“ಸಾಲ ವಿತರಣೆಯಲ್ಲಿ ರಾಜಕಾರಣ ಮಾಡುತ್ತಿಲ್ಲ’
Team Udayavani, Sep 13, 2020, 4:13 PM IST
ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಯಲ್ಲಿ ರೈತರು ಮತ್ತು ಮಹಿಳಾ ಸಬಲೀಕರಣಕ್ಕೆ ಡಿಸಿಸಿ ಬ್ಯಾಂಕ್‌ನಿಂದ ಉತ್ತೇಜನ ನೀಡುತ್ತಿದ್ದೇವೆ ಹೊರತು ರಾಜಕಾರಣ ಮಾಡುತ್ತಿಲ್ಲ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.
ನಗರದ ಡಿಸಿಸಿ ಬ್ಯಾಂಕ್‌ಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತತ ಬರಗಾಲದಿಂದ ತತ್ತರಿಸುತ್ತಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರಜಿಲ್ಲೆಯಲ್ಲಿ ಶ್ರಮಜೀವಿಗಳಾದ ರೈತರು ಮತ್ತು ಮಹಿಳಾ ಸ್ವಸಹಾಯ ಸಂಘಗಳಿಗೆ ಅವರ ಸಾಧನೆ ಮತ್ತು ಕಾರ್ಯವೈಖರಿ ಪರಿಗಣಿಸಿ ಪಕ್ಷಾತೀತ ಮತ್ತು ಜಾತ್ಯತೀತವಾಗಿ ಸಾಲ ಸೌಲಭ್ಯ ನೀಡುತ್ತಿದ್ದೇವೆ ಎಂದರು.
ಕೇಂದ್ರ, ರಾಜ್ಯ ಸರ್ಕಾರಗಳ ಮಾರ್ಗಸೂಚಿ, ಆರ್‌ಬಿಐ ಬ್ಯಾಂಕ್‌ನ ಮಾನದಂಡ ಪಾಲಿಸುವ ಡಿಸಿಸಿ ಬ್ಯಾಂಕ್‌ನಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯನೀಡುತ್ತಿದ್ದೇವೆ. ಮಹಿಳಾಸ್ವಸಹಾಯ ಸಂಘಗಳು ಬ್ಯಾಂಕ್‌ನಲ್ಲಿ ನಡೆಸಿರುವ ವಹಿವಾಟು-ಉಳಿತಾಯ ಮೊತ್ತ ಮತ್ತು ನಿಯಮಾವಳಿ ಪ್ರಕಾರ ಸಭೆಗಳನ್ನು ನಡೆಸಿರುವುದನ್ನು ಗಮನಿಸಿ ಸಾಲ ಸೌಲಭ್ಯ ನೀಡುತ್ತಿದ್ದೇವೆ. ಸಂಘಗಳ ಉಳಿತಾಯ ಮೊತ್ತದಲ್ಲಿ ಷೇರು ಕಟ್ಟಿಕೊಂಡು ಅವರಿಗೆ ಬಾಂಡ್ ನೀಡುತ್ತಿದ್ದೇವೆ. ಸಾಲ ಮರು ಪಾವತಿಯಾದ ಬಳಿಕ ಅವರ ಹಣವನ್ನು ವಾಪಸ್ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.
100 ಕೋಟಿ ಷೇರುಹಣ ಕೊಡಿಸಲಿ: ಡಿಸಿಸಿ ಬ್ಯಾಂಕ್‌ನಲ್ಲಿ 109.49 ಕೋಟಿ ಷೇರು ಮೊತ್ತವಿದೆ. ಜೊತೆಗೆ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾ ಕರ್ ಅವರು ರಾಜ್ಯ ಸರ್ಕಾರದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ಹೀಗಾಗಿ ಸರ್ಕಾರದಿಂದ 100 ಕೋಟಿ ರೂ.ಗಳ ಷೇರು ಹಣ ಪಾವತಿಸಿದರೆ ಮಹಿಳಾ ಸ್ವಸಹಾಯ ಸಂಘಗಳಿಂದಉಳಿತಾಯಮೊತ್ತದಲ್ಲಿ ಷೇರು ಕಟ್ಟಿಸಿಕೊಳ್ಳುವ ಪದ್ಧತಿ ನಿಲ್ಲಿಸಲು ಅನುಕೂಲವಾಗುತ್ತದೆ.
ಜೊತೆಗೆ ಮಹಿಳಾ ಸಂಘಗಳಿಗೆ ನೀಡಿರುವ ಸಾಲದ ಮೇಲಿನ 40 ಕೋಟಿ ರೂ. ಬಡ್ಡಿ ಹಣ ಕೇಂದ್ರ ಸರ್ಕಾರದಿಂದ ಪಾವತಿಯಾಗಬೇಕಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಮುಖ್ಯಮಂತ್ರಿ ಬಳಿ ಚರ್ಚಿಸಿ ಬಡ್ಡಿ ಹಣ ಬಿಡುಗಡೆಮಾಡಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಮೋಹನ್‌ರೆಡ್ಡಿ, ಕೆ.ಎಸ್.ದ್ಯಾವಪ್ಪ, ಬಿ.ಆರ್.ಅಶ್ವತ್ಥಪ್ಪ, ಬ್ಯಾಂಕ್‌ನ ವ್ಯವಸ್ಥಾಪಕಿ ಜ್ಯೋತಿ, ಮೇಲ್ವಿಚಾರಕಿ ವಸಂತ ಹಾಗೂ ಬ್ಯಾಂಕ್‌ನ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.