ಮೈಸೂರು: 25 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ
Team Udayavani, Sep 13, 2020, 3:10 PM IST
ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ತೀವ್ರತೆ ಮುಂದುವರಿದಿದ್ದು, ಶನಿವಾರ 635 ಹೊಸ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗಿದೆ.
ಶನಿವಾರ ದಾಖಲಾದ 637 ಹೊಸ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25,086ಕ್ಕೆ ಏರಿಕೆಯಾಗಿದೆ. ಜತೆಗೆ 565 ಮಂದಿ ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಗುಣಮುಖ ರಾದವರ ಸಂಖ್ಯೆ 17,490ಕ್ಕೆ ಏರಿಕೆಯಾಗಿದೆ.
ಸದ್ಯ ಜಿಲ್ಲೆಯಲ್ಲಿ 7,020 ಮಂದಿ ಸಕ್ರಿಯ ಸೋಂಕಿತರಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 335, ಕೋವಿಡ್ ಹೆಲ್ತ್ ಕೇರ್ ಸೆಂಟರ್ಗಳಲ್ಲಿ 1,074, ಖಾಸಗಿ ಆಸ್ಪತ್ರೆಗಳಲ್ಲಿ 265, ಹೋಂ ಐಸೊಲೇಷನ್ನಲ್ಲಿ 5,272 ಹಾಗೂ ಖಾಸಗಿ ಕೋವಿಡ್ ಕೇರ್ ಸೆಂಟರ್ಗಳಲ್ಲಿ 233 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 1,40,384 ಸ್ಯಾಂಪಲ್ ಪರೀಕ್ಷೆ ಮಾಡಲಾಗಿದೆ. ಸದ್ಯ 51,103 ಮಂದಿ 14 ದಿನಗಳ ಹೋಂ ಕ್ವಾರಂಟೈನ್ನಲ್ಲಿದ್ದಾರೆ. 14 ಮಂದಿ ಸಾವು: ಶನಿವಾರ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 14 ಮಂದಿ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 576ಕ್ಕೆ ಏರಿಕೆಯಾಗಿದೆ. ಮೃತರೆಲ್ಲರೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.