ಲೈಂಗಿಕ ಹಲ್ಲೆ ನಡೆಸಿ, ಬಳಿಕ ತಾನೇ ಕೈ ಕತ್ತರಿಸಿಕೊಂಡ?
Team Udayavani, Sep 12, 2020, 1:10 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಹರ್ಯಾಣದ ಪಾಣಿಪತ್ನಲ್ಲಿ 7 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯೊಬ್ಬ ತನ್ನ ಕೈಗಳನ್ನು ತಾನೇ ಕತ್ತರಿಸಿಕೊಂಡಿರುವ ಅಚ್ಚರಿಯ ಘಟನೆ ನಡೆದಿದೆ.
ಲೈಂಗಿಕ ದೌರ್ಜನ್ಯ ಘಟನೆ ನಡೆದ ಮಾರನೇ ದಿನ ಉತ್ತರಪ್ರದೇಶದ ಸಹರಾನ್ಪುರದ ಇಖ್ಲಾಖ್ ಕೈ ಕತ್ತರಿಸಿಕೊಂಡಿರುವ ಸ್ಥಿತಿಯಲ್ಲಿ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದ್ದ. ಈತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದಾಗ ಆಕೆಯ ಪೋಷಕರು ಬಂದು ಆತನಿಂದ ರಕ್ಷಿಸಿದ್ದರು. ಆಗ ಅವರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಇಖ್ಲಾಖ್, ತನ್ನ ಕೈಯನ್ನು ತಾನೇ ಕತ್ತರಿಸಿಕೊಂಡಿರುವ ಸಾಧ್ಯತೆಯಿದೆ ಎಂದು ಹರ್ಯಾಣ ಪೊಲೀಸರು ಹೇಳಿದ್ದಾರೆ.
ಆದರೆ, ಇಖ್ಲಾಖ್ ಸಹೋದರ, ಇದನ್ನು ನಿರಾಕರಿಸಿದ್ದು ಗ್ರಾಮಸ್ಥರೇ ಇಖ್ಲಾಖ್ನ ಕೈ ಕತ್ತರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಬಾಲಕಿಯ ಪೋಷಕರು ಇಖ್ಲಾಖ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.