ಸಿದ್ದರಾಮಯ್ಯ ಆಗಾಗ ಟ್ವೀಟ್ ಮಾಡದಿದ್ದರೆ ಕಾಂಗ್ರೆಸ್‌ನವರೇ ಮರೆಯುತ್ತಾರೆ: ಸೋಮಶೇಖರ್ ವ್ಯಂಗ್ಯ
Team Udayavani, Sep 12, 2020, 4:03 PM IST
ಮೈಸೂರು: ಪಾಪ ಸಿದ್ದರಾಮಯ್ಯ ಆಗಾಗ ಟ್ವೀಟ್ ಮಾಡದಿದ್ದರೆ ಕಾಂಗ್ರೆಸ್‌ನವರೇ ಅವರನ್ನು ಮರೆತು ಬಿಡುತ್ತಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ತಾನು ವಿರೋಧ ಪಕ್ಷದ ನಾಯಕ ಎಂದು ತೋರಿಸಿಕೊಳ್ಳಲು ಟ್ವೀಟ್ ಮಾಡುತ್ತಾರೆ ಎಂದು ಲೇವಡಿ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಿದ್ದರಾಮಯ್ಯಗೆ ಭಯವಿದೆ. ತನ್ನನ್ನು ಪಕ್ಷದವರೇ ಮರೆಯುತ್ತಾರೆ ಎಂದು ಸಿದ್ದರಾಮಯ್ಯರಿಗೆ ಭಯ ಕಾಡುತ್ತಿದೆ. ಇದೇ ಕಾರಣಕ್ಕೆ ಸಿದ್ದು ಸರಣಿ ಟ್ವೀಟ್ ಮಾಡುತ್ತಿದ್ದಾರೆ ಎಂದು ಕುಟುಕಿದರು.
ಕಾಂಗ್ರೆಸ್ ನಿಂದ ನಿದ್ದೆಯಿಂದ ಎದ್ದೇಳು ಸರ್ಕಾರ ಅಭಿಯಾನ ವಿಚಾರಕ್ಕೆ ಉತ್ತರಿಸಿದ ಅವರು, ನಿದ್ದೆಯಲ್ಲಿರುವವರು ನಾವಲ್ಲ. ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ದಿನಚರಿ ಜನರ ಮುಂದಿಡೋಣ. ಐದು ವರ್ಷದಲ್ಲಿ ಸಿದ್ದರಾಮಯ್ಯ ಮಾಡಿದ್ದು ಏನು? ಯಡಿಯೂರಪ್ಪ ಕೋವಿಡ್ ಕಾಲದಲ್ಲಿ ಮಾಡುತ್ತಿರುವುದು ಏನು ಗೊತ್ತಾಗುತ್ತದೆ. ಯಾರೋ ಬಂದು ತಿವಿದಾಗ ಟ್ವೀಟ್ ಮಾಡುವುದು ಅವರ ಕೆಲಸವಾಗಿದೆ ಎಂದು ಲೇವಡಿ ಮಾಡಿದರು.
ಇದನ್ನೂ ಓದಿ: ನಾನು ಕೊಲಂಬೋಗೆ ಹೋಗಿದ್ದು ಹೌದು, ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ: ಎಚ್ ಡಿಕೆ
ಟ್ವೀಟ್ ಮಾಡುವುದು ವಿರೋಧ ಪಕ್ಷದ ಕೆಲಸವಲ್ಲ. ಸಿದ್ದರಾಮಯ್ಯ ಎಲ್ಲಿ ಟೂರ್ ಮಾಡಿದ್ದಾರೆ ಎಂದು ಪ್ರಶ್ನಿಸಿದ ಸಚಿವರು ಟ್ಬೀಟ್ ಮಾಡುವುದಕ್ಕೆ ವಿರೋಧ ಪಕ್ಷದ ನಾಯಕರಿಗೆ ಸರ್ಕಾರ ಸವಲತ್ತು ಕೊಡಬೇಕಾ ಎಂದರು ಪ್ರಶ್ನಿಸಿದರು.
ಶಾಸಕ ಜಮೀರ್ ಅಹಮದ್ ಗೆ ಪಶ್ಚಾತಾಪ ಕಾಡುತ್ತಿರಬಹುದು. ತಪ್ಪು ಮಾಡದಿದ್ದರೆ ಅಲ್ಪಸಂಖ್ಯಾತರ ಹೆಸರು ಏಕೆ ಬಳಸಬೇಕು. ಈ ದೇಶದಲ್ಲಿ ಹಿಂದೂ ಅಲ್ಪಸಂಖ್ಯಾತ ಎಲ್ಲರಿಗೂ ಒಂದೇ ಕಾನೂನು. ಅವರ ಮೇಲಿನ ಆರೋಪ ಸುಳ್ಳು ಎಂದು ಹೇಳಲಿ. ಅದು ಬಿಟ್ಟು ಪ್ರಚಾರಕ್ಕಾಗಿ ಏನೇನೋ ಹೇಳಿಕೆ ನೀಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.