ಮಹಾರಾಷ್ಟ್ರ ಉಸ್ತುವಾರಿ ಯಶಸ್ವಿಯಾಗಿ ನಿಭಾಯಿಸುವೆ : ಎಚ್.ಕೆ. ಪಾಟೀಲ್
Team Udayavani, Sep 13, 2020, 3:27 PM IST
ಬೆಂಗಳೂರು: ಪಕ್ಷದ ಹೈಕಮಾಂಡ್ ನೀಡಿರುವ ಮಹಾರಾಷ್ಟ್ರ ಉಸ್ತುವಾರಿ ಜವಾಬ್ದಾರಿಯನ್ನು ಎಲ್ಲ ನಾಯಕರ ಸಹಕಾರದೊಂದಿಗೆ ಯಶಸ್ವಿಯಾಗಿ ನಿಭಾಯಿಸುವೆ ಎಂದು ಎಐಸಿಸಿ ನೂತನ ಮಹಾರಾಷ್ಟ್ರ ಉಸ್ತುವಾರಿ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಮಹಾರಾಷ್ಟ್ರ ಉಸ್ತುವಾರಿ ಹುದ್ದೆ ತಮಗೆ ನೀಡಿರುವುದಕ್ಕೆ ಪಕ್ಷದ ನಾಯಕರಿಗೆ ಅಭಿನಂದನೆಗಳು.
ಪಕ್ಷ ಗಟ್ಟಿಗೊಳಿಸಲು ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರ ಮಾರ್ಗದರ್ಶನವಿದೆ ಎಂದು ತಿಳಿಸಿದರು.
ಮಹಾರಾಷ್ಟ್ರ ದೊಡ್ಡ ರಾಜ್ಯವಷ್ಟೇ ಅಲ್ಲ, ರಾಜಕೀಯವಾಗಿ ದೇಶದಲ್ಲಿಯೇ ಮಹತ್ವದ ರಾಜ್ಯವಾಗಿದೆ.ಮಹಾರಾಷ್ಟ್ರದಲ್ಲಿ ಸಾಕಷ್ಟು ಸವಾಲುಗಳಿವೆ. ತಮಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ನ ಗತವೈಭವ ಸ್ಥಾಪಿಸಲು ಪ್ರಯತ್ನಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಈ ಬಾರಿ ಎಐಸಿಸಿಯಲ್ಲಿ ರಾಜ್ಯಕ್ಕೆ ಹೆಚ್ಚು ಮಹತ್ವ ಸಿಕ್ಕಿದೆ.
ಕರ್ನಾಟಕದ ಐವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಅವಕಾಶ ಸಿಕ್ಕಿದೆ. ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್‌ಗೆ ಬಂದು ಪಕ್ಷದಲ್ಲಿ ಹಲವು ಸ್ಥಾನಮಾನಗಳನ್ನು ಪಡೆದಿರುವ ನನಗೆ ಮಹಾರಾಷ್ಟ್ರದ ಜವಾಬ್ದಾರಿ ನೀಡಲಾಗಿದೆ. ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಅಲ್ಲಿ ಉಸ್ತುವಾರಿಯಾಗಿದ್ದರು. ಹೀಗಾಗಿ ಅದರ ಲಾಭವೂ ಸಿಗಲಿದೆ. ಖರ್ಗೆಯವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸುವುದಾಗಿ ಹೇಳಿದರು.
ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಡ್ರಗ್ ಮಾಫಿಯಾದಲ್ಲಿ ಜಮೀರ್ ಅಹ್ಮದ್ ಖಾನ್ ವಿರುದ್ಧ ಆರೋಪವನ್ನು ತಳ್ಳಿಹಾಕಿದ ಅವರು, ಜಮೀರ್ ಅಹ್ಮದ್ ಖಾನ್ ವಿರುದ್ಧದ ಆರೋಪ ಸಾಬೀತಾದರೆ ಪೂರ್ತಿ ಆಸ್ತಿಯನ್ನೇ ಸರ್ಕಾರಕ್ಕೆ ಕೊಡುವುದಾಗಿ ಹೇಳಿದ್ದಾರೆ ಎಂದು ಜಮೀರ್ ಅಹಮದ್ ಖಾನರನ್ನು ಸಮರ್ಥಿಸಿಕೊಂಡರು.
ಅಲ್ಲದೇ ಈ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದರು. ಬಿಐಇಸಿಯನ್ನು ಮುಚ್ಚುವ ಪ್ರಯತ್ನ ಸರ್ಕಾರ ನಡೆಸಿದೆ.ಇದಕ್ಕೆ ತಾವೇ ಮೊದಲ ದೂರುದಾರನಾಗಿದ್ದು, ಸರ್ಕಾರದ ಕೊರೊನಾ ಹಗರಣ ವಿರುದ್ಧ ದೂರಿದ್ದೇನೆ.
ಕೊರೊನಾದಿಂದ ಮೃತಪಟ್ಟವರನ್ನು ಅಮಾನವೀಯವಾಗಿ ನಡೆದುಕೊಳ್ಳುವುದರ ವಿರುದ್ಧ ಮತ್ತು ಆಸ್ಪತ್ರೆಯಲ್ಲಿ ಕೊರೊನಾ
ಸೋಂಕಿತರೊಂದಿಗೆ ನಡೆದುಕೊಳ್ಳುತ್ತಿರುವ ದುರ್ವರ್ತನೆ ಖಂಡಿಸಿ ಮಾನವ ಹಕ್ಕುಗಳ ಆಯೋಗದ ಗಮನಕ್ಕೂ ತರಲಾಗಿದೆ.
ಕೊರೊನಾದಿಂದ ನಿಜವಾಗಿಯೂ ತಪಟ್ಟವರೆಷ್ಟು ಎಂಬ ಬಗ್ಗೆ ಸರ್ಕಾರ ಸರಿಯಾದ ಮಾಹಿತಿ ನೀಡಬೇಕು. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಚುರುಕಾಗಿ ಕೆಲಸ ಮಾಡಬೇಕು. ಕೊರೊನಾ ಸೋಂಕಿತರ ಸಂಖ್ಯೆ ಕರ್ನಾಟಕದಲ್ಲಿಯೇ ಹೆಚ್ಚಾಗಿದೆ.
ರಾಜ್ಯ ಸರ್ಕಾರದ ಕೊರೊನಾ ಅಂಕಿ ಸಂಖ್ಯೆಗಳು ಕುತೂಹಲ ಮೂಡಿಸಿದೆ. ಶ್ವಾಸಕೋಶದ ಸಮಸ್ಯೆಗಳಿಂದಲೇ ಶೇ.8.5 ರಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ಆದರೆ, ಸರ್ಕಾರದ ಈ ಅಂಕಿಅಂಶ ಸತ್ಯಕ್ಕೆ ದೂರವಾಗಿದ್ದು, ಸರ್ಕಾರ ಜನರಿಗೆ ತಪ್ಪು ಮಾಹಿತಿ ರವಾನಿಸುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.