ಉಡುಪಿಯಲ್ಲಿ ಸಾಂಪ್ರದಾಯಿಕ ವಿಟ್ಲಪಿಂಡಿ ಉತ್ಸವ

Team Udayavani, Sep 11, 2020, 11:16 PM IST

ಉಡುಪಿಯಲ್ಲಿ ಸಾಂಪ್ರದಾಯಿಕ ವಿಟ್ಲಪಿಂಡಿ ಉತ್ಸವ

ಉಡುಪಿ: ಶ್ರೀಕೃಷ್ಣಮಠದಲ್ಲಿ ಶುಕ್ರವಾರ ಸೀಮಿತ ಭಕ್ತರ ಸಮ್ಮುಖದಲ್ಲಿ ವಿಟ್ಲಪಿಂಡಿ ಉತ್ಸವವನ್ನು ಆಚರಿಸಲಾಯಿತು.

ಉಡುಪಿ: ಶ್ರೀಕೃಷ್ಣನ ಜನನ ಸಂಭ್ರಮವನ್ನು ಆಚರಿಸುವ ವಿಟ್ಲಪಿಂಡಿ ಎಂದು ಕರೆಯುವ ಶ್ರೀಕೃಷ್ಣಲೀಲೋತ್ಸವ ಜನಸಂದಣಿ ಇಲ್ಲದೆ ಶುಕ್ರವಾರ ಶ್ರೀಕೃಷ್ಣಮಠದಲ್ಲಿ ಸರಳವಾಗಿ ನೆರವೇರಿತು.

ಅಷ್ಟಮಿ ದಿನ ಏಕಾದಶಿಯಂತೆ ನಿರ್ಜಲ ಉಪವಾಸವಿರುವ ಕಾರಣ ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶುಕ್ರವಾರ ಮುಂಜಾವ ಮಹಾಪೂಜೆಯನ್ನು ನೆರವೇರಿಸಿದರು. ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಯಶೋದಾ ಕೃಷ್ಣ ಅಲಂಕಾರವನ್ನು ನಡೆಸಿದರು. ಕೊರೊನಾ ಕಾರಣದಿಂದ ಉತ್ಸವದಲ್ಲಿ ಸಾರ್ವಜನಿಕರು ಪಾಲ್ಗೊಳ್ಳದಿರುವುದು ಮಾತ್ರವಲ್ಲದೆ ಭೋಜನ ಪ್ರಸಾದವೂ ಇರಲಿಲ್ಲ. ಅಪರಾಹ್ನ ರಥಬೀದಿಯಲ್ಲಿ ಸ್ವಾಮೀಜಿಯವರು, ಮಠದ ಸಿಬಂದಿ ಉತ್ಸವದ ಮೆರವಣಿಗೆ ನಡೆಸಿದರು. ಒಂದು ಕಂಸನ ವೇಷ, ಒಂದು ಪುರಂದರ ದಾಸರ ವೇಷಗಳು ಮಾತ್ರ ಇದ್ದವು.

ಚಿನ್ನದ ರಥದಲ್ಲಿ ಮಣ್ಣಿನಿಂದ ಮಾಡಿದ ಕೃಷ್ಣನ ವಿಗ್ರಹವನ್ನು ಮತ್ತು ಇನ್ನೊಂದು ರಥದಲ್ಲಿ ಅನಂತೇಶ್ವರ ಮತ್ತು ಚಂದ್ರಮೌಳೀಶ್ವರ ದೇವಸ್ಥಾನಗಳ ಉತ್ಸವ ಮೂರ್ತಿಯನ್ನು ಇರಿಸಿ ಉತ್ಸವ ನಡೆಯಿತು. ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಅದಮಾರು ಮಠದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು. ಒಟ್ಟು 12 ಗುರ್ಜಿಗಳು ಮತ್ತು ಎರಡು ಮಂಟಪಗಳಲ್ಲಿ ತೂಗು ಹಾಕಿದ ಮಡಕೆಗಳನ್ನು ಸಾಂಪ್ರದಾಯಿಕ ಗೋವಳರ ವೇಷ ಹಾಕಿದ ಗೋಶಾಲೆಯ ಸಿಬಂದಿ ಒಡೆಯುತ್ತ ಮುಂದೆ ಸಾಗಿದರು. ಕೊನೆಯಲ್ಲಿ ಕೃಷ್ಣನ ಮಣ್ಣಿನ ವಿಗ್ರಹವನ್ನು ಮಧ್ವಸರೋವರದಲ್ಲಿ ವಿಸರ್ಜಿಸಲಾಯಿತು.

