಯೋಜನವೇನು ?
ಉದ್ಯೋಗಕ್ಕಾಗಿ ವಿದೇಶಗಳಿಗೆ ತೆರಳಿ ಅಲ್ಲಿ ನಾನಾ ರೀತಿಯಲ್ಲಿ ವಂಚನೆ ಗೊಳಗಾಗುವುದನ್ನು ತಪ್ಪಿಸಲು ಮತ್ತು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆಗಳನ್ನು ಕಡಿಮೆಗೊಳಿಸುವ ಉದ್ದೇಶದಿಂದ “ಐಎಂಸಿಕೆ’ ಆರಂಭಿಸಲಾಗುತ್ತಿದೆ. ಪ್ರಮುಖವಾಗಿ ಶೋಷಣೆ, ವಂಚನೆಗೊಳಗಾದವರಿಗೆ ರಕ್ಷಣೆ ನೀಡಲಿದೆ. ಮಾತ್ರವಲ್ಲದೆ ಆಯಾ ದೇಶಗಳ ವಾತಾವರಣಕ್ಕೆ ಹೊಂದಿಕೊಳ್ಳುವುದಕ್ಕೆ ಬೇಕಾದ ಮಾಹಿತಿ, ಕೌಶಲ, ಅರ್ಹತೆ, ಭಾಷೆ, ಅಗತ್ಯ ಅರ್ಹತಾ ಪರೀಕ್ಷೆ ತೇರ್ಗಡೆ ಮೊದಲಾದ ವಿಷಯಗಳಲ್ಲಿ ತರಬೇತಿ ದೊರೆಯುತ್ತದೆ. ಇದಕ್ಕಾಗಿ ಪಿಡಿಒಟಿ (ಪ್ರಿ ಡಿಪಾರ್ಚರ್ ಓರಿಯಂಟೇಶನ್ ಟ್ರೈನಿಂಗ್) ಗಳನ್ನು ಕೂಡ ಸ್ಥಾಪಿಸಲಾಗುತ್ತದೆ.
ಕೌಶಲದೊಂದಿಗೆ ರಕ್ಷಣೆ
ಬೆಂಗಳೂರು ಮಾದರಿಯಲ್ಲಿಯೇ ಮಂಗಳೂರು, ಮೈಸೂರು, ಗುಲ್ಬರ್ಗ ಮತ್ತು ಬೆಳಗಾವಿಯಲ್ಲಿ ಐಎಂಸಿಕೆಗಳು ಮುಂದಿನ ಎರಡು ವಾರಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ. ವಂಚನೆಗೊಳಗಾಗುವುದನ್ನು ತಪ್ಪಿಸಿ ರಕ್ಷಣೆ ನೀಡುವ ಜತೆಗೆ ವಿದೇಶದ ಉದ್ಯೋಗಗಳಿಗೆ ತಕ್ಕಂತೆ ನಮ್ಮ ಉದ್ಯೋಗಾಕಾಂಕ್ಷಿಗಳನ್ನು ಸಿದ್ಧಗೊಳಿಸುವ ಉದ್ದೇಶ ಕೂಡ ಇದರಲ್ಲಿದೆ.
-ಅಶ್ವಿನಿ ಗೌಡ, ಆಡಳಿತ ನಿರ್ದೇಶಕರು, ರಾಜ್ಯ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮು¤ ಜೀವನೋಪಾಯ ಇಲಾಖೆ
ಸಂತೋಷ್ ಬೊಳ್ಳೆಟ್ಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.