ಮನುಷ್ಯನಾಗಿ ಹುಟ್ಟಿ ಸಾರ್ಥಕತೆ ಬದುಕು ನಡೆಸಿ


Team Udayavani, Sep 11, 2020, 1:45 PM IST

ಮನುಷ್ಯನಾಗಿ ಹುಟ್ಟಿ ಸಾರ್ಥಕತೆ ಬದುಕು ನಡೆಸಿ

ಮಂಡ್ಯ: ಯಾವುದೇ ವ್ಯಕ್ತಿಯು ಕೆಲ ಸಂದರ್ಭಗಳಲ್ಲಿಖನ್ನತೆ, ಒತ್ತಡಕ್ಕೆ ಮತ್ತು ಹಲವು ಸಮಸ್ಯೆಗಳಿಗೆ ಒಳಗಾದಾಗ ಸೇಹಿತರ ಜೊತೆ, ಮನೋರೋಗ ತಜ್ಞರ ಬಳಿ, ಸಮಾಜದ ಹಿರಿಯರಲ್ಲಿ ಮತ್ತು ಹಿತೈಷಿಗಳ ಜೊತೆ ಮುಕ್ತವಾಗಿ ಮಾತನಾಡಿದರೆ ಹಾಗೂ ಅವಲೋಕನ ಮಾಡಿಕೊಂಡರೆ ಆತ್ಮಹತ್ಯೆಯನ್ನು ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ಡಾ.ಎಂವಿ.ವೆಂಕಟೇಶ್‌ ಹೇಳಿದರು.

ಡೀಸಿ ಕಚೇರಿ ಆವರಣದಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮನೋರೋಗ ವಿಭಾಗ, ಸಮುದಾಯ ವೈದ್ಯಕೀಯ ಶಾಸ್ತ್ರ ಮಿಮ್ಸ್‌, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರಕ್ಷಕ, ಅಬಕಾರಿ ಇಲಾಖೆ, ಮತ್ತು ಸೆಂಟ್‌ ಥಾಮಸ್‌ ಮಿಷನ್‌ನಿಂದ ನಡೆದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಇಡೀ ವಿಶ್ವದಲ್ಲಿ ಪ್ರತಿ ವರ್ಷ ಸುಮಾರು 8 ಲಕ್ಷ ಜನರು ತ್ಮಹತ್ಯೆಗೆ ಒಳಗಾಗುತ್ತಿರುವುದು ವಿಷಾದದಸಂಗತಿ. ಅದರಲ್ಲೂ ಬದಲಾದ ವಾತಾವರಣದಲ್ಲಿ ಯುವಕರು ಒಂಟಿತನದಿಂದ ಜೀವನ ಮಾಡುವವರು ಈ ಖನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದರು.

ಆತ್ಮಹತ್ಯೆ ಪ್ರಕರಣ ಕಡಿಮೆ: ಜಿಲ್ಲೆಯಲ್ಲಿ ಒಂದು ಕಾಲದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ಕಂಡು ಬರುತ್ತಿದ್ದವು. ಪ್ರಸ್ತುತ ಸರ್ಕಾರ, ಜಿಲ್ಲಾಡಳಿತತೆಗೆದುಕೊಂಡಿರುವ ಕ್ರಮಗಳಿಂದ ಇಂದು ಆತ್ಮಹತ್ಯೆ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿವೆ. ಎಲ್ಲರಲ್ಲೂ ಆತ್ಮವಿಶ್ವಾಸ ಹೆಚ್ಚಾಗಿರಲಿ, ಯಾವುದೇ ಕಾರಣಕ್ಕೂ ಆತ್ಮಹತೆ¾ ಮಾಡಿಕೊಳ್ಳಬೇಡಿ ಎಂದರು.ಬದುಕನ್ನು ಸಾರ್ಥಕಗೊಳಿಸಿ: ಆತ್ಮಹತ್ಯೆ ಹಲವಾರುಕಾರಣಗಳಿಂದ ಬರುತ್ತದೆ. ಪ್ರಮುಖವಾಗಿ ಮನುಷ್ಯಸಮಾಜ, ಪರಿಸರದೊಂದಿಗೆ ಬೆರೆತು ಸಂಪರ್ಕವನ್ನುಕಂಡುಕೊಳ್ಳಬೇಕು. ಇಲ್ಲದಿದ್ದರೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತವೆ. ಪುರಂದರದಾಸರು ಹೇಳುವಂತೆ”ಮನುಷ್ಯ ಜನ್ಮ ದೊಡ್ಡದು ಇದನ್ನು ಹಾನಿ ಮಾಡಿಕೊಳ್ಳಬೇಡಿ ಹುಚ್ಚಪ್ಪಗಳಿರಾ’ ಎನ್ನುವಂತೆ, ಮನುಷ್ಯನಾಗಿ ಹುಟ್ಟುವುದೇ ಒಂದು ಸಾರ್ಥಕತೆ. ಆದ್ದರಿಂದ ನಮ್ಮ ಬದುಕನ್ನು ನಾವು ಸಾರ್ಥಕ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಪಂ ಸಿಇಒ ಜುಲ್ಫಿಕಾರ್‌ ಮಹಮದ್‌ ಉಲ್ಲಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರಿ ಪಿ.ವರದ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್‌.ಪಿ.ಮಂಚೇಗೌಡ ಹಾಜರಿದ್ದರು.

ಟಾಪ್ ನ್ಯೂಸ್

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.