ಪ್ರಸಾದ ವಿತರಣೆ
ಶುಕ್ರವಾರ ಬೆಳಗ್ಗೆ ಉಡುಪಿ ನಗರದ ವಿವಿಧೆಡೆ ಕಾರ್ಯಕರ್ತರು ಕೃಷ್ಣಾಷ್ಟಮಿಯ ಪ್ರಸಾದಗಳನ್ನು ವಿತರಿಸಿದರು. ರಥಬೀದಿಯಲ್ಲಿ ಹಾಕಿದ ಕೌಂಟರ್‌ನಲ್ಲಿ ಪ್ರಸಾದಗಳನ್ನು ವಿತರಿಸಲಾಯಿತು.

ನಿರಂತರ ಮಳೆ
ಶ್ರೀಮದ್ಭಾಗವತ ಪುರಾಣದಲ್ಲಿ ವರ್ಣನೆ ಇರುವಂತೆ ಕೃಷ್ಣನ ಜನನ ವೇಳೆ ಮಾತ್ರವಲ್ಲದೆ ಗುರುವಾರ ಮತ್ತು ಶುಕ್ರವಾರ ನಿರಂತರ ಸಾಮಾನ್ಯ ಮಳೆ ಸುರಿದಿದೆ. ಶುಕ್ರವಾರ ವಿಟ್ಲಪಿಂಡಿ ಉತ್ಸವದ ವೇಳೆಯೂ ನಿರಂತರ ಮಳೆ ಸುರಿಯುತ್ತಿತ್ತು.

ಕೃಷ್ಣಾರ್ಘ್ಯ ಪ್ರದಾನ
ಗುರುವಾರ ಮಧ್ಯರಾತ್ರಿ ಮಹಾಪೂಜೆ ಬಳಿಕ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಕೃಷ್ಣಾಪುರ, ಅದಮಾರು ಹಿರಿಯ, ಕಾಣಿಯೂರು ಶ್ರೀಗಳು ಕೃಷ್ಣಾರ್ಘ್ಯ ಪ್ರದಾನ ಮಾಡಿದರು.

ಬಾಲಕೃಷ್ಣನ ಉತ್ಸವಕ್ಕೆ ಗೋವುಗಳು
ಶ್ರೀಕೃಷ್ಣನಿಗೆ ಪ್ರಿಯವಾದ ದೇಸೀ ಗೋವುಗಳು ವಿಟ್ಲಪಿಂಡಿ ಉತ್ಸವದ ವೇಳೆ ರಥಬೀದಿಯ ಸುತ್ತಲೂ ಕಂಡುಬಂದವು. “ಗೋಪಾಲಕೃಷ್ಣನ ಉತ್ಸವದಲ್ಲಿ ಗೋವುಗಳು’ ಪರಿಕಲ್ಪನೆಯಲ್ಲಿ ಶ್ರೀಕೃಷ್ಣಮಠ ಮತ್ತು ಅದಮಾರು ಮಠದ ಗೋವುಗಳನ್ನು ರಥಬೀದಿಯ ಸುತ್ತಲೂ ಕಟ್ಟಿ ಹಾಕಲಾಗಿತ್ತು. ಗೋವುಗಳ ಸಾಲುಗಳ ನಡುವೆ ಉತ್ಸವದ ಮೆರವಣಿಗೆ ಸಾಗಿತು. ಇಷ್ಟು ವರ್ಷಗಳಂತೆ ಜನ ಜಂಗುಳಿ, ವೇಷಗಳ ಭರಾಟೆ, ತಾಸೆ ವಾದ್ಯಗಳ ಸದ್ದು ಯಾವುದೂ ಇರಲಿಲ್ಲ. ನಾಲ್ಕೂ ಬೀದಿಗಳಲ್ಲಿ ಪೊಲೀಸರು ನಿಯೋಜನೆಗೊಂಡು ಸಾರ್ವಜನಿಕರನ್ನು ಒಳಗೆ ಬಿಡಲಿಲ್ಲ. ಪತ್ರಕರ್ತರು ವಿಶೇಷ ಪಾಸುಗಳನ್ನು ಪಡೆದು ರಥಬೀದಿಗೆ ತೆರಳಿದ್ದರು.

ಟಾಪ್ ನ್ಯೂಸ್

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Malpe: ಡ್ರಗ್ಸ್‌ ಪಾರ್ಸೆಲ್‌ ಹೆಸರಲ್ಲಿ ಬೆದರಿಸಿ 20 ಲ.ರೂ. ವಂಚನೆ

15

Udupi: ಪಾರ್ಟ್‌ ಟೈಮ್ ಜಾಬ್‌ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.